ವಂಚನೆ ಆರೋಪ: ಪತ್ನಿ ಮೇಲೆ ಕಾರು ಚಲಾಯಿಸಿದ ಚಲನಚಿತ್ರ ನಿರ್ಮಾಪಕ ಬಂಧನ
ಮುಂಬೈ ಅಕ್ಟೋಬರ್ 28: ಪತ್ನಿ ಮೇಲೆ ವಾಹನ ಚಲಾಯಿಸಿದ ಚಲನಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಅವರನ್ನು ಮುಂಬೈ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ. ಇನ್ನೊಬ್ಬ ಮಹಿಳೆಯೊಂದಿಗೆ ಕಾರಿನಲ್ಲಿ ಕಂಡ ಕಮಲ್ ಕಿಶೋರ್ ಮಿಶ್ರಾ ಅವರನ್ನು ತಡೆಯಲು ಪತ್ನಿ ಮುಂದಾಗುತ್ತಿದ್ದಂತೆ ಕಮಲ್ ಮಿಶ್ರಾ ಆಕೆಗೆ ಡಿಕ್ಕಿ ಹೊಡೆದು ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ವೈರಲ್ ಆದ ಬಳಿಕ ಮಿಶ್ರಾ ಮೇಲೆ ಹಲವಾರು ಆರೋಪಗಳು ಕೇಳಿ ಬರುತ್ತಿವೆ.
ಅಕ್ಟೋಬರ್ 19 ರಂದು ಅಂಧೇರಿ (ಪಶ್ಚಿಮ) ದಲ್ಲಿರುವ ದಂಪತಿಗಳ ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ. ಮಿಶ್ರಾ ಅವರ ಪತ್ನಿ ಅವರು ಕಾರಿನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಇರುವುದನ್ನು ಕಂಡಿದ್ದಾರೆ. ಇದನ್ನು ಕಂಡು ಅವರ ಕಾರಿನ ಬಳಿ ತೆರಳಿದ್ದಾರೆ. ಅಷ್ಟೇ ಪತ್ನಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಕಮಲ್ ಮಿಶ್ರಾ ಅವರ ಮೇಲೆ ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
|
ಚಲನಚಿತ್ರ ನಿರ್ಮಾಪಕ ಕಮಲ್ ಮಿಶ್ರಾ ಬಂಧನ
ಘಟನೆಗೆ ಸಂಬಂಧಿಸಿದಂತೆ ಗುರುವಾರ ಹಿಂದಿ ಚಲನಚಿತ್ರ 'ದೇಹತಿ ಡಿಸ್ಕೋ' ನಿರ್ಮಾಪಕ ಕಮಲ್ ಮಿಶ್ರಾ ವಿರುದ್ಧ ಅವರ ಪತ್ನಿ ದೂರು ನೀಡಿದ್ದಾರೆ. ವಂಚನೆ ಆರೋಪ ಮಾಡಿದ್ದಾರೆ. ನಂತರ ಕಮಲ್ ಮಿಶ್ರಾ ಅವರನ್ನು ಮನೆಯಿಂದ ಅಂಬೋಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಶುಕ್ರವಾರ ಮುಂಜಾನೆ ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಮಲ್ ಪತ್ನಿಗೆ ಗಾಯ
ದೂರಿನ ಪ್ರಕಾರ, ಕಮಲ್ ಮಿಶ್ರಾ ಅವರ ಪತ್ನಿ ತನ್ನ ಪತಿಯನ್ನು ಹುಡುಕುತ್ತಾ ಹೊರಬಂದಾಗ ಪಾರ್ಕಿಂಗ್ ಪ್ರದೇಶದಲ್ಲಿ ತನ್ನ ಕಾರಿನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಆತನನ್ನು ಕಂಡರು. ಚಿತ್ರ ನಿರ್ಮಾಪಕನ ಪತ್ನಿ ಆತನನ್ನು ಎದುರಿಸಲು ಹೋದಾಗ, ಅವರು ಸ್ಥಳದಿಂದ ತಪ್ಪಿಸಿಕೊಳ್ಳಲು ಕಾರನ್ನು ಚಲಾಯಿಸಿದರು. ಈ ಪ್ರಕ್ರಿಯೆಯಲ್ಲಿ ಅವರ ಪತ್ನಿಗೆ ಕಾರು ಡಿಕ್ಕಿ ಹೊಡೆದು ಅವರ ಕಾಲುಗಳು, ಕೈ ಮತ್ತು ತಲೆಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಮಲ್ ಕಿಶೋರ್ ಮಿಶ್ರಾ ವಿರುದ್ಧ ಪತ್ನಿ ದೂರು
ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಲನಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರಾ ಅವರು ತಮ್ಮ ಪತ್ನಿಗೆ ಡಿಕ್ಕಿ ಹೊಡೆದ ಆರೋಪದಲ್ಲಿ ಮುಂಬೈ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 279 ಮತ್ತು 338 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಬ್ಬ ಮಹಿಳೆಯೊಂದಿಗೆ ಇರುವಾಗ ಸಿಕ್ಕಿಬಿದ್ದ ನಂತರ ಕಮಲ್ ಮಿಶ್ರಾ ತನ್ನ ಪತ್ನಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಕಾರನ್ನು ಪತ್ನಿ ಮೇಲೆ ಚಲಾಯಿಸಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ಪಾರ್ಕಿಂಗ್ ಸ್ಥಳದ ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಿಶ್ರಾ ಅವರ ಪತ್ನಿ ಬೇರೆ ಮಹಿಳೆಯೊಂದಿಗೆ ಆತನನ್ನು ನೋಡಿದಾಗ, ಆಕೆ ತನ್ನ ಪತಿಯನ್ನು ಕಾರಿನಲ್ಲಿ ಹೋಗದಂತೆ ತಡೆಯಲು ಪ್ರಯತ್ನಿಸಿದಳು. ತನ್ನ ಪತಿಯನ್ನು ಹುಡುಕಲು ಕಟ್ಟಡದಿಂದ ಹೊರಬಂದಾಗ ಪಾರ್ಕಿಂಗ್ ಸ್ಥಳದಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಆತನನ್ನು ಕಂಡು ಈ ಘಟನೆ ಸಂಭವಿಸಿದೆ ಎಂದು ಮಹಿಳೆ ತನ್ನ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಇಡೀ ಘಟನೆ ಪಾರ್ಕಿಂಗ್ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications