ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುತ್ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕ ಇಲ್ಲ: ಕೇಂದ್ರದ ನಿರ್ಧಾರ

|
Google Oneindia Kannada News

ನವದೆಹಲಿ, ಜೂನ್ 19: ವಿದ್ಯುತ್ ಚಾಲಿನ ವಾಹನಗಳ ನೋಂದಣಿಗೆ ವಿಧಿಸಲಾಗುವ ಶುಲ್ಕವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸಲು ಮತ್ತು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅವಲಂಬನೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ವಿದ್ಯುತ್ ಚಾಲಿತ ವಾಹನಗಳಿಗೆ ನೋಂದಣಿ ಶುಲ್ಕದ ವಿನಾಯಿತಿ ನೀಡುವ ನಿರ್ಧಾರ ತೆಗೆದುಕೊಂಡಿದೆ.

ಬೆಂಗಳೂರಿನ ಈ ವೃತ್ತಗಳಲ್ಲಿ ಅತಿ ಹೆಚ್ಚು ಮಾಲಿನ್ಯ, ಕಾರಣಗಳೇನು?ಬೆಂಗಳೂರಿನ ಈ ವೃತ್ತಗಳಲ್ಲಿ ಅತಿ ಹೆಚ್ಚು ಮಾಲಿನ್ಯ, ಕಾರಣಗಳೇನು?

2030ರ ವೇಳೆಗೆ ಈ ಬಗೆಯ ವಾಹನಗಳ ಬಳಕೆಯನ್ನು ಹೆಚ್ಚಿಸುವುದು ಕೇಂದ್ರದ ಉದ್ದೇಶವಾಗಿದೆ. 1989ರ ಕೇಂದ್ರ ಮೋಟಾರು ವಾಹನಗಳ ನಿಯಮಕ್ಕೆ (ಸಿಎಂವಿಆರ್) ತಿದ್ದುಪಡಿ ತರುವ ಕರಡು ಅಧಿಸೂಚನೆಯನ್ನು ಹೊರಡಿಸಿರುವ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಬ್ಯಾಟರಿ ಚಾಲಿತ ವಾಹನಗಳನ್ನು ನೋಂದಣಿ ಪ್ರಮಾಣಪತ್ರದ ನವೀಕರಣ ಮತ್ತು ಹೊಸ ನೋಂದಣಿ ಕಾರ್ಯಗಳ ವೇಳೆ ಶುಲ್ಕದಿಂದ ವಿನಾಯಿತಿ ನೀಡಲು ಮುಂದಾಗಿದೆ.

centre to exempt electric vehicles from registration fees

ಈ ಶುಲ್ಕ ವಿನಾಯಿತಿ ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ಸ್ಕೂಟರ್, ಮೋಟಾರ್ ಬೈಕ್, ರಿಕ್ಷಾಮ ಕಾರು ಸೇರಿದಂತೆ ಎಲ್ಲ ಬಗೆಯ ವಿದ್ಯುತ್ ಚಾಲಿತ ವಾಹನಗಳಿಗೂ ಅನ್ವಯವಾಗಲಿದೆ. ಈ ಸಂಬಂಧ ಕರಡು ಸಿದ್ಧಗೊಂಡಿದ್ದು, ಸಂಸತ್‌ನಲ್ಲಿ ಮುಂದಿನ ಹಂತದಲ್ಲಿ ಅಂಗೀಕಾರವಾದ ಬಳಿಕ ಜಾರಿಗೆ ಬರಲಿದೆ.

English summary
Central government has decided to exempt electriv vehicles from registration fees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X