Army helicopter crash: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ
ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ
ಅರುಣಾಚಲ ಪ್ರದೇಶ, ಮಾರ್ಚ್ 16: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನಗೊಂಡಿದೆ. ಬೆಳಗ್ಗೆ 9.15ರ ಸುಮಾರಿಗೆ ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲ್ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ.
Indian Army Cheetah helicopter has crashed near Mandala hills area of Arunachal Pradesh. Search operation for the pilots has started. More details awaited: Army sources pic.twitter.com/fqD0uu767w
— ANI (@ANI) March 16, 2023
ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಸೇನಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಡಿಫೆನ್ಸ್ ಪಿಆರ್ಐಒ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಅವರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಮಂಡಲಾ ಬಳಿ ಚೀತಾ ಅಪಘಾತಕ್ಕೀಡಾಗುವಾಗ ಮುನ್ನ ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್, ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಮೂಲಕ ಸೆಂಗೆಯಿಂದ ಮಿಸ್ಸಾಮರಿಗೆ ತೆರಳುತ್ತಿದ್ದರು.












Click it and Unblock the Notifications