ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking:ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಸರ್ಕಾರ

|
Google Oneindia Kannada News

ನವದೆಹಲಿ, ನವೆಂಬರ್ 03: ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಪೆಟ್ರೋಲ್ 5 ರೂ, ಹಾಗೂ ಡೀಸೆಲ್ ಮೇಲೆ 10 ರೂ.ಇಳಿಕೆ ಮಾಡಿದೆ.

Centre Slashes Excise Duty on Petrol, Diesel on Diwali Eve

ನವೆಂಬರ್ 04ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿಮೆ ಆಗಲಿದೆ. ಗ್ರಾಹಕರ ಹಿತ ದೃಷ್ಟಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡುವಂತೆ ರಾಜ್ಯಗಳನ್ನು ಒತ್ತಾಯಿಸಲಾಗುತ್ತಿದೆ.

ಕಳೆದ ಕೆಲವು ತಿಂಗಳುಗಳಿಂದ ಪ್ರತಿ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿತ್ತು. ಕಳೆದ 36 ದಿನಗಳಲ್ಲಿ 28 ರೂಪಾಯಿ ಏರಿಕೆಯಾಗಿದೆ.

ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ನವೆಂಬರ್ 3ರಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ. ಹೈದಾರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ.

ಜನರ ಅತ್ಯವಶ್ಯಕ ವಸ್ತುವಾಗಿರುವ ಇಂಧನ ದರ ಏರಿಕೆಯಿಂದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇನ್ನೊಂದೆಡೆ ರಾಜ್ಯ ಹಾಗೂ ಕೇಂದ್ರಗಳು ಪೆಟ್ರೋಲ್‌, ಡೀಸೆಲ್‌ ಮೇಲೆ ವಿಧಿಸಿರುವ ಸುಂಕವನ್ನು ಕಡಿತಗೊಳಿಸುವಂತೆ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸುಂಕ ಕಡಿತಗೊಳಿಸುವುದಿಲ್ಲ ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ.

ಈ ಮಧ್ಯೆ ಪೆಟ್ರೋಲ್‌, ಡೀಸೆಲ್‌ ದರ ಸದ್ಯಕ್ಕೆ ಕಡಿಮೆಯಾಗುವ ಮಾತಿರಲಿ, ಅದು ಇನ್ನಷ್ಟು ಹೆಚ್ಚಾಗಲಿದೆ ಎಂದು ಜಾಗತಿಕ ಹಣಕಾಸು ಸಂಸ್ಥೆ ಗೋಲ್ಡ್‌ಮನ್‌ ಸ್ಯಾಕ್ಸ್‌ ತಿಳಿಸಿದೆ.

ಪ್ರಸ್ತುತ ಪ್ರತಿ ಬ್ಯಾರೆಲ್‌ಗೆ 85 ಡಾಲರ್‌ ಇರುವ ಬ್ರೆಂಟ್‌ ಕಚ್ಚಾ ತೈಲ ದರ ಮುಂದಿನ ವರ್ಷ ಶೇ.30ರಷ್ಟು ಹೆಚ್ಚಳದೊಂದಿಗೆ 110 ಡಾಲರ್‌ಗೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ವರದಿ ತಿಳಿಸಿದೆ.
ಇದೀಗ ಅಬಕಾರಿ ಸುಂಕ ಇಳಿಕೆ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿದೆ.

English summary
The government of India on Wednesday announced a reduction in the excise duty on petrol and diesel. On the eve of Diwali, the government slashed the excise duty on petrol and diesel by Rs 5 and Rs 10, respectively. The decision will come into effect from tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X