Breaking News: ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಚಳವಳಿ: ಸಿಜಿಪಿ ಹೊಸ ಬೇಡಿಕೆ

ನೀಟ್ ಪ್ರಶ್ನೆ ಪತ್ರಿಕೆ ವಿಚಾರದಲ್ಲಿ ಸದ್ದು ಮಾಡಿದ್ದ ಕಾಕ್ರೋಚ್ ಜನತಾ ಪಾರ್ಟಿಯು ಇದೀಗ ಭಾರತೀಯ ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದೆ. ನೀಟ್ ಪ್ರಶ್ನೆ ಪತ್ರಿಕೆ ವಿಚಾರದಲ್ಲಿ ದೇಶದಾದ್ಯಂತ ಸದ್ದು ಮಾಡಿದ್ದ ಕಾಕ್ರೋಚ್ ಜನತಾ ಪಾರ್ಟಿಯು ಇದೀಗ ಭಾರತೀಯ ಚುನಾವಣಾ ಆಯೋಗದ ವಿಚಾರದಲ್ಲೂ ಮಧ್ಯಪ್ರವೇಶ ಮಾಡಿದೆ.

ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಚಳವಳಿ ಮಾಡುವುದಾಗಿ ಕಾಕ್ರೋಚ್ ಜನತಾ ಪಾರ್ಟಿಯು ಎಚ್ಚರಿಕೆ ನೀಡಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಈಚೆಗೆ ಕಾಕ್ರೋಚ್ ಜನತಾ ಪಾರ್ಟಿಯು ಪ್ರತಿಭಟನೆ ನಡೆಸಿತ್ತು. ಅಲ್ಲದೆ, ಈ ಹಿಂದಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವಲ್ಲಿಯೂ ಯಶಸ್ವಿಯಾಗಿತ್ತು. ಇದೀಗ ಭಾರತೀಯ ಚುನಾವಣಾ ಆಯೋಗದ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದೆ. ಭಾರತೀಯ ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು ಎನ್ನುವ ವಿಷಯ ಚರ್ಚೆಯ ಮುನ್ನೆಲೆಗೆ ಬಂದ ಕೂಡಲೇ ಕಾಕ್ರೋಚ್ ಜನತಾ ಪಾರ್ಟಿಯು ಚಳವಳಿಯ ಎಚ್ಚರಿಕೆ ನೀಡಿದೆ.

Breaking News CGP s New Demand Nationwide Protest if Gyanesh Kumar Refuses to Resign

ಅಮಿತ್ ಶಾ ಅಣತಿಯಂತೆ ಚುನಾವಣಾ ಆಯೋಗ ಕೆಲಸ

ಚುನಾವಣಾ ಆಯೋಗವು ಗೃಹ ಸಚಿವ ಅಮಿತ್ ಶಾ ಅವರ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದು, ಸ್ವಂಥ ನಿರ್ಧಾರ ತಗೆದುಕೊಳ್ಳುವಲ್ಲಿ ವಿಫಲವಾಗಿದೆ. ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ನಾಯಕನಲ್ಲ. ಪಕ್ಷವೊಂದರ ಸೂಚನೆಯಂತೆ ಕೆಲಸ ಮಾಡೋದು ತಪ್ಪೆಂದು ಎಂದು ಕಾಕ್ರೋಚ್ ಜನತಾ ಪಾರ್ಟಿಯು ಆರೋಪಿಸಿದೆ.

ಸಿಜೆಪಿಯಿಂದ 48 ಗಂಟೆಗಳ ಗಡುವು!

ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಮುಂದಿನ 48 ಗಂಟೆ ಅವಧಿಯಲ್ಲಿ ರಾಜೀನಾಮೆ ಕೊಡಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿಯು ಆಗ್ರಹಿಸಿದೆ. ಒಂದೊಮ್ಮೆ 48 ಗಂಟೆಗಳಲ್ಲಿಯೇ ಜ್ಞಾನೇಶ್ ಕುಮಾರ್ ರಿಸೈನ್ ಮಾಡದೇ ಹೋದರೆ, ದೇಶವ್ಯಾಪಿ ಚಳವಳಿ ಮಾಡಲಿದ್ದು, ಮುಂದಿನ ಕಾರ್ಯಾಚರಣೆ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ ಪಡೆಯಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕರಾದ ಅಭಿಜಿತಿ ದೀಪ್ಕೆ ಅವರು ಹೇಳಿದ್ದಾರೆ.

ಬಿಜೆಪಿ ನಾಯಕ ಸಂಬಿತ್ ಪಾತ್ರಾ ಚುನಾವಣಾ ಆಯೋಗದ ಜ್ಞಾನೇಶ್ ಕುಮಾರ್ ಪರ ಮಾತನಾಡುತ್ತಿರುವುದು ಏಕೆ? ಪಾತ್ರಾ ಚುನಾವಣಾ ಆಯೋಗಕ್ಕೆ ಸೇರಿದವರೋ, ಅತವಾ ಜ್ಞಾನೇಶ್ ಕುಮಾರ್ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೋ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕರಾದ ಅಭಿಜಿತಿ ದೀಪ್ಕೆ ಅವರು ಪ್ರಶ್ನೆ ಮಾಡಿದ್ದಾರೆ. ಜ್ಞಾನೇಶ್ ಕುಮಾರ್ ಅವರಂಥ ದೊಡ್ಡ ಕ್ರಿಮಿನಲ್ ದೇಶದಲ್ಲಿ ಬೇರೆ ಯಾರೂ ಇಲ್ಲ. ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕಾದ ಸಂಸ್ಥೆಯೊಂದು ಹೀಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡು ಮೇಲು ಮಾಡಲು ಯತ್ನಿಸುತ್ತಿರುವುದು ಅತ್ಯಂತ ಕ್ರೂರ ಅಪರಾಧ ಎಂದೂ ಗಂಭೀರ ಆರೋಪ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+