ದೇಶದಲ್ಲಿ ಒಂದೇ ದಿನ 1,490 ಕೊರೊನಾ ಪಾಸಿಟಿವ್ ಪ್ರಕರಣ

ನವದೆಹಲಿ,ಏಪ್ರಿಲ್ 25: ಭಾರತದಲ್ಲಿ ಒಂದೇ ದಿನದಲ್ಲಿ 1490 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರ ಗಡಿಯತ್ತ ಸಾಗಿದೆ. ಇಂದು ದೇಶದಲ್ಲಿ ಕೊರೋನಾ ವೈರಸ್ ಗೆ ಒಟ್ಟು 56 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ಪೈಕಿ 18 ಮಂದಿ ಮಹಾರಾಷ್ಟ್ರದಲ್ಲಿ, 15 ಮಂದಿ ಗುಜರಾತ್ ನಲ್ಲಿ, 9 ಮಂದಿ ಮಧ್ಯ ಪ್ರದೇಶದಲ್ಲಿ, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಮೂರು ಮಂದಿ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ ತಲಾ ಇಬ್ಬರು ಮತ್ತು ಪಂಜಾಬ್ ಮತ್ತು ಕೇರಳದಲ್ಲಿ ತಲಾ ಒಬ್ಬ ಸೋಂಕಿತರು ಸಾವನ್ನಪ್ಪಿದ್ದಾರೆ.

corona

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 56 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 779ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

24,942 ಪ್ರಕರಣಗಳ ಪೈಕಿ ಈವರೆಗೂ 5,209 ಮಂದಿ ಸೋಂಕಿತರು ಗುಣಮುಖರಾಗಿದ್ದು, 18,953 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 111 ಮಂದಿ ವಿದೇಶಿ ಪ್ರಜೆಗಳು ಸೇರಿದ್ದಾರೆ ಎನ್ನಲಾಗಿದೆ. ದೇಶದಲ್ಲಿ ಕೊರೋನಾ ವೈರಸ್ ನಿಂದ ಗುಣಮುಖರಾದವರ ಪ್ರಮಾಣ ಶೇ.20.88ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ಗೆ ಮಹಾರಾಷ್ಟ್ರದಲ್ಲಿ ಗರಿಷ್ಠ ಸಾವು ಸಂಭವಿಸಿದ್ದು, ಕೊರೋನಾಗೆ ಬಲಿಯಾದವರ ಸಂಖ್ಯೆ ಇಲ್ಲಿ 301ಕ್ಕೆ ಏರಿಕೆಯಾಗಿದೆ. ಅಂತೆಯೇ ಗುಜರಾತ್ ನಲ್ಲಿ 127, ಮಧ್ಯ ಪ್ರದೇಶದಲ್ಲಿ 92,ದೆಹಲಿಯಲ್ಲಿ 53, ಆಂಧ್ರ ಪ್ರದೇಶದಲ್ಲಿ 31 ಮತ್ತು ರಾಜಸ್ಥಾನದಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ಉತ್ತರ ಪ್ರದೇಶ, ತೆಲಂಗಾಣದಲ್ಲಿ ತಲಾ 26, ತಮಿಳುನಾಡಿನಲ್ಲಿ 22, ಕರ್ನಾಟಕ, ಪಶ್ಚಿಮ ಬಂಗಾಳದಲ್ಲಿ ತಲಾ 18, ಪಂಜಾಬ್ ನಲ್ಲಿ 17, ಜಮ್ಮು ಮತ್ತು ಕಾಶ್ಮೀರದಲ್ಲಿ ಐದು, ಕೇರಳ ನಾಲ್ಕು, ಜಾರ್ಖಂಡ್ ಮತ್ತು ಹರಿಯಾಣದಲ್ಲಿ ತಲಾ ಮೂರು, ಬಿಹಾರದಲ್ಲಿ 2, ಮೇಘಾಲಯ, ಹಿಮಾಚಲ ಪ್ರದೇಶ, ಒಡಿಶಾ ಮತ್ತು ಅಸ್ಸಾಂನಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+