Mohammed Shami: ಎನರ್ಜಿ ಡ್ರಿಂಕ್ ಕುಡಿದ "ಮೊಹಮ್ಮದ್ ಶಮಿ" ಅಪರಾಧಿ ಎಂದ ಮುಸ್ಲಿಂ ಧರ್ಮ ಗುರು!
Mohammed Shami: ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರ ವಿರುದ್ಧ ಧರ್ಮದ ಕಾರಣಕ್ಕೆ ಗಂಭೀರವಾದ ಆರೋಪವೊಂದು ಕೇಳಿ ಬಂದಿದೆ. ಹಿರಿಯ ಮುಸ್ಲಿಂ ಧರ್ಮಗುರು ಹಾಗೂ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಅವರು ಶಮಿ ಬಗ್ಗೆ ನೀಡುರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾರತವು ಅಮೋಘ ಪ್ರದರ್ಶನವನ್ನು ನೀಡುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್ ಪಂದ್ಯದ ವೇಳೆ ನಡೆದಿರುವ ಒಂದು ಘಟನೆಯನ್ನು ಇರಿಸಿಕೊಂಡು ಕಟ್ಟರ್ ಮುಸ್ಲಿಮರು ಹಾಗೂ ಮುಸ್ಲಿಂ ಧರ್ಮ ಗುರುಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಏನಿದು ವಿವಾದ ಎನ್ನುವ ವಿವರ ಇಲ್ಲಿದೆ.
ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಅವರು ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ವಿರುದ್ಧ ಗರಂ ಆಗಿದ್ದಾರೆ. ಅಷ್ಟೇ ಅಲ್ಲಿ ಶಮಿ ಅವರ ಬಗ್ಗೆ ಪರ - ವಿರೋಧ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿವೆ. ಮುಸ್ಲಿಮರು ರಂಜಾನ್ ಅನ್ನು ಪವಿತ್ರ ಮಾಸ ಎಂದು ಪರಿಗಣಿಸುತ್ತಾರೆ. ಆದರೆ, ಶಮಿ ತಪ್ಪು ಮಾಡಿದ್ದಾರೆ ಎನ್ನುವ ಟೀಕೆ ಕೇಳಿ ಬಂದಿದೆ. ರಂಜಾನ್ ತಿಂಗಳಲ್ಲಿ ರೋಜಾ (ಉಪವಾಸ) ಆಚರಣೆ ಮಾಡದೆ ಇರುವುದಕ್ಕಾಗಿ ಮೊಹಮ್ಮದ ಶಮಿ ಅವರನ್ನು ಟೀಕಿಸಲಾಗಿದ್ದು. ಅಪರಾಧಿ ಎಂದೂ ಹೇಳಲಾಗಿದೆ.

ಮಾರ್ಚ್ 4ಕ್ಕೆ ದುಬೈನಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರು ಎನರ್ಜಿ ಡ್ರಿಂಕ್ ಕುಡಿದಿದ್ದರು. ಇದೀಗ ಈ ವಿಚಾರ ಆಕ್ರೋಶಕ್ಕೆ ಕಾರಣವಾಗಿದೆ. ಈ ರೀತಿ ಮಾಡುವುದು ಜನರಲ್ಲಿ ತಪ್ಪು ಸಂದೇಶವನ್ನು ಕೊಡುತ್ತದೆ. ರೋಜಾ ಮಾಡದೆ ಶಮಿ ಅವರು ಅಪರಾಧ ಮಾಡಿದ್ದಾರೆ. ಶಮಿ ಅವರು ಇದನ್ನು ಮಾಡಬಾರದಿತ್ತು. ಶರಿಯತ್ / ಮುಸ್ಲಿಂ ಸಂಪ್ರದಾಯದ ದೃಷ್ಟಿಯಲ್ಲಿ ಮೊಹಮ್ಮದ್ ಶಮಿ ಅವರು ಅಪರಾಧಿ. ಅವರು ಅಲ್ಲಾಹನ ಬಳಿ ಈ ತಪ್ಪಿಗೆ ಕ್ಷಮೆ ಕೇಳಬೇಕು ಎಂದು ರಜ್ವಿ ಅವರು ಆಗ್ರಹಿಸಿದ್ದಾರೆ.
ರಂಜಾನ್ ಪವಿತ್ರ ಮಾಸದಲ್ಲಿ ಯಾವುದೇ ಆರೋಗ್ಯವಂತ ಪುರುಷ ಅಥವಾ ಮಹಿಳೆ ರೋಜಾ ಆಚರಣೆ ಮಾಡದೆ ಇದ್ದರೆ ಅದೊಂದು ದೊಡ್ಡ ಅಪರಾಧವಾಗುತ್ತದೆ ಎಂದಿದ್ದಾರೆ. ಮುಂದುವರಿದು ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಮೊಹಮ್ಮದ್ ಶಮಿ ಅವರು ಪಂದ್ಯದ ಸಮಯದಲ್ಲಿಯೇ ಎನರ್ಜಿ ಡ್ರಿಂಕ್ಸ್ ಕುಡಿದಿದ್ದಾರೆ. ಜನ ಅವರನ್ನು ನೋಡುತ್ತಿದ್ದರು. ಇನ್ನು ಅವರು ಆಟದಲ್ಲಿ ಇದ್ದಾರೆ ಎಂದಾದರೆ ಅವರು ಆರೋಗ್ಯವಾಗಿದ್ದಾರೆ ಎಂದೇ ಅರ್ಥ. ಈ ರೀತಿ ಇರುವಾಗ ರೋಜಾ ಮುರಿಯಬಾರದಿತ್ತು ಎಂದು ಅವರು ಹೇಳಿದ್ದಾರೆ.
ಇನ್ನು ಮೌಲಾನಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುರುವ ಮೊಹಮ್ಮದ್ ಶಮಿ ಅವರ ಸಹೋದರ ಮೊಹಮ್ಮದ್ ಜೈದ್ ಅವರು, ಪ್ರಯಾಣದ ಸಂದರ್ಭದಲ್ಲಿ ರೋಜಾ ಮುರಿದಿದ್ದಾರೆ ಎಂದಿದ್ದಾರೆ.
ಇನ್ನು ಸೋಷಿಯಲ್ ಮೀಡಿಯಾದಲ್ಲಿ ಶಮಿ ಅವರಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಶಮಿ ಅವರು ದೇಶಕ್ಕಾಗಿ ಉಪವಾಸ ಮುರಿದಿದ್ದಾರೆ. ಅವರು ದೇಶ ಮೊದಲು ಎನ್ನುತ್ತಾರೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ












Click it and Unblock the Notifications