Chandrababu Naidu: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ 14 ದಿನ ನ್ಯಾಯಾಂಗ ಬಂಧನ

ಕೌಶಲಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಭಾನುವಾರ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 30 ಜನರ ಸಮ್ಮುಖದಲ್ಲಿ ಈ ತೀರ್ಪು ಪ್ರಕಟಿಸಲಾಯಿತು.

ಜಾಮೀನು ರಹಿತ ಸೆಕ್ಷನ್ ಅನ್ನು ಸಮರ್ಥನೀಯವಲ್ಲ ಎಂದು ಕರೆದ ನ್ಯಾಯಾಧೀಶರು ಈ ಹಿಂದೆ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು. ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಶನಿವಾರ ಬಂಧಿಸಿತ್ತು.

Chandrababu Naidu

ಟಿಡಿಪಿ ಮುಖ್ಯಸ್ಥರ ತಂಡವು ಎನ್ ಚಂದ್ರಬಾಬು ನಾಯ್ಡು ವಿರುದ್ಧ ಯಾವುದೇ ಜಾಮೀನು ರಹಿತ ವಾರಂಟ್ ಇಲ್ಲ ಎಂದು ಹೇಳಿಕೊಂಡಿದ್ದು, ಬಂಧನ ಅಕ್ರಮವಾಗಿದೆ ಆರೋಪಿಸಿತ್ತು.

ಚಂದ್ರಬಾಬು ನಾಯ್ಡು ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 34 ಮತ್ತು 37 ಜೊತೆಗೆ ಸೆಕ್ಷನ್ 120(b), 166, 167, 418, 420, 465, 468, 201, ಮತ್ತು 109 ಅಡಿಯಲ್ಲಿ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಆರೋಪವನ್ನೂ ಹೊರಿಸಲಾಗಿದೆ.

ಚಂದ್ರಬಾಬು ಅವರನ್ನು ರಾಜಮಂಡ್ರಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ತಿಂಗಳ 22ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+