ಮಧ್ಯಪ್ರದೇಶ ಚುನಾವಣೆ 2023; ಬಿಜೆಪಿಗೆ ಬಹುಮತ ಎಂದ CHANAKYA
ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಪಡೆದು ಅಧಿಕಾರ ಪಡೆಯಲಿದೆ ಎಂದು CHANAKYA ನಡೆಸಿದ ಚುನಾವಣೋತ್ತರ ಸಮೀಕ್ಷೆ ಹೇಳಿದೆ. ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್ 74 ಕ್ಷೇತ್ರದಲ್ಲಿ ಮಾತ್ರ ಜಯಗಳಿಸಲಿದೆ.
ಗುರುವಾರ ಸಂಜೆ ವಿವಿಧ ಸಂಸ್ಥೆಗಳು ನಡೆಸಿದ 5 ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿವೆ. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ. 2024ರ ಲೋಕಸಭಾ ಚುನಾವಣೆಗೂ ಮೊದಲು ನಡೆಯುತ್ತಿರುವ 5 ರಾಜ್ಯಗಳ ಚುನಾವಣೆಯ ಫಲಿತಾಂಶ ದೇಶದಲ್ಲೇ ಕುತೂಹಲ ಮೂಡಿಸಿದೆ.

ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116. ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಇಂದು ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ.
CHANAKYA ನಡೆಸಿದ ಚುನಾವಣಾ ಸಮೀಕ್ಷೆಯ ಪ್ರಕಾರ ಬಿಜೆಪಿ 151 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ. ಕಾಂಗ್ರೆಸ್ 74 ಕ್ಷೇತ್ರಗಳಲ್ಲಿ ಮತ್ತು ಇತರರು 5 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.
ಮಧ್ಯಪ್ರದೇಶ ರಾಜ್ಯದಲ್ಲಿ 2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಪಕ್ಷ ಸರ್ಕಾರ ರಚನೆ ಮಾಡಿತ್ತು. ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಬೇಕಾಯಿತು.












Click it and Unblock the Notifications