ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ಕರ್ನಾಟಕದಲ್ಲಿ ಮಳೆ ಸಾಧ್ಯತೆ: ಹಲವು ರಾಜ್ಯಗಳ ಸ್ಥಿತಿಗತಿ ತಿಳಿಯಿರಿ

|
Google Oneindia Kannada News

ನವದೆಹಲಿ ಸೆಪ್ಟೆಂಬರ್ 21: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಅನಾಹುತ ಸೃಷ್ಟಿಸಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್‌ಡೇಟ್‌ನಲ್ಲಿ ಇಂದು ಕೂಡ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಮತ್ತು ನಿನ್ನೆಯಂತೆಯೇ ಹಲವೆಡೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ ಇಂದು ಮಳೆಯಾಗುವ ಲಕ್ಷಣಗಳು ಇದ್ದು ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ ಎಂದು ನೋಡೋಣ.

ದೆಹಲಿಯ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ದೆಹಲಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಮತ್ತು ಕನಿಷ್ಠ ತಾಪಮಾನ 28 ಡಿಗ್ರಿ ಎಂದು ನಿರೀಕ್ಷಿಸಲಾಗಿದೆ. ಇನ್ನೂ ಉತ್ತರಾಖಂಡ, ಬಿಹಾರ, ಜಾರ್ಖಂಡ್‌ನಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ.

ಹೀಗಾಗಿ ಉತ್ತರಾಖಂಡ, ಬಿಹಾರ, ಜಾರ್ಖಂಡ್‌ನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಒಡಿಶಾದಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಸ್ಥಾನದಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆಯಿದ್ದು, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿಯೂ ಸಹ ಗುಡುಗು ಮಿಂಚಿನೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಭಾಗದಲ್ಲಿ ಮಳೆಯ ನಿರೀಕ್ಷೆ

ದಕ್ಷಿಣ ಭಾಗದಲ್ಲಿ ಮಳೆಯ ನಿರೀಕ್ಷೆ

ಹಾಗಾಗಿ ದಕ್ಷಿಣ ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ವಾತವರಣವಿದ್ದರೂ ಮಳೆಯಾಗಿಲ್ಲ. ಆದರೆ ಇಂದು ಮಳೆ ಬೀಳುವ ಸಾಧ್ಯತೆಗಳು ಇವೆ. ಇನ್ನೂ ತಮಿಳುನಾಡು, ತೆಲಂಗಾಣದಲ್ಲೂ ಲಘು ಮಳೆಯಾಗಲಿದ್ದು, ಕೇರಳ ಮತ್ತು ಈಶಾನ್ಯದಲ್ಲಿ ಮಳೆಯಾಗಬಹುದು ಎಂದು ಐಎಂಡಿ ಹೇಳಿದೆ.

ಭೀಮಾತೀರದ ಗ್ರಾಮಗಳಲ್ಲಿ ಹೈ ಅಲರ್ಟ್

ಭೀಮಾತೀರದ ಗ್ರಾಮಗಳಲ್ಲಿ ಹೈ ಅಲರ್ಟ್

ರಾಜ್ಯದಲ್ಲಿ ಮಳೆ ಇಳಿಮುಖವಾಗಿದ್ರೂ, ಕಲಬುರಗಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ಮತ್ತು ರಾಯಚೂರು ಭಾಗದ ನದಿಗಳು ತುಂಬಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೃಷ್ಣಾ ಮತ್ತು ಭೀಮಾ ನದಿಗೆ ವ್ಯಾಪಕ ನೀರು ಹರಿದು ಬರುತ್ತಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಇನ್ನುಳಿದಂತೆ ರಾಜ್ಯದಲ್ಲಿ ಭಾಗಶಃ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಬೆಂಗಳೂರಿನಲ್ಲಿ ವರುಣಶಾಂತವಾಗಿದ್ದಾನೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದ್ರೆ ಪ್ರವಾಹ ಉಂಟಾಗುವ ಸಾಧ್ಯತೆಗಳು ಹೆಚ್ಚಿವೆ. ಈ ಹಿನ್ನೆಲೆ ಭೀಮಾತೀರದ ಗ್ರಾಮಗಳಲ್ಲಿ ಹೈ ಅಲರ್ಟ್ ಪ್ರಕಟಿಸಲಾಗಿದೆ.

ಕೆಲವೆಡೆ ಹಿಮಪಾತ?

ಕೆಲವೆಡೆ ಹಿಮಪಾತ?

ದೆಹಲಿ ಹೊರತುಪಡಿಸಿ ಹರಿಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯಾಗುತ್ತಿದ್ದರೆ, ನಾಳೆ ಹಿಮಾಚಲದಲ್ಲಿ ಹವಾಮಾನ ತಿರುವು ಪಡೆದುಕೊಂಡಿದೆ. ನಿನ್ನೆ ಮನಾಲಿ ಮತ್ತು ರಾಜಧಾನಿ ಶಿಮ್ಲಾದಲ್ಲಿ ಮಳೆಯಾಗಿದ್ದರೆ, ಮೇಲಿನ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು, ವಾತಾವರಣ ತಂಪಾಗಿದೆ. ಸೆಪ್ಟೆಂಬರ್ ಕೊನೆಯ ವಾರದ ವೇಳೆಗೆ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಇಲಾಖೆ ಹೇಳಿದೆ.

ದೆಹಲಿ ತಾಪಮಾನದಲ್ಲಿ ಇಳಿಕೆ

ದೆಹಲಿ ತಾಪಮಾನದಲ್ಲಿ ಇಳಿಕೆ

ಖಾಸಗಿ ಹವಾಮಾನ ಮಾಹಿತಿ ಸಂಸ್ಥೆ ಸ್ಕೈಮೆಟ್ ಮುಂದಿನ 24 ಗಂಟೆಗಳಲ್ಲಿ ದೆಹಲಿ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಕೊಂಕಣ-ಗೋವಾ, ಗುಜರಾತ್, ಮಹಾರಾಷ್ಟ್ರದಲ್ಲಿ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಚಳಿ ಆವರಿಸಲು ಆರಂಭವಾಗಿದ್ದು ವಾಯು ಮಾಲಿನ್ಯ ಕ್ರಮೇಣ ಹೆಚ್ಚಾಗುತ್ತಿದೆ. ಮಳೆಯಾದೇ ಇದ್ದರೆ ವಾಯು ಮಾಲಿನ್ಯ ಇನ್ನಷ್ಟು ಹೆಚ್ಚುವ ಸಾಧ್ಯತೆ ಕೂಡ ಇದೆ.

ದೆಹಲಿ ವಾಯು ಗುಣಮಟ್ಟ

ದೆಹಲಿ ವಾಯು ಗುಣಮಟ್ಟ

ಕಳೆದ ಕೆಲವು ದಿನಗಳಿಂದ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಹದಗೆಡುತ್ತಿದೆ. 5 ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಲಘು ಮಳೆಯಾಗಿದ್ದರೂ, ಮುಂಗಾರು ಕಡಿಮೆಯಾಗುತ್ತಿರುವುದರಿಂದ ವಾಯುಮಾಲಿನ್ಯ ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ವರ್ಷ ನಗರವು ತನ್ನ ಮೊದಲ ಉತ್ತಮ ಗಾಳಿಯ ಗುಣಮಟ್ಟದ ದಿನವನ್ನು ದಾಖಲಿಸಿದ ಕೇವಲ ಮೂರು ದಿನಗಳ ನಂತರ ಸೋಮವಾರದಂದು ದೆಹಲಿಯ ಗಾಳಿಯ ಗುಣಮಟ್ಟವು ಕಳಪೆ ವರ್ಗಕ್ಕೆ ತಲುಪಿದೆ.

English summary
India Meteorological Department in its latest update expects heavy rains in many states today as well. IMD has issued a warning of rain in Karnataka today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X