Char Dham Yatra 2023: ನಿರಂತರ ಹಿಮಪಾತ, ಕೇದಾರನಾಥ ಯಾತ್ರೆ ಸ್ಥಗಿತ
ನಿರಂತರ ಹಿಮಪಾತ ಹಾಗೂ ಮಳೆಯ ಹಿನ್ನೆಲೆಯಲ್ಲಿ ಉತ್ತರಾಖಂಡದ ಕೇದಾರನಾಥ ಯಾತ್ರೆಯನ್ನು ಇಂದು (ಮೇ 3) ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಕೇದಾರನಾಥ ಧಾಮ ರಾಜ್ಯದ ಚಾರ್ ಧಾಮಗಳಲ್ಲಿ ಒಂದಾಗಿದೆ.
ಕೇದಾರನಾಥದಲ್ಲಿ ಹವಾಮಾನ ವೈಪರೀತ್ಯ ಹಾಗೂ ಹಿಮಪಾತದಿಂದಾಗಿ ಇಂದು ಕೇದಾರನಾಥ ಯಾತ್ರಾರ್ಥಿಗಳ ನೋಂದಣಿಯನ್ನೂ ಸ್ಥಗಿತಗೊಳಿಸಲಾಗಿದೆ. ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೋಂದಣಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ರುದ್ರಪ್ರಯಾಗ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮಯೂರ್ ದೀಕ್ಷಿತ್ ತಿಳಿಸಿದ್ದಾರೆ. ರಿಷಿಕೇಶದಲ್ಲಿರುವ ಪ್ರಯಾಣಿಕರ ನೋಂದಣಿ ಕೇಂದ್ರದಲ್ಲಿ ಕೇದಾರನಾಥವನ್ನು ಹೊರತುಪಡಿಸಿ, ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಧಾಮಕ್ಕೆ ಮಾತ್ರ ನೋಂದಣಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದರು.

ಹವಾಮಾನ ಇಲಾಖೆಯು ಸೋಮವಾರ (ಮೇ 1)ದಂದು ಮುಂದಿನ 2-3 ದಿನಗಳ ಕಾಲ ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಮಳೆ ಮತ್ತು ಹಿಮಪಾತದ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ಕೇದಾರನಾಥ ಧಾಮಕ್ಕೆ ಭೇಟಿ ನೀಡಲು ಬರುವ ಯಾತ್ರಾರ್ಥಿಗಳು ತಮ್ಮ ಸುರಕ್ಷತೆಗಾಗಿ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ರುದ್ರಪ್ರಯಾಗ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ತಿಳಿಸಿದ್ದಾರೆ.
ಹವಾಮಾನ ಇಲಾಖೆಯು ಮೇ 4 ರವರೆಗೆ ಉತ್ತರಾಖಂಡದ ಎತ್ತರದ ದೇವಾಲಯವಿರುವ ಪ್ರದೇಶಗಳಲ್ಲಿ ಮಳೆ, ಹಿಮಪಾತದ ಮುನ್ಸೂಚನೆಯನ್ನು ನೀಡಿದೆ. ಯಾತ್ರಾರ್ಥಿಗಳು ವಿಶೇಷವಾಗಿ ಕೇದಾರನಾಥಕ್ಕೆ ಹೋಗುವವರು ಇದ್ದ ಸ್ಥಳದಲ್ಲೇ ಉಳಿಯಲು ಮತ್ತು ಹವಾಮಾನ ಸುಧಾರಿಸಿದ ನಂತರ ಮಾತ್ರ ತಮ್ಮ ಮುಂದಿನ ಪ್ರಯಾಣವನ್ನು ಮುಂದುವರಿಸಲು ಸಲಹೆ ನೀಡಲಾಗಿದೆ.
"ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಹಿಮದ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಕೇದಾರನಾಥ ಯಾತ್ರೆಯನ್ನು ನಾಳೆಯವರೆಗೆ ತಡೆಹಿಡಿಯಲಾಗಿದೆ" ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜವರ್ ಮಂಗಳವಾರ ತಿಳಿಸಿದ್ದಾರೆ.

ಹವಾಮಾನ ಸುಧಾರಿಸುವವರೆಗೆ ಗೌರಿಕುಂಡ್ ಮತ್ತು ಸೋನ್‌ಪ್ರಯಾಗದಲ್ಲಿ ಕಾಯಲು ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ. ಅವರು ತಮ್ಮ ಪ್ರಯಾಣವನ್ನು ಪುನರಾರಂಭಿಸಬಹುದು ಎಂದು ಹೇಳಿದ ಬಳಿಕವಷ್ಟೇ ಪ್ರಯಾಣ ಮುಂದುವರೆಸಲು ಮನವಿ ಮಾಡಲಾಗಿದೆ. ಉತ್ತರಾಖಂಡದ ಕೇದಾರನಾಥ ಮತ್ತು ಇತರ ಹಿಮಾಲಯ ದೇವಾಲಯಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಈ ಪ್ರದೇಶದಲ್ಲಿ ಕೆಟ್ಟ ಹವಾಮಾನ ಮುಂದುವರಿದಿರುವುದರಿಂದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಕೇದಾರನಾಥ ಯಾತ್ರೆಯಲ್ಲಿ ಉತ್ತರಾಖಂಡ ಡಿಜಿಪಿ-
ಡಿಜಿಪಿ ಅಶೋಕ್ ಕುಮಾರ್ ಅವರು ಕೇದಾರನಾಥಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಯಾತ್ರಾರ್ಥಿಗಳಿಗೆ ವಿಶೇಷವಾಗಿ ಹೃದಯ ಸಂಬಂಧಿ ಕಾಯಿಲೆ ಇರುವವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು.
ನಿರಂತರ ಹಿಮಪಾತದ ನಡುವೆ 11,000 ಅಡಿಗಳಷ್ಟು ಎತ್ತರದಲ್ಲಿ ಆಮ್ಲಜನಕದ ಒತ್ತಡ ಕಡಿಮೆಯಾಗಬಹುದು ಎಂದು ಉಲ್ಲೇಖಿಸಿದ ಕುಮಾರ್, ಎಲ್ಲಾ ಯಾತ್ರಾರ್ಥಿಗಳು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದರು. ಹೃದ್ರೋಗ ಇರುವವರು ತಮ್ಮೊಂದಿಗೆ ಔಷಧಿಗಳನ್ನು ತರಬೇಕು ಎಂದು ಅವರು ತಿಳಿಸಿದರು.
ಕೇದಾರನಾಥದಲ್ಲಿ ಹಿಮಪಾತ ಮುಂದುವರಿದಿದ್ದು, ಮಂಗಳವಾರ ರಾತ್ರಿ ಗಂಗೋತ್ರಿ ಮತ್ತು ಯಮುನೋತ್ರಿಯಲ್ಲಿ ಮಧ್ಯಂತರ ಮಳೆ ಸುರಿದಿದೆ. ಇಂದು ಮೋಡ ಕವಿದ ವಾತಾವರಣ ತುಂತುರು ಮಳೆ ಇದೆ. ಹೀಗಾಗಿ ಗಂಗೋತ್ರಿ ಮತ್ತು ಯಮುನೋತ್ರಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ತಮ್ಮ ಯಾತ್ರೆಯು ಅಡೆತಡೆಯಿಲ್ಲದಿದ್ದರೂ ಸಹ ಎಚ್ಚರದಿಂದಿರಲು ತಿಳಿಸಲಾಗಿದೆ.
ಕೇದಾರನಾಥ ಯಾತ್ರೆ ಆರಂಭ-
ಏಪ್ರಿಲ್ 25 ರಂದು ಕೇದಾರನಾಥ ಧಾಮದ ಬಾಗಿಲು ತೆರೆಯಲಾಯಿತು. ಕೇದಾರನಾಥ ದೇವಾಲಯವು ಶಿವನಿಗೆ ಸಮರ್ಪಿತವಾಗಿರುವ ದೇಶದ ಅತ್ಯಂತ ಗೌರವಾನ್ವಿತ ದೇವಾಲಯಗಳಲ್ಲಿ ಒಂದಾಗಿದೆ. ಆರು ತಿಂಗಳ ಅವಧಿಯಲ್ಲಿ ಮಾತ್ರ ದೇಶದಾದ್ಯಂತದ ಜನರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಉಳಿದ ಆರು ತಿಂಗಳು ಇಲ್ಲಿ ಭಾರೀ ಹಿಮಪಾತವಾಗುವುದರಿಂದ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಉತ್ತರಾಖಂಡದ ಚಾರ್ಧಾಮ್ ಯಾತ್ರೆಯು ಭಾರತದ ಅತ್ಯಂತ ಜನಪ್ರಿಯ ಹಿಂದೂ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ನಾಲ್ಕು ಯಾತ್ರೆಯನ್ನು ಚಾರ್‌ಧಾಮ್ ಯಾತ್ರೆ ಎಂದು ಕರೆಯಲಾರುತ್ತದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications