Manmohan Singh: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಒಪ್ಪಿಗೆ
ನವದೆಹಲಿ,ಡಿಸೆಂಬರ್ 28: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕ್ಯಾಬಿನೆಟ್ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಲಾಗಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ಸ್ಮಾರಕಕ್ಕೆ ಜಾಗ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಕೇಂದ್ರ ಸರ್ಕಾರ ಜಾಗ ನೀಡುವ ಕುರಿತು ಘೋಷಣೆ ಮಾಡಿದೆ.

ಗೃಹ ವ್ಯವಹಾರಗಳ ಸಚಿವಾಲಯವು ಇಂದು ಬೆಳಿಗ್ಗೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ ಪ್ರಧಾನಿ ದಿವಂಗತ ಡಾ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿಯನ್ನು ಸ್ವೀಕರಿಸಲಾಗಿದೆ. ಸಂಪುಟ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ದಿವಂಗತ ಡಾ ಮನಮೋಹನ್ ಸಿಂಗ್ ಅವರ ಕುಟುಂಬಕ್ಕೆ ಸರ್ಕಾರವು ಸ್ಮಾರಕಕ್ಕೆ ಜಾಗವನ್ನು ಮಂಜೂರು ಮಾಡಲಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಜತೆ ಮಾತುಕತೆ ನಡೆಸಿರುವುದಾಗಿ ಹೇಳಿದ್ದರು.
ಎರಡು ಅವಧಿಗೆ ದೇಶದ ಜನತೆ ಮೆಚ್ಚಿದ ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ಸ್ಥಾಪಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ ನಂತರ ಮಲ್ಲಿಕಾರ್ಜುನ್ ಖರ್ಗೆ ಅವರಿಂದ ಪತ್ರ ಬಂದಿದೆ. ಇಂದು ಬೆಳಿಗ್ಗೆ ನಮ್ಮ ದೂರವಾಣಿ ಸಂಭಾಷಣೆಯನ್ನು ಪ್ರಸ್ತಾಪಿಸಿ, ಡಾ ಮನಮೋಹನ್ ಸಿಂಗ್ ಅವರ ಅಂತಿಮ ವಿಧಿಗಳನ್ನು ಅಂತಿಮ ವಿಶ್ರಾಂತಿ ಸ್ಥಳದಲ್ಲಿ ನಡೆಸುವಂತೆ ನಾನು ವಿನಂತಿಸಿದ್ದೇನೆ, ಅದು ಭಾರತದ ಮಹಾನ್ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಲಿದೆ ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ತಿಳಿಸಿದ್ದಾರೆ.
ಇದು ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಅವರ ಸ್ಮಾರಕಗಳನ್ನು ಹೊಂದಿರುವ ಸಂಪ್ರದಾಯಕ್ಕೆ ಅನುಗುಣವಾಗಿದೆ (ಸಂಪ್ರದಾಯವಾಗಿದೆ)" ಎಂದು ಖರ್ಗೆ ತಮ್ಮ ಎರಡು ಪುಟಗಳ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. "ಮನಮೋಹನ್ ಸಿಂಗ್ ಅವರು ದೇಶದ ಮತ್ತು ಈ ರಾಷ್ಟ್ರದ ಜನರ ಮನಸ್ಸಿನಲ್ಲಿ ಅತ್ಯಂತ ಗೌರವಾನ್ವಿತ ಸ್ಥಾನವನ್ನು ಹೊಂದಿದ್ದು, ಅವರ ಕೊಡುಗೆ ಹಾಗೂ ಸಾಧನೆಗಳು ಅಸಾಧಾರಣವಾಗಿವೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ತಿಳಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಆಗಿ, ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಹೀಗೆ ಹಲವಾರು ಸಂಸ್ಥೆಗಳಲ್ಲಿ ಇವರ ಸಾಮರ್ಥ್ಯಗಳನ್ನು ಹಾಗೂ ಹಣಕಾಸಿನ ವಿಷಯದ ಮೇಲೆ ಅವರ ಪಾಂಡಿತ್ಯಕ್ಕೆ ವಿಶ್ವ ನಾಯಕರು ಸಾಕ್ಷಿಯಾಗಿದ್ದಾರೆ. ಜಾಗತಿಕ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ಮನಮೋಹನ್ ಸಿಂಗ್ ಅವರ ಸಲಹೆ, ನಾಯಕತ್ವ ಮತ್ತು ಕೊಡುಗೆಯನ್ನು ಚೆನ್ನಾಗಿ ಇಡೀ ವಿಶ್ವ ಒಪ್ಪಿಕೊಂಡಿದೆ ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.












Click it and Unblock the Notifications