Chardham Yatra 2024: ಯಮುನೋತ್ರಿಯಲ್ಲಿ ಭಕ್ತ ಸಾಗರ, ಉಸಿರುಗಟ್ಟಿಸುವ ವಾತಾವರಣ- ಯಾತ್ರೆ ಮುಂದೂಡುವಂತೆ ಮನವಿ
ಉತ್ತರಾಖಂಡದ ಚಾರ್‌ಧಾಮ್ ಯಾತ್ರೆಯಲ್ಲಿ ಭಕ್ತ ಸಾಗರವೇ ಕಂಡು ಬಂದಿದ್ದು ಯಮುನೋತ್ರಿಯಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಇಂದು (ಮೇ 12) ಭಾನುವಾರವಾದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ಉತ್ತರಕಾಶಿ ಪೊಲೀಸರು ಯಾತ್ರೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ .
ಉತ್ತರಾಖಂಡದಲ್ಲಿ ಮೇ 10ರಂದು ಬಾಬಾ ಕೇದಾರನಾಥನ ಬಾಗಿಲು ತೆರೆಯುವ ಮೂಲಕ ಚಾರ್ ಧಾಮ್ ಯಾತ್ರೆ ಆರಂಭವಾಗಿದೆ.

ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಯಾತ್ರೆಗೆ ಹೊರಟಿದ್ದರಿಂದ ಅಪಾರ ಜನಸ್ತೋಮ ಕಂಡು ಬರುತ್ತಿದೆ. ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು, ಭಕ್ತರು ತಮ್ಮ ಯಾತ್ರೆಯನ್ನು ಮುಂದೂಡಲು ಉತ್ತರಕಾಶಿ ಪೊಲೀಸರು ಭಾನುವಾರ ಒತ್ತಾಯಿಸಿದ್ದಾರೆ.
ಯಮುನೋತ್ರಿಯ ಕಿರಿದಾದ ರಸ್ತೆಗಳಲ್ಲಿ ಭಕ್ತರ ನೂಕುನುಗ್ಗಲು ಕಂಡುಬಂದಿದೆ. ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಭಕ್ತರು ಯಮುನೋತ್ರಿ ಧಾಮವನ್ನು ತಲುಪಿದ್ದಾರೆ. ಈಗ ಅಲ್ಲಿ ಜಾಗ ಉಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರಣಕ್ಕಾಗಿ ಭಕ್ತರಿಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮನವಿ ಮಾಡಲಾಗುತ್ತಿದೆ. ಭಕ್ತರು ತಮ್ಮ ಯಮುನೋತ್ರಿ ಯಾತ್ರೆಯನ್ನು ಮುಂದೂಡಬೇಕು ಎಂದು ಉತ್ತರಕಾಶಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#आवश्यक_सूचना
— Uttarkashi Police Uttarakhand (@UttarkashiPol) May 12, 2024
आज श्री यमुनोत्री धाम पर क्षमता के अनुसार पर्याप्त श्रद्धालु यात्रा के लिये पहुँच चुके हैं। अब और अधिक श्रद्धालुओं को भेजना जोखिम भरा है। जो भी श्रद्धालु आज यमुनोत्री यात्रा पर आने जा रहे हैं, उनसे विनम्र अपील है कि आज यमुनोत्री जी की यात्रा स्थगित करें।
ಯಮುನೋತ್ರಿ ಬಳಿ ಭಾರೀ ಜನಸ್ತೋಮ
ಗರ್ವಾಲ್ ಹಿಮಾಲಯದಲ್ಲಿರುವ ಯಮುನೋತ್ರಿ ದೇವಸ್ಥಾನದ ಬಾಗಿಲು ತೆರೆದ ನಂತರ, ಶನಿವಾರ ದೇವಾಲಯಕ್ಕೆ ಹೋಗುವ ಕಿರಿದಾದ ಗುಡ್ಡದ ರಸ್ತೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಕಂಡುಬಂದರು.

ಗರ್ವಾಲ್ ಹಿಮಾಲಯದ ಯಮುನೋತ್ರಿ ದೇವಸ್ಥಾನದ ಬಾಗಿಲು ಭಕ್ತರಿಗೆ ತೆರೆದ ಒಂದು ದಿನದ ನಂತರ, ಅನೇಕ ಜನರು ಗಂಟೆಗಳ ಕಾಲ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಈ ವಿಡಿಯೋಗಳು ನಿಜಕ್ಕೂ ಬೆಚ್ಚಿ ಬೀಳಿಸುವಂತಿವೆ. ಗುಡ್ಡಗಾಡು ಪ್ರದೇಶದಲ್ಲಿ ಅಂಟಿಕೊಂಡಿರುವ ಕಿರಿದಾದ ರಸ್ತೆಯಲ್ಲಿ ಜನಸ್ತೋಮವೇ ಕಂಡು ಬಂದಿದೆ.
When profit becomes priority for govt. , safety of devotees is compromised. One small accident can take many lives.
— Himalayan Hindu (@himalayanhindu) May 11, 2024
This is imbalance. Dhami govt. should think beyond profit & focus on safety of pilgrims before something goes wrong.
📍 Yamunotri Dham#Kedarnath#CharDhamYatra pic.twitter.com/aoGKARiE7M
ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ 2024
ಈ ವರ್ಷ ಚಾರ್ ಧಾಮ್ ಯಾತ್ರೆಯು ಮೇ 10ರಂದು ಪ್ರಾರಂಭವಾಯಿತು. ಗಂಗೋತ್ರಿ, ಯಮುನೋತ್ರಿ ಮತ್ತು ಕೇದಾರನಾಥ ಸೇರಿದಂತೆ ಮೂರು ದೇವಾಲಯಗಳ ಬಾಗಿಲು ತೆರೆಯಲಾಯಿತು. ಇಂದು ಅಂದರೆ ಮೇ 12 ರಂದು ಬದರಿನಾಥದ ಬಾಗಿಲು ತೆರೆಯಲಾಗಿದೆ.
ಚಾರ್ ಧಾಮ್ ಯಾತ್ರೆಯು ಹಿಂದೂ ಧರ್ಮದಲ್ಲಿ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ಯಾತ್ರೆ ಸಾಮಾನ್ಯವಾಗಿ ಏಪ್ರಿಲ್-ಮೇ ನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯುತ್ತದೆ. ಚಾರ್ ಧಾಮ್ ಯಾತ್ರೆಯನ್ನು ಪ್ರದಕ್ಷಿಣಾಕಾರವಾಗಿ ಪೂರ್ಣಗೊಳಿಸಬೇಕು ಎಂದು ನಂಬಲಾಗಿದೆ.
ಆದ್ದರಿಂದ, ಯಾತ್ರೆಯು ಯಮುನೋತ್ರಿಯಿಂದ ಪ್ರಾರಂಭವಾಗುತ್ತದೆ, ಗಂಗೋತ್ರಿಯ ಕಡೆಗೆ ಚಲಿಸುತ್ತದೆ, ನಂತರ ಕೇದಾರನಾಥಕ್ಕೆ ಹೋಗಿ ಅಂತಿಮವಾಗಿ ಬದರಿನಾಥದಲ್ಲಿ ಕೊನೆಗೊಳ್ಳುತ್ತದೆ.
ಬದರಿನಾಥ ದೇವಾಲಯವು 10,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿದೆ. ಚಾರ್ ಧಾಮ್ ಯಾತ್ರೆ ಕಳೆದ ಎರಡು ವರ್ಷಗಳಲ್ಲಿ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications