Breaking: ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ!
ರಾಜಸ್ಥಾನದ ಭರತ್‌ಪುರದಲ್ಲಿ ಇಂದು ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿಗಳು ರಕ್ಷಣ ಕಾರ್ಯದಲ್ಲಿ ತೊಡಗಿದ್ದಾರೆ.
ರಾಜಸ್ಥಾನದ ಭರತ್‌ಪುರದಲ್ಲಿ ಇಂದು ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿಗಳು ರಕ್ಷಣ ಕಾರ್ಯದಲ್ಲಿ ತೊಡಗಿದ್ದಾರೆ. ತಾಂತ್ರಿಕ ದೋಷದಿಂದಾಗಿ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಬೆಳಗ್ಗೆ ಭಾರತ್‌ಪುರದ ಸೇವರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗ್ಲಾ ವೀಸಾದಲ್ಲಿ ಭಾರತೀಯ ಸೇನೆಯ ಫೈಟರ್ ಜೆಟ್ ಪತನಗೊಂಡಿದೆ. ಫೈಟರ್ ಜೆಟ್ ಅಪಘಾತಕ್ಕೀಡಾದ ಬೆನ್ನಲ್ಲೇ ಅದು ಸ್ಫೋಟಗೊಂಡು ಬೆಂಕಿ ಆವರಿಸಿಕೊಂಡಿದೆ. ಈ ಫೈಟರ್ ಜೆಟ್ ಹಳ್ಳಿಯ ಸಮೀಪವಿರುವ ಬಂಜರು ಭೂಮಿಯಲ್ಲಿ ಪತನಗೊಂಡಿದ್ದು ಸ್ಥಳೀಯರಲ್ಲಿ ಕೆಲ ಹೊತ್ತು ಆತಂಕ ಮನೆ ಮಾಡಿತ್ತು. ಆದರೆ ಭಾರೀ ಆಪಾಯವೊಂದು ತಪ್ಪಿದಂತಾಗಿದೆ. ವಿಮಾನ ಪತನದ ಬಗ್ಗೆ ಮಾಹಿತಿ ಬಂದ ತಕ್ಷಣ ಎಲ್ಲಾ ಪೊಲೀಸ್ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಉಚ್ಚೈನ್ ಪ್ರದೇಶದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎನ್ನಲಾದ ವಿಮಾನ ಉತ್ತರ ಪ್ರದೇಶದ ಆಗ್ರಾದಿಂದ ಹೊರಟಿತ್ತು. ಸದ್ಯ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಕೂಡಲೇ ಅಪಘಾತ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸದಿರುವುದು ಸಮಾಧಾನದ ಸಂಗತಿ ಎಂದು ಜಿಲ್ಲಾಧಿಕಾರಿ ಅಲೋಕ್ ರಂಜನ್ ತಿಳಿಸಿದ್ದಾರೆ. ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಜಿಲ್ಲಾಧಿಕಾರಿ ಅಲೋಕ್ ರಂಜನ್ ಪ್ರಕಾರ, "ಪೊಲೀಸರು ಮತ್ತು ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳದಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ" ಎಂದಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications