Chandrababu Naidu: 4ನೇ ಬಾರಿಗೆ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣವಚನ ಸ್ವೀಕಾರ
ಆಂಧ್ರಪ್ರದೇಶದಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ. ಇದರ ಬೆನ್ನಲ್ಲೆ ಇಂದು ನಾಲ್ಕನೇ ಬಾರಿಗೆ ಸಿಎಂ ಆಗಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಇದೇ ವೇಳೆ ಪವನ್ ಕಲ್ಯಾಣ್ ಅವರು ನಾಯ್ಡು ಅವರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕಾರಿಸಿದರು.
ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಹೇಳುವ ಮೂಲಕ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದರು. ವಿಜಯವಾಡದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ.

ಇದೇ ವೇಳೆ 25 ಜನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಚಂದ್ರಬಾಬು ನಾಯ್ಡು ಅವರಿಗೆ ಮೋದಿ ಅವರು ಪುಷ್ಪಗುಚ್ಚವನ್ನು ನೀಡಿ ಗೌರವಿಸಿದರು. ಅಲ್ಲದೆ ಪರಸ್ಪರ ಅಪ್ಪಿಕೊಂಡರು.
ಆಂಧ್ರಪ್ರದೇಶದಲ್ಲಿ ಟಿಡಿಪಿ-22, ಜೆಎಸ್ಪಿ-3, ಬಿಜೆಪಿ-1 ಸ್ಥಾನದಲ್ಲಿ ಜಯ ಗಳಿಸಿದೆ. ಇದರ ಬೆನ್ನಲ್ಲೆ ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಚಿರಾಗ್ ಪಾಸ್ವಾನ್, ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವು ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದಲ್ಲದೆ ನಟರಾದ ರಜನಿಕಾಂತ್ ಮತ್ತು ಚಿರಂಜೀವಿ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಕಾಣಿಸಿಕೊಂಡರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications