ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲು ಓದಿ: ಭಾರತದಲ್ಲಿ ಉಚಿತ ಕೊರೊನಾ ಲಸಿಕೆ ತೆಗೆದುಕೊಳ್ಳುವ ಮುನ್ನ ತಿಳಿಯಿರಿ

|
Google Oneindia Kannada News

ನವದೆಹಲಿ, ಜೂನ್ 08: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಉತ್ಪಾದನೆ ಕೊರತೆ ನಡುವೆಯೂ ಪ್ರತಿಯೊಬ್ಬರ ಪ್ರಜೆಗೆ ಉಚಿತವಾಗಿ ಲಸಿಕೆಯನ್ನು ವಿತರಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೋಷಿಸಿದೆ.

ದೇಶಾದ್ಯಂತ ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಕೊವಿಡ್-19 ಲಸಿಕೆಯನ್ನು ಉಚಿತವಾಗಿ ನೀಡುವುದಕ್ಕೆ ಕಾರ್ಯಯೋಜನೆ ರೂಪಿಸಲಾಗಿದೆ. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರವೇ ಲಸಿಕೆ ಪೂರೈಕೆ ಮಾಡಲಿದೆ.

ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ "143": ಭಾರತದಲ್ಲಿ ಹೇಗಿದೆ ಲೆಕ್ಕಾಚಾರ!?

ಕೊರೊನಾವೈರಸ್ ಲಸಿಕೆ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಮಾಡಲಾಗುವುದು. ದೇಶದಲ್ಲಿ ಶೇ.75ರಷ್ಟು ಕೊವಿಡ್-19 ಲಸಿಕೆಯನ್ನು ಕೇಂದ್ರ ಸರ್ಕಾರದಿಂದಲೇ ಉಚಿತವಾಗಿ ಪೂರೈಕೆ ಮಾಡಲಾಗುವುದು. ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಪ್ರಮಾಣದ ಲಸಿಕೆಯನ್ನು ಖರೀದಿಸಿ ವಿತರಣೆ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಲಸಿಕೆಯ ದರ ಮೇಲೆ ಹೆಚ್ಚುವರಿಯಾಗಿ ಕೇವಲ 150 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ನಿರ್ಬಂಧಿಸಲಾಗಿದೆ.

18-44 ವರ್ಷದ 3.04 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ18-44 ವರ್ಷದ 3.04 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿರುವ ಅಂಶಗಳು. ದೇಶದಲ್ಲಿ ಲಸಿಕೆ ವಿತರಣೆ ಹಂತಗಳು, ಎಷ್ಟು ಫಲಾನುಭವಿಗಳಿಗೆ ಈವರೆಗೂ ಲಸಿಕೆ ನೀಡಲಾಗಿದೆ ಎಂಬ ಎಲ್ಲಾ ಅಂಷಗಳನ್ನು ಈ ವರದಿಯಲ್ಲಿ ತಿಳಿದುಕೊಳ್ಳಿ.

ಕೊವಿಡ್-19 ಲಸಿಕೆಗೆ ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

ಕೊವಿಡ್-19 ಲಸಿಕೆಗೆ ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

* ದೇಶದಲ್ಲಿ ಶೇ.75ರಷ್ಟು ಕೊರೊನಾವೈರಸ್ ಲಸಿಕೆಯನ್ನು ಉತ್ಪಾದಿಸಲಾಗುತ್ತದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ ಲಸಿಕೆ ಪೂರೈಸಲಾಗುತ್ತದೆ. ರಾಷ್ಟ್ರೀಯ ಲಸಿಕೆ ವಿತರಣೆ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರದ ಲಸಿಕೆ ಕೇಂದ್ರಗಳಲ್ಲಿ ಎಲ್ಲ ಅರ್ಹ ಪ್ರಜೆಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು.

* ಭಾರತೀಯ ಸರ್ಕಾರವು ರಾಜ್ಯಗಳಲ್ಲಿ ನಿಗದಿತ ಮಾನದಂಡಗಳ ಅಡಿಯಲ್ಲಿ ಆದ್ಯತೆಗಳ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು. ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾವೈರಸ್ ಲಸಿಕೆ ನೀಡಲಾಗುವುದು.

* 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸುವುದಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಮಾನದಂಡ ಹಾಗೂ ಆದ್ಯತೆಗಳನ್ನು ನಿರ್ಧರಿಸಬಹುದು.

* ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನಸಂಖ್ಯೆ, ಕೊರೊನಾವೈರಸ್ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಕೇಂದ್ರ ಸರ್ಕಾರದಿಂದ ಲಸಿಕೆಯನ್ನು ವಿತರಿಸಲಾಗುತ್ತದೆ. ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಿರುವ ಪ್ರಮಾಣವು ಲಸಿಕೆ ಹಂಚಿಕೆ ಮೇಲೆ ಪರಿಣಾಮ ಬೀರಲಿದೆ.

* ಕೇಂದ್ರ ಸರ್ಕಾರದಿಂದ ಎಷ್ಟು ಪ್ರಮಾಣದ ಕೊರೊನಾವೈರಸ್ ಲಸಿಕೆ ಸರಬರಾಜು ಮಾಡಲಾಗುವುದು ಎಂಬುದನ್ನು ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಈ ಮಾಹಿತಿ ಅನ್ವಯ ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಮಟ್ಟದಿಂದ ಗ್ರಾಮೀಣ ಮಟ್ಟದವರೆಗೂ ಲಸಿಕೆ ವಿತರಣೆ ಪ್ರಮಾಣವನ್ನು ನಿಗದಿಗೊಳಿಸಬೇಕು. ಪ್ರತಿಯೊಂದು ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುವ ಲಸಿಕೆ ಪ್ರಮಾಣ ಮತ್ತು ವಿತರಣೆ ರೀತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಕಡ್ಡಾಯ.

* ಕೊರೊನಾವೈರಸ್ ಲಸಿಕೆ ಉತ್ಪಾದಕ ಕಂಪನಿಗಳಿಗೆ ಉತ್ತೇಜಿಸುವ ಉದ್ದೇಶದಿಂದ ದೇಶೀಯ ಲಸಿಕೆ ಉತ್ಪಾದನಾ ಕೇಂದ್ರಗಳು ಒಂದು ತಿಂಗಳ ಅವಧಿಯಲ್ಲಿ ಉತ್ಪಾದಿಸುವ ಲಸಿಕೆಯ ಶೇ.25ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. ದೊಡ್ಡ ಮತ್ತು ಸಣ್ಣ ಪ್ರಮಾಣದ ಖಾಸಗಿ ಆಸ್ಪತ್ರೆಗಳು ಹಾಗೂ ಪ್ರಾದೇಶಿಕ ಸಮತೋಲನದ ನಡುವೆ ಸಮನಾದ ವಿತರಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಖಾಸಗಿ ಆಸ್ಪತ್ರೆಗಳ ಬೇಡಿಕೆ ಹಿನ್ನೆಲೆ ಲಸಿಕೆ ಪೂರೈಕೆಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ಸಣ್ಣ ಮತ್ತು ದೂರದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಯನ್ನು ಸಮಯೋಚಿತವಾಗಿ ಪೂರೈಸಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಪ್ರಾದೇಶಿಕ ಸಮತೋಲನ ಸಾಧಿಸಲು ಸಾಧ್ಯವಾಗುತ್ತದೆ.

* ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಪ್ರತಿ ಡೋಸ್ ಲಸಿಕೆಯ ಬೆಲೆಯನ್ನು ಉತ್ಪಾದಕ ಕಂಪನಿಗಳೇ ನಿರ್ಧರಿಸಲಿವೆ. ಒಂದು ವೇಳೆ ಲಸಿಕೆ ಬೆಲೆಯಲ್ಲಿ ವ್ಯತ್ಯಾಸವಾದರೆ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್-19 ಲಸಿಕೆ ನೀಡುವುದಕ್ಕೆ ಗರಿಷ್ಠ 150 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.

* ದೇಶದ ಪ್ರತಿಯೊಬ್ಬ ಪ್ರಜೆಯು ತನ್ನ ಆದಾಯದ ಪ್ರಮಾಣ ಮತ್ತು ಮೊತ್ತವನ್ನು ಲೆಕ್ಕಿಸದೇ ಎಲ್ಲರೂ ಉಚಿತವಾಗಿ ಲಸಿಕೆ ಪಡೆದುಕೊಳ್ಳುವುದಕ್ಕೆ ಅರ್ಹರಾಗಿರುತ್ತಾರೆ. ಲಸಿಕೆ ಪಡೆಯಲು ಹಣ ಪಾವತಿಸುವ ಸಾಮರ್ಥ್ಯ ಹೊಂದಿರುವವರು ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್-19 ಲಸಿಕೆ ಪಡೆದುಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

* ಖಾಸಗಿ ಲಸಿಕೆ ವಿತರಣೆ ಕೇಂದ್ರಗಳಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ವರ್ಗವನ್ನು ಉತ್ತೇಜಿಸುವುದಕ್ಕಾಗಿ "ಲೋಕ ಕಲ್ಯಾಣ್" ಎಂಬ ಕಾರ್ಯಯೋಜನೆ ರೂಪಿಸಲಾಗಿದೆ. ಖಾಸಗಿ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವವರಿಗೆ ಪುನಃ ಪಡೆದುಕೊಳ್ಳಬಹುದಾದ ಹಾಗೂ ವರ್ಗಾವಣೆ ಮಾಡಲಾಗದ ಎಲೆಕ್ಟ್ರಾನಿಕ್ ವೋಚರ್‌ಗಳನ್ನು ನೀಡಲಾಗುತ್ತಿದೆ.

* ಕೊವಿನ್ ಅಪ್ಲಿಕೇಶನ್ ಮೂಲಕ ಪ್ರತಿಯೊಬ್ಬರು ಲಸಿಕೆ ಕೇಂದ್ರಗಳಲ್ಲಿ ಲಸಿಕೆಗಾಗಿ ಪೂರ್ವ ನೋಂದಣಿ ಮಾಡಿಕೊಳ್ಳುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ವಯಸ್ಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಲಸಿಕೆ ಪಡೆದುಕೊಳ್ಳುವುದಕ್ಕೆ ದಿನಾಂಕ ನಿಗದಿಗೊಳಿಸುವುದಕ್ಕೆ ಸಾಧ್ಯವಾಗುತ್ತದೆ. ಈ ಅಪ್ಲಿಕೇಷನ್ ನಲ್ಲಿ ಎಲ್ಲ ಲಸಿಕೆ ಕೇಂದ್ರಗಳು ಮತ್ತು ಲಸಿಕೆಯ ಲಭ್ಯತೆಯ ಬಗ್ಗೆ ಮಾಹಿತಿಯನ್ನು ಒಳಗೊಂಡಿರುತ್ತದೆ.

* ನಾಗರಿಕರು ಮೊದಲೇ ಕಾಯ್ದಿರಿಸಲು ಅನುಕೂಲವಾಗುವಂತೆ ರಾಜ್ಯಗಳು ಸಾಮಾನ್ಯ ಸೇವಾ ಕೇಂದ್ರಗಳು ಮತ್ತು ಸಹಾಯವಾಣಿ ಕೇಂದ್ರಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಬಹುದು.

ದೇಶದಲ್ಲಿ ಮೂರು ಹಂತಗಳಲ್ಲಿ ಲಸಿಕೆ ವಿತರಣೆ

ದೇಶದಲ್ಲಿ ಮೂರು ಹಂತಗಳಲ್ಲಿ ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

1.29 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

1.29 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 143 ದಿನಗಳಲ್ಲಿ 23,61,98,726 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 31,04,989 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 27,97,493 ಜನರಿಗೆ ಮೊದಲ ಡೋಸ್ ಹಾಗೂ 3,07,496 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಭಾರತದಲ್ಲಿ ಈವರೆಗೂ 99,81,949 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,76,906 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,62,99,343 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 86,96,391 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,18,38,338 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,14,36,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,09,90,200 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,93,37,311 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 86,498 ಜನರಿಗೆ ಕೊರೊನಾವೈರಸ್

ಕಳೆದ 24 ಗಂಟೆಗಳಲ್ಲಿ 86,498 ಜನರಿಗೆ ಕೊರೊನಾವೈರಸ್

ದೇಶದಲ್ಲಿ ಒಂದೇ ದಿನ 86,498 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2123 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು 2,89,96,473 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,73,41,462 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,51,309 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 13,03,702 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
National COVID Vaccination Programme From June 21: Here’s all you need to know about the revised guidelines issued by the Centre for the National COVID Vaccination Drive. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X