ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಗಳ ಬಳಿ ಇನ್ನೂ 1.57 ಕೋಟಿ ಕೊರೊನಾ ಲಸಿಕೆ ದಾಸ್ತಾನಿದೆ: ಕೇಂದ್ರ

|
Google Oneindia Kannada News

ನವದೆಹಲಿ, ಜೂನ್ 01: ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಕೊರೊನಾ ಲಸಿಕೆ ದಾಸ್ತಾನಿದೆ ಎಂದು ಕೇಂದ್ರ ಸರ್ಕಾರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡುವ ಮೂಲಕ ಬೆಂಬಲ ನೀಡುತ್ತಿದೆ. ಇದಲ್ಲದೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಗಳನ್ನು ನೇರವಾಗಿ ತಯಾರಿಕಾ ಕಂಪನಿಗಳಿಂದಲೇ ಖರೀದಿ ಮಾಡಲು ಸಹಕಾರ ನೀಡುತ್ತಿದೆ.

ಜಗತ್ತಿನಲ್ಲೇ ನಂ.1: ಭಾರತದಲ್ಲಿ ಮೇ ತಿಂಗಳ ಕೊರೊನಾವೈರಸ್ ಲೆಕ್ಕಾಚಾರ!ಜಗತ್ತಿನಲ್ಲೇ ನಂ.1: ಭಾರತದಲ್ಲಿ ಮೇ ತಿಂಗಳ ಕೊರೊನಾವೈರಸ್ ಲೆಕ್ಕಾಚಾರ!

ಉಚಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮದಡಿಯಲ್ಲಿ ಈ ವರೆಗೂ 23 ಕೋಟಿ ಡೋಸ್‌ಗೂ ಹೆಚ್ಚು ಲಸಿಕೆಗಳನ್ನು ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಪ್ರಸ್ತುತ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.57 ಕೋಟಿ ಡೋಸ್‌ಗೂ ಹೆಚ್ಚು ಕೋವಿಡ್ ಲಸಿಕೆ ದಾಸ್ತಾನಿದೆ ಎಂದು ಸಚಿವಾಲಯ ತಿಳಿಸಿದೆ.

Centre Says States, UTs Have Stock Of More Than 1.57 Crore Covid-19 Vaccine Doses

ಈ 23 ಕೋಟಿ ಡೋಸ್ ಲಸಿಕೆಗಳ ಪೈಕಿ ವ್ಯರ್ಥವಾದ ಲಸಿಕೆಗಳನ್ನು ಸೇರಿಸಿ 21,51,48,659 ಡೋಸ್ ಲಸಿಕೆಗಳನ್ನು ಬಳಕೆ ಮಾಡಲಾಗಿದ್ದು, ಇನ್ನು 1.57 ಕೋಟಿ (1,57,74,331) ಡೋಸ್ ಲಸಿಕೆಗಳ ಹೆಚ್ಚುವರಿ ದಾಸ್ತಾನಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 21,60,46,638 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

English summary
More than 1.57 crore Covid-19 vaccine doses are still available with states and UTs to be administered, the Union Health Ministry said on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X