Rains: ಆಕಾಶದಲ್ಲಿ ಲೈಟ್ ಶೋ: ಕಟ್ಟಡದ ಮೇಲೆ ಸಿಡಿಲು- ದಂಗಾಗುವ ವಿಡಿಯೋ ವೈರಲ್!

ಚೆನ್ನೈ ಅಕ್ಟೋಬರ್ 15: ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ವೇಳೆ ಗುಡುಗು ಸಿಡಿಲಿನ ನಡುವೆ ಮಿಂಚು ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹಂಚಿಕೊಳ್ಳಲಾಗುತ್ತಿದೆ. ಸಿಡಿಲು ಕಟ್ಟಡದ ಮೇಲೆ ಬಿದ್ದಿರುವ ಈ ವಿಡಿಯೋ ಜನರ ಗಮನ ಸೆಳೆಯುತ್ತಿದೆ.

ಹೌದು... ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಮಳೆ ಅರ್ಭಟ ಜೋರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಮನೆ ಬಿಟ್ಟು ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಮಳೆಯ ನಡುವೆ ಕಳೆದ ದಿನ ರಾತ್ರಿ ಗುಡುಗು ಮಿಂಚು ಆಕಾಶವನ್ನು ಲೈಟ್ ಶೋ ಆಗಿ ಪರಿವರ್ತಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಟ್ಟಡದ ಮೇಲೆ ಸಿಡಿಲು ಬೀಳುವ ಈ ವೀಡಿಯೋಗಳು ನಿಜಕ್ಕೂ ಭಯಾನಕವಾಗಿವೆ. ಈ ವೈರಲ್ ವೀಡಿಯೊವನ್ನು ನೋಡಿದ ಕೆಲವು ನೆಟ್ಟಿಗರು ಆತಂಕವನ್ನು ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದನ್ನು ತುಂಬಾ ಸುಂದರವಾದ ದೃಶ್ಯ ಎಂದು ಬಣ್ಣಿಸಿದ್ದಾರೆ.

Chennai Rains video of lightning striking a building in Chennai has gone viral

ಸೋಮವಾರ ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಮಳೆ ಮತ್ತು ಗುಡುಗು ಸಿಡಿಲಿನ ಹಲವು ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕಳೆದ ದಿನ ರಾತ್ರಿ ಆಕಾಶದಲ್ಲಿ ಅದ್ಭುತವಾದ ಮಿಂಚು ಗೋಚರಿಸಿದ್ದು, ಈ ವೀಡಿಯೊ ನೋಡುಗರನ್ನು ಗಾಬರಿಗೊಳಿಸಿದೆ. ನೋಡ ನೋಡುತ್ತಿದ್ದಂತೆ ಕಟ್ಟಡ ಮೇಲೆ ಮಿಂಚು ಬೀಳುವ ದೃಶ್ಯ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ. ಕೆಲವರು ಪ್ರಕೃತಿಯ ಅಗಾಧ ಶಕ್ತಿಗೆ ವಿಸ್ಮಯ ವ್ಯಕ್ತಪಡಿಸಿದರೆ, ಇನ್ನು ಕೆಲವರು ಅದರ ಬೆರಗುಗೊಳಿಸುವ ಸೌಂದರ್ಯಕ್ಕೆ ಮಾರುಹೋಗಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 15 ಮಂಗಳವಾರದಂದು ರಾಜ್ಯದ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ತಮಿಳುನಾಡು ಸರ್ಕಾರ ಸೂಚಿಸಿದೆ. ಈ ಜಿಲ್ಲೆಗಳಲ್ಲಿನ ಉದ್ಯೋಗಿಗಳಿಗೆ ಅಕ್ಟೋಬರ್ 18 ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಿಗೆ ಮನವಿ ಮಾಡಿದ್ದಾರೆ.

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಎಚ್ಚರಿಕೆ

ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಎಂ) ಪ್ರವಾಹದಿಂದ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಸಿದ್ಧ ಎಂದು ಹೇಳಿಕೊಂಡಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ತಮಿಳುನಾಡಿನಾದ್ಯಂತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+