ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನ

|
Google Oneindia Kannada News

ನವದೆಹಲಿ, ಏಪ್ರಿಲ್ 7: ದೇಶದಲ್ಲಿ ಕೊರೊನಾ ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕು ತಗುಲುತ್ತಿದ್ದು, ಈ ಕುರಿತು ಕೇಂದ್ರವು ಮಾಹಿತಿಯನ್ನು ಕಲೆ ಹಾಕುತ್ತಿದೆ.

ಕೊರೊನಾ ಲಸಿಕೆ ಬಳಿಕವೂ ಯಾರಿಗೆ ಕೊರೊನಾ ತಗುಲುತ್ತದೋ ಅಂಥವರ ಮಾಹಿತಿಯನ್ನು ಪಡೆಯಲಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1.5 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ದೇಶದಲ್ಲಿ ಮತ್ತೆ ಲಕ್ಷ ದಾಟಿದ ಕೊರೊನಾ; 1,15,736 ಹೊಸ ಪ್ರಕರಣ ದಾಖಲುದೇಶದಲ್ಲಿ ಮತ್ತೆ ಲಕ್ಷ ದಾಟಿದ ಕೊರೊನಾ; 1,15,736 ಹೊಸ ಪ್ರಕರಣ ದಾಖಲು

ಕೊರೊನಾ ಸೋಂಕು ಆರಂಭವಾದ ಜನವರಿಯಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ಕೊರೊನಾ ಸೋಂಕು ದಾಖಲಾಗಿದೆ. ಭಾರತದಲ್ಲಿ ಕೊರೊನಾಆರ್ಭಟ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Centre To Collect Data On Those Testing Covid Positive After Vaccination

ಇನ್ನು ಕಳೆದ 24 ಗಂಟೆಗಳಲ್ಲಿ 630 ಮಂದಿಯನ್ನು ಕೊರೊನಾ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ಹೊಸ ಕೇಸ್ ಗಳು ಏರುಗತಿಯಲ್ಲಿರುವ ಕಾರಣ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,43,473ಕ್ಕೆ ತಲುಪಿದೆ.

ಒಂದೇ ದಿನ 59,856 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 59,856 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,17,92,135ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 12,08,329 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,14,39,598 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 8,70,77,474 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

English summary
The Central government will now onwards collect data on those testing Covid positive even after getting vaccinated. The move follows reports of such instances coming from several parts of the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X