India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2021 ಅಂತ್ಯದೊಳಗೆ ದೇಶದ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ: ಕೇಂದ್ರ

|
Google Oneindia Kannada News

ನವದೆಹಲಿ, ಮೇ 31: ದೇಶದ ಪ್ರತಿಯೊಬ್ಬರಿಗೂ 2021ರ ಅಂತ್ಯದೊಳಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಕೊರೊನಾ ಲಸಿಕೆ ವಿತರಣೆ, ಲಸಿಕೆ ಕೊರತೆ, ಕೊರೊನಾ ಲಸಿಕೆ ದರ ಕುರಿತು ನ್ಯಾಯಾಲಯ ಪ್ರಶ್ನೆ ಮಾಡಿದೆ.

ಜನರು ಕೊರೊನಾ ಲಸಿಕೆ ಪಡೆಯುವ ಮೊದಲು ಕೋವಿನ್ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಿಕೊಳ್ಳುವುದು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ, ಅಲ್ಲಿ ಇಂಟರ್‌ನೆಟ್ ಸಿಗುವುದು ಅಷ್ಟು ಸುಲಭವಲ್ಲ.

ಪ್ರತಿಯೊಬ್ಬರೂ ಕೋವಿನ್ ಡಿಜಿಟಲ್ ವಿಭಜನೆಯಲ್ಲಿ ನೋಂದಾಯಿಸಿಕೊಳ್ಳಬೇಕು, ಗ್ರಾಮೀಣ ಪ್ರದೇಶದ ಜನರು ಕೋವಿನ್ ಅಪ್ಲಿಕೇಷನ್‌ನಲ್ಲಿ ನೋಂದಾಯಿಸಿಕೊಳ್ಳುವುದು ವಾಸ್ತವಿಕವಾಗಿ ಸಾಧ್ಯವೇ ಎಂದು ನ್ಯಾಯಾಲಯ ಕೇಳಿದೆ.

ಗ್ರಾಮಸ್ಥರು ಕಂಪ್ಯೂಟರ್ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬಹುದು, ಮತ್ತು ಅವರಿಗೆ ಲಸಿಕೆ ನೀಡಲಾಗುವುದು ಎಂದು ಪ್ರತಿಕ್ರಿಯೆ ನೀಡಿದೆ.

ಭಾರತದ ಲಸಿಕಾ ಕಾರ್ಯಕ್ರಮವು 2021ಕ್ಕಿಂತ ಮೊದಲು ಪೂರ್ಣಗೊಳ್ಳುತ್ತದೆ. ದೇಶದ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುವುದು. 2021ರ ಡಿಸೆಂಬರ್ ವೇಳೆ ಈ ಲಸಿಕಾ ಅಭಿಯಾನ ಪೂರ್ಣಗೊಳ್ಳಲಿದೆ.

ಇದಕ್ಕಾಗಿ ಲಸಿಕೆ ಉತ್ಪಾದನೆ ಹೆಚ್ಚಳ ಸೇರಿದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೂನ್ ತಿಂಗಳಿನಿಂದ ಲಸಿಕೆ ಉತ್ಪಾದನೆ ಹೆಚ್ಚಳ ಸೇರಿದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೂನ್ ತಿಂಗಳಿನಿಂದ ಲಸಿಕೆ ಉತ್ಪಾದನೆ ಪ್ರಮಾಣ ದುಪ್ಪಟ್ಟಾಗಲಿದೆ.

ಬರುವ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆಯ ನೀಡಿಕೆ ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಯೋಜನೆ ರೂಪಿಸಲಾಗಿದ್ದು, 108 ಕೋಟಿ ಜನರಿಗೆ 2016 ಕೋಟಿ ಡೋಸ್ ಲಸಿಕೆ ನೀಡುವ ಯೋಜನೆ ಸಿದ್ಧವಾಗಿದೆ.

English summary
The entire population of India is expected to be vaccinated against COVID-19 by the end of this year, the centre told the Supreme Court Monday morning, as it faced several uncomfortable questions about the national vaccination policy and decision to allow dual-pricing of vaccines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X