ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 14ಕ್ಕೆ ರಾಷ್ಟ್ರವ್ಯಾಪ್ತಿ ಮೆಡಿಕಲ್ ಶಾಪ್ ಗಳ ಬಂದ್

By Mahesh
|
Google Oneindia Kannada News

ಬೆಂಗಳೂರು, ಅಕ್ಟೋಬರ್ 01: ಕೇಂದ್ರ ಸರ್ಕಾರದ ಆನ್‌ಲೈನ್ ಫಾರ್ಮಸಿ ಮೂಲಕ ಔಷಧಿ ಮಾರಾಟ ಮಾಡುವ ಕ್ರಮ ಖಂಡಿಸಿ ಔಷಧ ವ್ಯಾಪಾರಿಗಳ ಸಂಘ ಕರೆ ನೀಡಿರುವ ಬಂದ್ ಗೆ ಕರ್ನಾಟಕದ ಔಷಧಿ ಮಾರಾಟಗಾರರ ಸಂಘ ಕೂಡಾ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಅಕ್ಟೋಬರ್ 14ರಂದು ಔಷಧ ಸಿಗುವುದು ಕಷ್ಟವಾಗಲಿದೆ.

ಕರ್ನಾಟಕದ ಕೆಮಿಸ್ಟ್ ಹಾಗೂ ಡ್ರಗಿಸ್ಟ್ ಸಂಘದ ಪದಾಧಿಕಾರಿಗಳಾದ ಎಂ.ಸಿ.ಮೇದಪ್ಪ, ರಘುನಾಥರೆಡ್ಡಿ, ಎಸ್. ಶಿವಾನಂದ ಅವರು ಮಾತನಾಡಿ, ಇತ್ತೀಚೆಗೆ ಕೇಂದ್ರ ಸರ್ಕಾರ ಆನ್‌ಲೈನ್ ಫಾರ್ಮಸಿಯಲ್ಲಿ ಔಷಧಿ ಮಾರಾಟ ಮಾಡುವುದಕ್ಕೆ ಅನುಮತಿ ನೀಡುತ್ತಿದೆ. ಇದರಿಂದ ಚಿಲ್ಲರೆ, ಸಗಟು ಔಷಧ ವ್ಯಾಪಾರವನ್ನು ನಂಬಿಕೊಂಡು ಬದುಕುತ್ತಿರುವವರು ಬೀದಿಗೆ ಬೀಳಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

Chemists’ strike on October 14 against online medicine sale

ಕೇಂದ್ರ ಸರ್ಕಾರದ ಡ್ರಗ್ಸ್ ಮತ್ತು ಕಾಸ್ಮೊಟಿಕ್ ಆಕ್ಟ್ 1940 ಸೆಕ್ಷನ್ 65(10) (ಎ) ರಂತೆ ಯಾವುದೇ ಔಷಧಿಯನ್ನು ವಿತರಣೆ ಮಾಡುವ ಮುನ್ನ ವೈದ್ಯರ ಸಲಹೆ ಚೀಟಿಯ ಮುಖಾಂತರ ನೋಂದಾಯಿತ ಅರ್ಹ ಔಷಧ ವ್ಯಕ್ತಿಯ ಮೂಲಕ ವಿತರಿಸಬೇಕೆಂದು ನಿಯಮವಿದೆ. ಸೆಕ್ಷನ್ 65 (ಬಿ) ಪ್ರಕಾರ ಗ್ರಾಹಕರ ಹೆಸರು ಹಾಗೂ ವಿಳಾಸ ಸರಿಯಾಗಿರಬೇಕಾಗುತ್ತದೆ. ಅದರೆ, ಆನ್ ಲೈನ್ ಮಾರಾಟದಿಂದ ಯಾವುದೇ ನಿಯಮ ಪಾಲನೆಯಾಗುವುದಿಲ್ಲ ಎಂದಿದ್ದಾರೆ.

ಆನ್‌ಲೈನ್ ಫಾರ್ಮಸಿ ಮೂಲಕ ಔಷಧ ವಿತರಣೆ ಮಾಡುವ ಸಂದರ್ಭದಲ್ಲಿ ಮತ್ತು ಬರುವ ಔಷಧಗಳು ಸುಲಭ ರೀತಿಯಲ್ಲಿ ಮನೆ ಬಾಗಿಲಿಗೆ ದೊರಕುವುದರಿಂದ ಯುವಜನತೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಸರಿಯಾಗಿ ಔಷಧಿಗಳು ಸಿಗುವುದಿಲ್ಲ. ಜೀವರಕ್ಷಕ ಔಷಧಗಳಿಗೆ ಸಂಚಕಾರ ಉಂಟಾಗುತ್ತದೆ. ಇದನ್ನು ವಿರೋಧಿಸಿ ಅ.14ರಂದು ಔಷಧ ವ್ಯಾಪಾರ ಬಂದ್ ಮಾಡಲಾಗುವುದು. ಸಾರ್ವಜನಿಕರಿಗಾಗುವ ತೊಂದರೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು.

English summary
All India Organisation of Chemists and Druggists (AIOCD) has decided that chemists, druggist across the India would go on strike on October 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X