ಚೆನ್ನೈ: ಕುರ್ಚಿ ತರಲು ವಿಳಂಬ: ಕಾರ್ಯಕರ್ತರ ಮೇಲೆ ಕಲ್ಲು ಎಸೆದ ಡಿಎಂಕೆ ಸಚಿವ
ಮಂಗಳವಾರ ತಿರುವಳ್ಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಗೆ ಕುರ್ಚಿಗಳನ್ನು ತರಲು ವಿಳಂಬ ಮಾಡಿದ್ದಕ್ಕಾಗಿ ಡಿಎಂಕೆ ಸಚಿವ ಎಸ್‌ಎಂ ನಾಸರ್ ಮಾಡಿದ್ದೇನು ಗೊತ್ತಾ?
ತಿರುವಳ್ಳೂರ್ ಜನವರಿ 25: ಡಿಎಂಕೆ ಸಚಿವ ಎಸ್‌ಎಂ ನಾಸರ್ ಅವರು ಮಂಗಳವಾರ ತಿರುವಳ್ಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಗೆ ಕುರ್ಚಿಗಳನ್ನು ತರಲು ವಿಳಂಬ ಮಾಡಿದ್ದಕ್ಕಾಗಿ ಪಕ್ಷದ ಕಾರ್ಯಕರ್ತರ ಮೇಲೆ ಕಲ್ಲು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ರಾಜಕೀಯ ನಾಯಕರು ಅಂದ್ರೆ ಕಾರ್ಯಕರ್ತರಿಗೆ ಮಾದರಿಯಾಗಿರಬೇಕು. ಅದನ್ನ ಬಿಟ್ಟು ಕೋಪದ ಕೈಗೆ ಬುದ್ಧಿ ಕೊಟ್ರೆ ಎಡವಟ್ಟೇ ಆಗೋದು. ಆದ್ರಿಲ್ಲಿ ಸಚಿವರು ಮಾಡಿರೋ ಕೆಲಸ ನೋಡಿದ್ರೆ ನೀವೇ ಶಾಕ್ ಆಗ್ತೀರಾ.
ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ಸಚಿವರು ಕಲ್ಲು ಎತ್ತಿಕೊಂಡು ಪಕ್ಷದ ಕಾರ್ಯಕರ್ತರ ಕಡೆಗೆ ಎಸೆಯುತ್ತಿರುವುದು ಕಂಡುಬಂದಿದೆ. ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವರು ಬುಧವಾರ ನಡೆಯಲಿರುವ ಕಾರ್ಯಕ್ರಮದ ವ್ಯವಸ್ಥೆಗಳನ್ನು ಪರಿಶೀಲಿಸಲು ಬಂದಿದ್ದರು. ಈ ವೇಳೆ ಕಾರ್ಯಕರ್ತರು ಕುರ್ಚಿ ನೀಡಲು ತಡವಾಗಿದ್ದಕ್ಕೆ ರೊಚ್ಚಿಗೆದ್ದ ಸಚಿವರು ಕಲ್ಲು ಎಸೆದಿದ್ದಾರೆ. ಸ್ಥಳೀಯರು ಸಚಿವರ ಈ ವರ್ತನೆಯನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
#WATCH | Tamil Nadu Minister SM Nasar throws a stone at party workers in Tiruvallur for delaying in bringing chairs for him to sit pic.twitter.com/Q3f52Zjp7F
— ANI (@ANI) January 24, 2023
ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಈ ಘಟನೆ ಬಗ್ಗೆ ಟ್ವೀಟ್ ಮಾಡಿ, ಪಕ್ಷದ ಕಾರ್ಯಕರ್ತರಿಗೆ ಅಗೌರವ ತೋರಿದ್ದಾರೆ. ದೇಶದ ಇತಿಹಾಸದಲ್ಲಿ ಸಚಿವರಾದವರು ಜನರ ಮೇಲೆ ಕಲ್ಲು ಎಸೆಯುವುದನ್ನು ಯಾರಾದರೂ ನೋಡಿದ್ದೀರಾ? ಇದನ್ನು ಡಿಎಂಕೆ ಸರ್ಕಾರದ ಸಚಿವರು ಪ್ರದರ್ಶಿಸಿದ್ದಾರೆ ಎಂದು ಕಿಡಿಕಾರಿದರು.
In India’s history, has anybody seen a govt minister throwing stones at people?
— K.Annamalai (@annamalai_k) January 24, 2023
Display of this by a @arivalayam party DMK Govt Minister, Thiru @Avadi_Nasar.
Throwing stones at people in frustration
No decency, No decorum & treating people like slaves! That's DMK for you. pic.twitter.com/D2iAKV4YZ4
ತಮಿಳುನಾಡಿನ ಸಚಿವರು ಹತಾಶೆಯಿಂದ ಜನರ ಮೇಲೆ ಕಲ್ಲು ಎಸೆಯುತ್ತಿದ್ದಾರೆ. ಮರ್ಯಾದೆ ಇಲ್ಲ. ಜನರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ತಮಿಳುನಾಡಿನ ತಿರುವಳ್ಳೂರಿನಲ್ಲಿ ಭಾಷಾ ಹೋರಾಟದ ಹೋರಾಟಗಾರರ ಕಾರ್ಯಕ್ರಮ ಇಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡ ಭಾಗಿಯಾಗಲಿದ್ದಾರೆ. ಇದಕ್ಕಾಗಿ ನಿನ್ನೆ ತಿರುವಳ್ಳೂರು ಐಸಿಎಂಆರ್ ಬಳಿ 15 ಎಕರೆ ಭೂಮಿಯಲ್ಲಿ ವೇದಿಕೆ ನಿರ್ಮಿಸಲಾಗುತ್ತಿತ್ತು. ವೇದಿಕೆ ನಿರ್ಮಾಣದ ಪರಿಶೀಲನೆಗಾಗಿ ಸಚಿವ ಎಸ್.ಎಂ ನಾಸರ್ ತೆರಳಿದ್ದ ವೇಳೆ ಕುರ್ಚಿ ಪ್ರಸಂಗ ನಡೆಸಿದೆ. ಸಚಿವರು ಕಲ್ಲು ಎಸೆದಿರೋ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರ ಈ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications