Chanakyya Bihar Exit Poll: ಬಿಹಾರದಲ್ಲಿ ಬಿಜೆಪಿ & ಜೆಡಿಯು ದರ್ಬಾರ್, ಮತ್ತೆ ಸಮ್ಮಿಶ್ರ ಸರ್ಕಾರ, ಚಾಣಕ್ಯ ಸಮೀಕ್ಷೆ ಮುನ್ಸೂಚನೆ
Chanakyya Bihar Exit Poll: ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ (ಎಕ್ಸಿಟ್ ಪೋಲ್) Chanakyya ಸಮೀಕ್ಷೆ ಬಿಡುಗಡೆಯಾಗಿದೆ. Chanakyya ಸಮೀಕ್ಷೆಯ ಪ್ರಕಾರ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ದರ್ಬಾರ್ ಮುಂದುವರಿದಿದೆ. ಈ ಬಾರಿಯು ಬಿಜೆಪಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ರಚನೆ ಆಗಲಿದೆ ಎಂದು ಸಮೀಕ್ಷೆ ಹೇಳಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 130ರಿಂದ 138 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ 100ರಿಂದ108 ಸ್ಥಾನಗಳಲ್ಲಿ ಹಾಗೂ ಇತರೆ / ಪಕ್ಷೇತರರು 3ರಿಂದ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು Chanakyya ಸಮೀಕ್ಷೆಯ ವರದಿ ಮಾಡಿದೆ. ಬಿಹಾರ ವಿಧಾನಸಭೆಯಲ್ಲಿ ಒಟ್ಟು 243 ಕ್ಷೇತ್ರಗಳಿವೆ. ಇದರಲ್ಲಿ ಮ್ಯಾಜಿಕ್ ಸಂಖ್ಯೆ 122 ಆಗಿದೆ. ಮ್ಯಾಜಿಕ್ ಸಂಖ್ಯೆಯನ್ನು ಗಳಿಸುವಲ್ಲಿ ಎನ್‌ಡಿಎ ಸಫಲವಾಗಲಿದೆ ಎಂದು ಸಮೀಕ್ಷಾ ವರದಿ ಉಲ್ಲೇಖಿಸಿದೆ.

2025ನೇ ಸಾಲಿನ ಬಿಹಾರ ವಿಧಾನಸಭೆ ಚುನಾವಣೆಯು ಮುಕ್ತಾಯವಾಗಿದೆ. ನವೆಂಬರ್ 6 ಮತ್ತು 11, 2025 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯನ್ನು ನವೆಂಬರ್ 14, 2025 ರಂದು ನಿಗದಿಪಡಿಸಲಾಗಿದೆ. ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿದ್ದು, ಎಲ್ಲವೂ ಬಹುತೇಕ ಸುಸೂತ್ರವಾಗಿ ನಡೆದಿದೆ.
ಬಿಹಾರದ ಮೊದಲ ಹಂತದ ಮತದಾನವು ನವೆಂಬರ್ 6, 2025 121 ಕ್ಷೇತ್ರಗಳಲ್ಲಿ ನಡೆದಿತ್ತು ಹಾಗೂ ಎರಡನೇ ಹಂತದ ಮತದಾನವು ನವೆಂಬರ್ 11, 2025ರಂದು ಮಂಗಳವಾರ 122 ಕ್ಷೇತ್ರಗಳಲ್ಲಿ ನಡೆದಿದೆ. ಈ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶಗಳು ನವೆಂಬರ್ 14, 2025ರಂದು ನಡೆಯಲಿದೆ. ಪ್ರಸ್ತುತ ಬಿಹಾರ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 22, 2025 ರಂದು ಕೊನೆಗೊಳ್ಳಲಿದೆ.
ನವೆಂಬರ್ 14ಕ್ಕೆ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ
ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶವು ನವೆಂಬರ್ 14ರ ಶುಕ್ರವಾರ ಪ್ರಕಟವಾಗಲಿದೆ. ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಹಲವು ಕಾರಣಗಳಿಗೆ ಚರ್ಚೆಗೆ ಗ್ರಾಸವಾಗಿತ್ತು. ಮೊದಲನೆಯದಾಗಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವು ಭಾರೀ ಚರ್ಚೆಗೆ ಕಾರಣವಾಯಿತು. ಮತದಾರರ ಪಟ್ಟಿ ಪರಿಷ್ಕರಣೆಯ ಮೂಲಕ ಬರೋಬ್ಬರಿ 69 ಲಕ್ಷ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಹೊರಗಿರಿಸಲಾಗಿದೆ ಎಂದು ಬಿಹಾರದ ವಿರೋಧ ಪಕ್ಷಗಳು ಗಂಭೀರ ಆರೋಪ ಮಾಡಿದ್ದವು.
ಕರ್ನಾಟಕ ಮತ್ತು ಮಹಾರಾಷ್ಟ್ರದ ನಂತರದಲ್ಲಿ ಹರಿಯಾಣದಲ್ಲೂ ಮತಗಳ ಕಳ್ಳತನ ಮಾಡಲಾಗಿದೆ (ವೋಟ್ ಚೋರಿ) ಈ ಮೂಲಕವೇ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಬಿಹಾರದಲ್ಲೂ ಈ ಬೆಳವಣಿಗೆ ನಡೆದರೂ ನಡೆಯಬಹುದು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರ ಆರೋಪವನ್ನು ಮಾಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications