ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನು ಮುಂದೆ ಕೊರೊನಾ ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿಗೆ ಅವಕಾಶ

|
Google Oneindia Kannada News

ನವದೆಹಲಿ, ಮೇ 24: ಕೊರೊನಾ ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕೊರೊನಾ ಲಸಿಕೆ ವ್ಯರ್ಥವಾಗುವುದನ್ನು ತಡೆಯಲು ಹಾಗೂ ಸ್ಮಾರ್ಟ್‌ಫೋನ್, ಇಂಟರ್‌ನೆಟ್ ಇಲ್ಲದವರಿಗೆ ನೆರವಾಗಲು 18-44ರ ವಯೋಮಾನದವರಿಗೆ ವಾಕ್ ಇನ್ ನೋಂದಣಿಗೆ ಅವಕಾಶ ನೀಡಿರುವುದಾಗಿ ತಿಳಿಸಿದೆ.

ಕೆಲವರಲ್ಲಿ ಸ್ಮಾರ್ಟ್‌ಫೋನ್ ಹಾಗೂ ಇಂಟರ್‌ನೆಟ್ ಸೌಲಭ್ಯವಿಲ್ಲದ ಕಾರಣ, ಸ್ಥಳಕ್ಕೇ ಬಂದು ಕೋವಿನ್ ಆಪ್‌ನಲ್ಲಿ ನೋಂದಣಿಯಾಗಲು ಸಹಾಯ ಪಡೆಯಬಹುದು ಎಂದು ತಿಳಿಸಿದೆ.

ಕೊರೊನಾ ಲಸಿಕೆ ವಿಷಯದಲ್ಲಿ ಭಾರತ ಮಾಡಿದ ಎಡವಟ್ಟೇನು?; ಸೋಂಕು ತಜ್ಞರ ಉತ್ತರಕೊರೊನಾ ಲಸಿಕೆ ವಿಷಯದಲ್ಲಿ ಭಾರತ ಮಾಡಿದ ಎಡವಟ್ಟೇನು?; ಸೋಂಕು ತಜ್ಞರ ಉತ್ತರ

ಲಸಿಕೆ ಪಡೆದುಕೊಳ್ಳಲು ಆನ್‌ ಲೈನ್ ಮೂಲಕ ನೋಂದಣಿ ಮಾಡಿಕೊಂಡವರು ಬರದೇ ಇದ್ದ ಪಕ್ಷದಲ್ಲಿ ಲಸಿಕೆ ವ್ಯರ್ಥವಾಗುವುದನ್ನು ತಡೆಯಲು ಈ ಕ್ರಮ ನೆರವಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮುನ್ನ ಆನ್‌ ಲೈನ್ ನಲ್ಲಿ ನೋಂದಾಯಿಸಿಕೊಂಡು ಲಸಿಕೆ ಪಡೆಯಲು ಅವಕಾಶ ನೀಡಲಾಗಿತ್ತು. ಲಸಿಕಾ ಕೇಂದ್ರಗಳಲ್ಲಿ ಹೆಚ್ಚು ಜನ ಒಂದೆಡೆ ಸೇರುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿತ್ತು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Centre Nod For On Site Registration To Covid Vaccination For Those Above 18

ಸ್ಥಳದಲ್ಲೇ ನೋಂದಣಿಗೆ ಅವಕಾಶ ಕೊಡಬೇಕೆ ಬೇಡವೇ ಎಂಬುದು ಕೇಂದ್ರಾಡಳಿತ ಹಾಗೂ ರಾಜ್ಯ ಸರ್ಕಾರಗಳ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಇದು ಲಸಿಕೆ ವ್ಯರ್ಥವಾಗುವುದನ್ನು ತಡೆಯುವ ಕೇಂದ್ರದ ಕ್ರಮವಷ್ಟೆ ಎಂದು ಸ್ಪಷ್ಟಪಡಿಸಿದೆ. ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆ ಆರಂಭಿಸಿದ ನಂತರ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜನಸಂದಣಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ.

ಈಚೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಲಸಿಕೆಗಳು ವ್ಯರ್ಥವಾಗುತ್ತಿರುವುದರ ಕುರಿತು ಉಲ್ಲೇಖಿಸಿದ್ದರು. ಲಸಿಕೆ ಜೀವಹನಿ. ಅದು ವ್ಯರ್ಥವಾಗುವುದನ್ನು ತಡೆಯಬೇಕು. ಸೂಕ್ತವಾಗಿ ಬಳಕೆ ಮಾಡಬೇಕು ಎಂದಿದ್ದರು.

ದೇಶದಲ್ಲಿ ಕೊರೊನಾ ಸೋಂಕಿನ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 125 ದಿನಗಳಲ್ಲಿ 19,49,51,603 ಫಲಾನುಭವಿಗಳಿಗೆ ಕೊರೊನಾ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೊರೊನಾ ಹರಡುವಿಕೆ ತಡೆಯಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

English summary
Centre allows on site registration for those above the age of 18 at government vaccination centres
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X