ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಏರಿಕೆ: ಮೂರು ರಾಜ್ಯಗಳಿಗೆ ಕೇಂದ್ರದ ಉನ್ನತ ತಂಡ

|
Google Oneindia Kannada News

ನವದೆಹಲಿ, ನವೆಂಬರ್ 23: ಕೆಲವು ರಾಜ್ಯಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದ್ದರೂ ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಅದನ್ನು ನಿಯಂತ್ರಿಸಲು ಮತ್ತು ಅದರ ಹರಡುವಿಕೆಗೆ ಕಡಿವಾಣ ಹಾಕಲು ಉನ್ನತ ಮಟ್ಟದ ತಂಡಗಳನ್ನು ಕೇಂದ್ರ ಸರ್ಕಾರ ರವಾನಿಸಿದೆ.

ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಂತಹ ತೀವ್ರ ಸೋಂಕಿತ ರಾಜ್ಯಗಳಲ್ಲಿ ಹೊಸ ಕೊರೊನಾ ವೈರಸ್ ಪ್ರಕರಣಗಳ ಸೋಂಕು ಇಳಿಕೆಯಾಗುತ್ತಿದೆ ಅಥವಾ ಸ್ಥಿರವಾಗಿರುತ್ತಿವೆ. ಇನ್ನೊಂದೆಡೆ ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಕೂಡ ಸಕ್ರಿಯ ಪ್ರಕರಣಗಳು ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿದೆ.

ಸುನಾಮಿ ಬರಲಿದೆ: ಜನರಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆಸುನಾಮಿ ಬರಲಿದೆ: ಜನರಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

ಅತ್ಯಧಿಕ ಪ್ರಕರಣಗಳಿರುವ ಹತ್ತು ಟಾಪ್ ರಾಜ್ಯಗಳ ಪೈಕಿ ಕಳೆದ ಎರಡು ವಾರಗಳಲ್ಲಿ ಉತ್ತರ ಪ್ರದೇಶದಲ್ಲಿ ಮಾತ್ರವೇ ಸಕ್ರಿಯ ಪ್ರಕರಣಗಳು ಸಂಖ್ಯೆ ಹೆಚ್ಚಳಗೊಂಡಿವೆ. ಇದರಲ್ಲಿಯೂ 500ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗುತ್ತಿವೆ.

Centre Sent High Level Teams To UP, Punjab And Himachal Pradesh

ದೆಹಲಿ ಮತ್ತು ಕೇರಳಗಳಲ್ಲಿ ಪ್ರತಿದಿನ ಗರಿಷ್ಠ ಸಂಖ್ಯೆಯ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಈಗ ಈ ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿವೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಟಾಪ್ 10 ರಾಜ್ಯಗಳಿಗಿಂತ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ಹರಿಯಾಣ, ಪಂಜಾಬ್, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ದಾಖಲಾಗುತ್ತಿದ್ದರೂ, ಈ ಹಿಂದಿಗಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.

ಕೊವಿಡ್-19: ಹಿಮಾಚಲ ಪ್ರದೇಶದಲ್ಲಿ ಮತ್ತೆ ಲಾಕ್ ಡೌನ್ ನಿಯಮ! ಕೊವಿಡ್-19: ಹಿಮಾಚಲ ಪ್ರದೇಶದಲ್ಲಿ ಮತ್ತೆ ಲಾಕ್ ಡೌನ್ ನಿಯಮ!

Recommended Video

Covid Vaccine ಹಂಚುವಿಕೆ ಬಗ್ಗೆ ಮುಖ್ಯಮಂತ್ರಿಗಳ ಸಭೆ ಕರೆದ Modi | Oneindia Kannada

ಹೀಗಾಗಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಉನ್ನತ ಮಟ್ಟದ ತಂಡಗಳನ್ನು ಆರೋಗ್ಯ ಸಚಿವಾಲಯವು ರವಾನಿಸಿದೆ. ಕೆಲವು ದಿನಗಳ ಹಿಂದೆ ಇದೇ ರೀತಿಯ ತಂಡಗಳನ್ನು ರಾಜಸ್ಥಾನ, ಗುಜರಾತ್, ಹರಿಯಾಣ ಮತ್ತು ಛತ್ತೀಸಗಡಗಳಿಗೂ ರವಾನಿಸಲಾಗಿತ್ತು.

English summary
Centre has sent high level teams to Uttar Pradesh, Punjab and Himachal Pradesh amid surge in covid cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X