ಭೀಕರ ಅಪಘಾತದಲ್ಲಿ ಕಿರುತೆರೆ ನಟನ ಮಗ ದಾರುಣ ಸಾವು

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕಿರುತೆರೆ ನಟನ ಮನೆಯಲ್ಲಿ ಸೂತಕ ಮನೆ ಮಾಡಿದೆ. ದೀಪಾವಳಿ ಆಚರಿಸಿ ಮುಗಿಸಿ ವಾಪಸ್ ಬರುತ್ತಿದ್ದಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟನ ಮಗ ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿರುತೆರೆ ನಟ ಕಾರ್ತಿಕ್ ಮಗ ಲಿತೀಶ್‌ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಚೆನ್ನೈನ ಖ್ಯಾತ ಟಿವಿ ನಟ ಕಾರ್ತಿಕ್ ತಮಿಳು ಹಾಗೂ ತೆಲುಗು ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಅವರ ಪುತ್ರ ಲಿತಿಶ್ ಈ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಲಿತಿಶ್ ದೀಪಾವಳಿ ಆಚರಣೆ ಮುಗಿಸಿ ಸ್ನೇಹಿತರಾದ ಜಯಕೃಷ್ಣನ್ ಮತ್ತು ವೆಂಕಟ್ ಜೊತೆ ಕಾರಿನಲ್ಲಿ ಹಳೆ ಮಹಾಬಲಿಪುರಂ ರಸ್ತೆಯಲ್ಲಿರುವ ಆಟದ ಮೈದಾನಕ್ಕೆ ಹೋಗಿ ವಾಪಸ್ ಬರುತ್ತಿದ್ದರು.

Chennai Serial Actor Son Died In A Horrific Accident

ಈ ವೇಳೆ ವೇಳಚೇರಿ - ತರಮಣಿ 100 ಅಡಿ ರಸ್ತೆಯ ವಿಜಯನಗರ ಬಸ್ ನಿಲ್ದಾಣದ ಬಳಿ ಬರುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರು ಚಲಾಯಿಸುತ್ತಿದ್ದ ಲಿತಿಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಈತನ ಜೊತೆ ಕಾರಿನಲ್ಲಿದ್ದ ಜಯಕೃಷ್ಣನ್ ಮತ್ತು ವೆಂಕಟ್ ಎನ್ನುವಾತ ಗಂಭೀರವಾಗಿ ಗಾಯಗೊಂಡಿದ್ದು ಸದ್ಯ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಕಾರು ಅಪಘಾತವಾಗಿರುವು ಹಾಗೂ ಕಾರಿನೊಳಗೆ ಯುವಕರು ಸಿಕ್ಕಿ ನರಳಾಡುವುದನ್ನಿ ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಲಿತಿಶ್ ಮೃತದೇಹವನ್ನು ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಎದೆ ಎತ್ತರಕ್ಕೆ ಬೆಳೆದ ಮಗನ ಮೃತದೇಹ ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+