Cheetah Died: ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!
ಭೋಪಾಲ್ ಏಪ್ರಲ್ 24: ಮಹಾರಾಷ್ಟ್ರದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಸಾವನ್ನಪ್ಪಿದೆ.
ಉದಯ್ (ಚಿರತೆ ಹೆಸರು)ಗೆ ಆರೋಗ್ಯ ಹದಗೆಟ್ಟ ನಂತರ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉದಯ್ ಸಾವನ್ನಪ್ಪಿದೆ. ಘಟನೆ ಕುರಿತು ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್.ಚೌಹಾಣ್ ಮಾಹಿತಿ ನೀಡಿದ್ದಾರೆ. ಆದರೆ ಚಿರತೆಯ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಮೊನ್ನೆ ಮಾರ್ಚ್ 27 ರಂದು ಐದು ವರ್ಷದ ಹೆಣ್ಣು ಚಿರತೆ ಸಾಶಾ ಕಿಡ್ನಿ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಸಶಾವನ್ನು ಭಾರತಕ್ಕೆ ಕರೆತಂದಾಗ ಅದಕ್ಕೆ ಈಗಾಗಲೇ ಕಿಡ್ನಿ ಸಮಸ್ಯೆ ಇತ್ತು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಕಳೆದ ವರ್ಷ ನಮೀಬಿಯಾದಿಂದ 8 ಚಿರತೆಗಳನ್ನು ತರಲಾಗಿತ್ತು. ಅದರಲ್ಲಿ ಸಾಶಾ ಕೂಡ ಒಂದು. 17 ಫೆಬ್ರವರಿ 2023 ರಂದು ಭಾರತಕ್ಕೆ ತರಲಾದ 12 ಚಿರತೆಗಳಲ್ಲಿ ಉದಯ್ ಕೂಡ ಸೇರಿದೆ. 17 ಫೆಬ್ರವರಿ 2023 ರಂದು 7 ಗಂಡು ಮತ್ತು 5 ಹೆಣ್ಣು ಚಿರತೆಗಳನ್ನು ಭಾರತಕ್ಕೆ ತರಲಾಯಿತು.
ಕಳೆದ ವರ್ಷ ಸೆಪ್ಟೆಂಬರ್ 17 ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಮೀಬಿಯಾದಿಂದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ತರಲಾದ 8 ಚಿರತೆಗಳನ್ನು ಬಿಡುಗಡೆ ಮಾಡಿದ್ದರು ಎಂಬುದು ಗಮನಿಸಬೇಕಾದ ಸಂಗತಿ. 1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ವಿವರಿಸಿ, ನಂತರ 8 ಚಿರತೆಗಳನ್ನು ಆಫ್ರಿಕಾದ ನಮೀಬಿಯಾದಿಂದ ಇಂಡಿಯಾ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ತರಲಾಯಿತು. ಅರಣ್ಯದ ಪರಿಸರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಭಾರತ ಸರ್ಕಾರ ಈ ಚಿರತೆಗಳನ್ನು ಭಾರತಕ್ಕೆ ತಂದಿತು.
ಆದರೆ ಚಿರತೆಗಳು ಒಂದೊಂದಾಗಿ ಸಾವನ್ನಪ್ಪುತ್ತಿರುವುದು ಕಂಡರೆ ಅವುಗಳ ರಕ್ಷಣೆಯ ಕೊರತೆ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗುತ್ತಿದೆ.
ಚೀತಾ ಯೋಜನೆಯಡಿಯಲ್ಲಿ, ಭಾರತ ಸರ್ಕಾರವು ಮತ್ತೊಮ್ಮೆ ಭಾರತದಲ್ಲಿ ಚಿರತೆಗಳನ್ನು ಪುನರ್ವಸತಿ ಮಾಡಲು ಬಯಸುತ್ತದೆ. ಭಾರತದಲ್ಲಿ ಪ್ರಾಣಿ ಸಂರಕ್ಷಣೆಯ ಇತಿಹಾಸ ಬಹಳ ಹಳೆಯದು. ಪ್ರಾಜೆಕ್ಟ್ ಟೈಗರ್ ಅತ್ಯಂತ ಯಶಸ್ವಿ ಯೋಜನೆಯಾಗಿದೆ. ಇದನ್ನು 1972 ರಲ್ಲಿ ಪ್ರಾರಂಭಿಸಲಾಯಿತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications