ಇಂದು ಲಡಾಖ್ ಸರ್ವಪಕ್ಷ ಸಭೆ: ಪ್ರಾದೇಶಿಕ ಪಕ್ಷಗಳಿಂದ ಪ್ರತ್ಯೇಕ ರಾಜ್ಯದ ಬೇಡಿಕೆ ಸಾಧ್ಯತೆ
ನವದೆಹಲಿ, ಜು.01: ಜಮ್ಮು ಮತ್ತು ಕಾಶ್ಮೀರದ ನಂತರ ಕೇಂದ್ರ ಸರ್ಕಾರ ಇಂದು ಲಡಾಖ್ ರಾಜಕೀಯ ಪಕ್ಷಗಳೊಂದಿಗೆ ಸರ್ವಪಕ್ಷ ಸಭೆ ನಡೆಸಲಿದೆ. ಈ ಸಭೆಯಲ್ಲಿ ಪ್ರಾದೇಶಿಕ ಪಕ್ಷಗಳು ಪ್ರತ್ಯೇಕ ರಾಜ್ಯ ಸ್ಥಾನಮಾನದ ಬೇಡಿಕೆ ಮುಂದಿಡಲು ಸಜ್ಜಾಗಿದೆ ಎಂದು ವರದಿಯಾಗಿದೆ.
ಸಭೆಗೆ ಮಾಜಿ ಸಂಸದರು ಮತ್ತು ಸಿವಿಲ್ ಸೊಸೈಟಿ ಸದಸ್ಯರನ್ನು ಆಹ್ವಾನಿಸಲಾಗಿದ್ದು, ಇದರ ಅಧ್ಯಕ್ಷತೆಯನ್ನು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ವಹಿಸಲಿದ್ದಾರೆ.
ಪ್ರಾದೇಶಿಕ ಪಕ್ಷಗಳು ಲಡಾಖ್‌ಗೆ ಪ್ರತ್ಯೇಕ ರಾಜ್ಯ ಸ್ಥಾನಮಾನದ ಒತ್ತಾಯ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 11 ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೂಡಾ ಟೈಮ್ಸ್ ನೌ ಗೆ ಮೂಲಗಳು ತಿಳಿಸಿದೆ.

ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಇದು ಸರ್ವಪಕ್ಷ ಸಭೆಗೆ ಆಹ್ವಾನವನ್ನು ಸ್ವೀಕರಿಸಿದೆ ಎಂದು ದೃಢಪಡಿಸಿದೆ. ಈ ಕೆಡಿಎ ಯು ''370 ಮತ್ತು 35 ಎ ವಿಧಿ ಪುನಃಸ್ಥಾಪನೆ ಹಾಗೂ ಇಡೀ ಲಡಾಖ್‌ಗೆ ರಾಜ್ಯತ್ವವನ್ನು ಕೋರಲಿದೆ,'' ಎಂದು ಹೇಳಿದೆ.
2019 ರ ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ನಾಯಕರನ್ನು ಒಳಗೊಂಡ ಮೊದಲ ಸರ್ವಪಕ್ಷ ಸಭೆಯನ್ನು ಕೇಂದ್ರವು ಜೂನ್ 24 ರಂದು ನಡೆಸಿದ್ದು ಈಗ ಲಡಾಖ್‌ನಲ್ಲಿ ಸಭೆ ನಡೆಸಲಾಗುತ್ತಿದೆ.
ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ, ''ಜಮ್ಮು ಮತ್ತು ಕಾಶ್ಮೀರದ ಪ್ರಜಾಪ್ರಭುತ್ವ ಉಳಿಸಲು ಕೇಂದ್ರವು ಸಂಪೂರ್ಣವಾಗಿ ಬದ್ಧವಾಗಿದೆ. ಈ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸಲಾಗುತ್ತದೆ,'' ಎಂದು ಹೇಳಿದ್ದರು.
ಡಿಲಿಮಿಟೇಶನ್, ವಿಧಾನಸಭಾ ಚುನಾವಣೆಗೆ ಒಂದು ಮಾರ್ಗಸೂಚಿ, ರಾಜ್ಯತ್ವವನ್ನು ಪುನಃಸ್ಥಾಪಿಸುವುದು ಮತ್ತು ಕಾಶ್ಮೀರಿ ಪಂಡಿತರನ್ನು ಮರಳಿ ಕರೆತರುವುದು ಈ ಸಭೆಯಲ್ಲಿ ಚರ್ಚಿಸಲ್ಪಟ್ಟ ಇತರೆ ಪ್ರಮುಖ ವಿಚಾರಗಳಾಗಿದೆ.
ಏತನ್ಮಧ್ಯೆ, ಡಿಲಿಮಿಟೇಶನ್ ಆಯೋಗವು ಜುಲೈ 6-9 ರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ನಾಲ್ಕು ದಿನಗಳ ಭೇಟಿಯನ್ನು ಪ್ರಾರಂಭಿಸಲಿದೆ. ರಾಜಕೀಯ ಪಕ್ಷಗಳು, ಅದರ ನಾಯಕರು ಮತ್ತು ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದೆ.
ಜಮ್ಮು ಕಾಶ್ಮೀರದ ಸರ್ವಪಕ್ಷ ಸಭೆಯ ಮೊದಲು, ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಮತ್ತು ಲೇಹ್ ಮೂಲದ ಸಾಮಾಜಿಕ-ಧಾರ್ಮಿಕ ಮತ್ತು ರಾಜಕೀಯ ಸಂಘಟನೆಗಳ ಒಂದು ಗುಂಪು ಲಡಾಖ್‌ಗೆ ಪ್ರತ್ಯೇಕ ಶಾಸಕಾಂಗವನ್ನು ಕೋರಿತ್ತು. ನಮಗ್ಯಾಲ್ ಜೊತೆಗೆ, ಲಡಾಖ್ ಸ್ವಾಯತ್ತ ಗುಡ್ಡಗಾಡು ಅಭಿವೃದ್ಧಿ ಮಂಡಳಿ (ಎಲ್‌ಎಎಚ್‌ಡಿಸಿ) ಅಧ್ಯಕ್ಷ ತಾಶಿ ಗಯಾಲ್ಸನ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
370 ಮತ್ತು 35-ಎ ವಿಧಿಯನ್ನು ರದ್ದುಪಡಿಸಿದ ನಂತರ ಭೂಮಿ, ಉದ್ಯೋಗಗಳಿಗೆ ಮೀಸಲಾತಿ, ಸಂಸ್ಕೃತಿ, ಭಾಷೆ ಮತ್ತು ಪರಿಸರದ ಬಗ್ಗೆ ಜನರ ಕಳವಳವನ್ನು ಪರಿಹರಿಸಲು ಭಾರತೀಯ ಸಂವಿಧಾನದ 6 ನೇ ಪರಿಚ್ಛೇಧದಡಿಯಲ್ಲಿ ಸುರಕ್ಷತೆಗಾಗಿ ಒತ್ತಾಯಿಸುತ್ತಿದ್ದೇವೆ ಎಂದು ಸಭೆಯಲ್ಲಿ ಮಾಜಿ ಲಡಾಕ್ ಸಂಸದ ಥುಪ್ಸ್ತಾನ್ ಚೆವಾಂಗ್ ಹೇಳಿದ್ದಾರೆ.
(ಒನ್‌ಇಂಡಿಯಾ ಸುದ್ದಿ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications