ಪೊಲೀಸ್‌ ಠಾಣೆಯಲ್ಲಿಟ್ಟಿದ್ದ 22 ಕೆಜಿ ಗಾಂಜಾ ತಿಂದು ಮುಗಿಸಿದ ಇಲಿಗಳು: ಚೆನ್ನೈನಲ್ಲಿ ವಿಲಕ್ಷಣ ಘಟನೆ- ವಿವರ ತಿಳಿಯಿರಿ

ಚೆನ್ನೈ, ಜುಲೈ 05: ಗಾಂಜಾ ಶೇಖರಿಸಿದ್ದ ಆರೋಪದಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ. ಈ ಇಬ್ಬರು ಆರೋಪಿಗಳಿಂದ 22 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿದ ನಂತರ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ಅದನ್ನು ಪೊಲೀಸ್ ಉಗ್ರಾಣದಲ್ಲಿ ಇರಿಸಲಾಗಿತ್ತು. ಅಲ್ಲಿದ್ದ ಸುಮಾರು 22 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಇಲಿಗಳು ತಿಂದುಹಾಕಿವೆ ಎಂದು ಚೆನ್ನೈ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

rats had eaten about 22 kilograms of ganja

ಒಟ್ಟು 22 ಕಿಲೋಗ್ರಾಂ ಗಾಂಜಾದಲ್ಲಿ ಪೊಲೀಸರು ಕೇವಲ 50 ಗ್ರಾಂಗಳನ್ನು ಮಾತ್ರ ಸಾಕ್ಷ್ಯವಾಗಿ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿದೆ.

ಉಳಿದ 50 ಗ್ರಾಂ ಗಾಂಜಾವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 21.9 ಕೆಜಿ ಗಾಂಜಾವನ್ನು ಇಲಿಗಳು ಸೇವಿಸಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರಕರಣವು 2022 ರ ಹಿಂದಿನದಾಗಿದೆ. ರಾಜಗೋಪಾಲ್ ಮತ್ತು ನಾಗೇಶ್ವರ ರಾವ್ ಅವರನ್ನು ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ ಪ್ರದೇಶದಿಂದ ಪೊಲೀಸರು ಬಂಧಿಸಿದ್ದರು. ಅವರಿಂದ 22 ಕೆಜಿಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಯಿತು. ಆ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದರು. ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಯಿತು.

rats had eaten about 22 kilograms of ganja

ಇಲಿಗಳು ಗಾಂಜಾ ಅಥವಾ ಇತರ ಮಾದಕ ವಸ್ತುವನ್ನು ಸೇವಿಸಿರುವುದು ಇದೇ ಮೊದಲ ನಿದರ್ಶನವಲ್ಲ ಎಂದು ಪೊಲೀಸರು ಕೋರ್ಟ್‌ಗೆ ತಿಳಿಸಿದ್ದಾರೆ.

ನವೆಂಬರ್ 2022 ರಲ್ಲಿ ಇದೇ ರೀತಿಯ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿತ್ತು. ಇಲಿಗಳು 500 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಸೇವಿಸಿದ್ದವು. ಗಾಂಜಾವನ್ನು ವಶಪಡಿಸಿಕೊಂಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು.

ಈ ಪ್ರಕರಣದಲ್ಲಿಯೂ ಪೊಲೀಸರು ನ್ಯಾಯಾಲಯಕ್ಕೆ ಸಾಕ್ಷ್ಯ ಒದಗಿಸುವಲ್ಲಿ ವಿಫಲರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+