ಲಡಾಖ್‌ನಲ್ಲಿ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧ
ನವದೆಹಲಿ, ಆಗಸ್ಟ್ 31: ಲಡಾಖ್‌ನಲ್ಲಿ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ಯಾಂಗೋಂಗ್ ಟ್ಸೋ ಸರೋವರದ ಭಾಗದಲ್ಲಿ ಚೀನೀ ಸೈನಿಕರಿಂದ ಈ ಚಟುವಟಿಕೆ ನಡೆಯಬಹುದು ಎಂದು ಭಾರತದ ಪಡೆಗಳು ಮೊದಲೇ ಅಂದಾಜು ಮಾಡಿದ್ದವು.
ಹಾಗಾಗಿ, ನಮ್ಮ ಸೇನಾ ನಿಯೋಜನೆ ಹೆಚ್ಚಿಸಿದೆವು. ಗಡಿ ಯಥಾಸ್ಥಿತಿಯನ್ನು ಮಾರ್ಪಾಡು ಮಾಡುವ ಚೀನಾ ದುರುದ್ದೇಶವನ್ನು ವಿಫಲಗೊಳಿಸಲಾಯಿತು. ಮಾತುಕತೆ ಮೂಲಕ ಶಾಂತಿ ಕಾಪಾಡಲು ಭಾರತದ ಸೇನೆ ಬದ್ಧವಾಗಿದೆ. ಆದರೆ, ತನ್ನ ಭೂಪ್ರದೇಶದ ರಕ್ಷಣೆಗೂ ಅಷ್ಟೇ ಕಟಿಬದ್ಧವಾಗಿದೆ.
ಚುಶುಲ್ ಪ್ರದೇಶದಲ್ಲಿ ಎರಡೂ ದೇಶಗಳ ಸೇನಾಪಡೆಗಳ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಫ್ಲಾಗ್ ಮೀಟಿಂಗ್ ನಡೆಯುತ್ತಿದ್ದು, ಇದರಲ್ಲಿ ಈ ವಿಚಾರಗಳನ್ನ ಚರ್ಚಿಸಲಾಗುತ್ತಿದೆ" ಎಂದು ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೊಟ್ಟ ಮಾತನ್ನು ತಪ್ಪಿ ತನ್ನ ಸೇನೆಯನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಚೀನಾ ಮತ್ತೆ ತನ್ನ ವರಸೆಯನ್ನು ಶುರು ಮಾಡಿದೆ. ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಭಾರತದ ಭಾಗವನ್ನು ಅತಿಕ್ರಮಿಸಿ ಭಾರತೀಯ ಸೈನಿಕರ ಮೇಲೆಯೇ ಅಮಾನುಷ ಹಲ್ಲೆ ಎಸಗಿದ ಘಟನೆ ನಡೆದು ಎರಡು ತಿಂಗಳೂ ಕಳೆದಿಲ್ಲ ಅದಾಗಲೇ ಚೀನಾ ಮತ್ತೆ ಅತಿಕ್ರಮಣಕ್ಕೆ ಪ್ರಯತ್ನಿಸಿರುವ ವಿಚಾರ ಬೆಳಕಿಗೆ ಬಂದಿದೆ.
ಗಲ್ವನ್ ಸಂಘರ್ಷದ ಬಳಿಕ ಎರಡೂ ಕಡೆಯವರು ಒಪ್ಪಿಕೊಂಡಿದ್ದ ಯಥಾಸ್ಥಿತಿಯನ್ನು ಚೀನಾ ಮುರಿದಿದೆ. ಆಗಸ್ಟ್ 29-30ರ ದಿನದಂದು, ಅಂದರೆ ಶುಕ್ರವಾರ ರಾತ್ರಿ ಪಾಂಗೋಂಗ್ ಟ್ಸೋ ಸರೋವರದ ದಕ್ಷಿಣ ಭಾಗದಲ್ಲಿ ಚೀನಾದ ಪಿಎಲ್ಎ ಸೈನಿಕರು ಅತಿಕ್ರಮಣಕ್ಕೆ ಮುಂದಾಗಿದ್ದರೆನ್ನಲಾಗಿದೆ. ಇದನ್ನು ಮೊದಲೇ ಊಹಿಸಿದ್ದ ಭಾರತದ ಭದ್ರತಾ ಪಡೆಗಳು ತತ್ಕ್ಷಣವೇ ಜಾಗೃತಗೊಂಡು ಚೀನೀ ಸೈನಿಕರನ್ನು ಹಿಮ್ಮೆಟ್ಟಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ.
ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಭಾರತ-ಚೀನಾ ಸೈನಿಕರ ಘರ್ಷಣೆಯ ಬಳಿಕ ತಕ್ಷಣ ಭಾರತೀಯ ನೌಕಾಪಡೆ ದಕ್ಷಿಣ ಚೀನಾ ಸಮುದ್ರದಕ್ಕೆ ಪ್ರಮುಖ ಯುದ್ಧ ನೌಕೆಯನ್ನು ಕಳಿಸಿತ್ತು ಎಂದು ಮೂಲಗಳು ತಿಳಿಸಿವೆ. ಭಾರತದ ಈ ನಡೆಗೆ ಚೀನಾ ದ್ವಿಪಕ್ಷೀಯ ಮಾತುಕತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು ಎನ್ನಲಾಗಿದೆ.
2009ರಿಂದ ಕೃತಕ ದ್ವೀಪಗಳು ಹಾಗೂ ಸೇನೆಯ ನಿಯೋಜನೆ ಮೂಲಕ ತನ್ನ ಅಸ್ತಿತ್ವವನ್ನು ಚೀನಾ ದಕ್ಷಿಣ ಚೀನಾ ಸಮುದ್ರದಲ್ಲಿ ವಿಸ್ತರಿಸುತ್ತಿದೆ. ಆ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಹಡಗುಗಳು ಇರುವುದಕ್ಕೆ ಚೀನಾ ಆಕ್ಷೇಪ ಎತ್ತಿತ್ತು ಎಂದು ಮೂಲಗಳು ತಿಳಿಸಿವೆ.












Click it and Unblock the Notifications