No Detention Policy: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳನ್ನು ಫೇಲ್ ಮಾಡಲು ಅವಕಾಶ ನೀಡಿದ ಕೇಂದ್ರ
ಕೇಂದ್ರ ಸರ್ಕಾರ ಶಾಲಾ ಶಿಕ್ಷಣ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಜಾರಿ ಮಾಡಿದ್ದ 'ಅನುತ್ತೀರ್ಣರಹಿತ ನೀತಿ'ಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು, ಈ ನಿಯಮದ ಪ್ರಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ಅವಕಾಶವಿರಲಿಲ್ಲ. ಈಗ ಕೇಂದ್ರ ಸರ್ಕಾರ ಈ ನೀತಿಯನ್ನು ರದ್ದು ಮಾಡಿದೆ.
ಹೊಸ ನೀತಿಯ ಪ್ರಕಾರ ವರ್ಷಾಂತ್ಯದ ಪರೀಕ್ಷೆಗಳಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ಅನುವು ಮಾಡಿಕೊಡುತ್ತದೆ. ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು 2019 ರಲ್ಲಿ ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ಮಾಡಿದ ನಂತರ ಈಗಾಗಲೇ 'ಅನುತ್ತೀರ್ಣರಹಿತ ನೀತಿ'ಯನ್ನು ತೆಗೆದುಹಾಕಿವೆ.

ಕೇಂದ್ರ ಸರ್ಕಾರದ ಅಧಿಕೃತ ಸೂಚನೆ ಪ್ರಕಾರ, 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗಲು ವಿಫಲವಾದರೆ, ಅವರಿಗೆ ಹೆಚ್ಚುವರಿ ತರಬೇತಿ ನೀಡಲಾಗುತ್ತದೆ, ಫಲಿತಾಂಶ ಬಂದ ಎರಡು ತಿಂಗಳ ಒಳಗೆ ಮರುಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
ಮರುಪರೀಕ್ಷೆಯಲ್ಲಿ ಕೂಡ ಉತ್ತೀರ್ಣವಾಗಲು ವಿಫಲವಾದರೆ ಆ ವಿದ್ಯಾರ್ಥಿ ಐದನೇ ತರಗತಿ ಅಥವಾ ಎಂಟನೇ ತರಗತಿಯಲ್ಲಿ ಮತ್ತೆ ಓದಬೇಕಾಗುತ್ತದೆ. ಆದರೆ ಶಿಕ್ಷಣ ಪೂರ್ಣಗೊಳ್ಳುವವರೆಗೆ ಯಾವುದೇ ಶಾಲೆಯಿಂದ ಮಕ್ಕಳನ್ನು ಹೊರಹಾಕುವಂತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
ಕೇಂದ್ರೀಯ ವಿದ್ಯಾಲಯಗಳು
ಈ ನಿಯಮವು ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು, ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರ ನಡೆಸುತ್ತಿರುವ 3,000 ಕ್ಕೂ ಹೆಚ್ಚು ಶಾಲೆಗಳಿಗೆ ಅನ್ವಯವಾಗುತ್ತದೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರಾಜ್ಯಗಳಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ, ಈ ವಿಚಾರದಲ್ಲಿ ರಾಜ್ಯಗಳು ತಮ್ಮ ನಿರ್ಧಾರವನ್ನು ಅವಕಾಶ ಇರುತ್ತದೆ. ಈಗಾಲೇ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈ ನಿಯಮವನ್ನು ತೆಗೆದುಹಾಕಿವೆ.
ಹರಿಯಾಣ ಮತ್ತು ಪುದುಚೇರಿ ಈ ನಿಯಮದ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಆದರೆ ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇದನ್ನು ಮುಂದುವರೆಸಲು ನಿರ್ಧರಿಸಿವೆ ಎಂದು ವರದಿಯಾಗಿದೆ.
-
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications