ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಳ್ಳ ತಪ್ಪಿಸಲು ಹೋಗಿ ಲಾರಿ ಕೆಳಗೆ ಸಿಕ್ಕಿ ಟೆಕ್ಕಿ ಸಾವು

|
Google Oneindia Kannada News

ಚೆನ್ನೈ, ಜನವರಿ 4: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದ್ದಾರೆ.

ಮೃತ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಅನ್ನು ಚೆನ್ನೈನ ಪೋರೂರು ನಿವಾಸಿ ಎಸ್ ಶೋಬನಾ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ 7:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮಹಿಳೆ ಗುಡುವಂಚೇರಿಯಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ನಿನ್ನೆ ಬೆಳಗ್ಗೆ ಶೋಬನಾ ತನ್ನ ತಮ್ಮ ಹರೀಶ್‌ನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೂನಮಲ್ಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Delhi hit and run case: ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆDelhi hit and run case: ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಮಧುರವಾಯಲ್‌ನ ಸರ್ವಿಸ್‌ ರಸ್ತೆಯಲ್ಲಿ ಶೋಬನಾ ತೆರಳುತ್ತಿದ್ದ ವೇಳೆ ಬೈಕ್‌ ಗುಂಡಿಗೆ ಬಿದ್ದಿದೆ. ಇದರಿಂದ ನಿಯಂತ್ರಣ ತಪ್ಪಿ ಶೋಬನಾ ಹಾಗೂ ಹರೀಶ್ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಅವರ ಹಿಂದೆಯೇ ಬರುತ್ತಿದ್ದ ಟ್ರಕ್ ಮಹಿಳೆಯ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಾಲಕ ಗಾಯಗಳೊಂದಿಗೆ ಪಾರಾಗಿದ್ದಾನೆ ಎಂದು ಪೂನಮಲ್ಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

chennai techie died after going to avoid the pothole and getting caught under the lorry

ಮಾಹಿತಿ ಬಳಿಕ ಪೂನಮಲ್ಲಿ ಸಂಚಾರಿ ತನಿಖಾ ದಳದವರು ಸ್ಥಳಕ್ಕೆ ಧಾವಿಸಿ ಶೋಬನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶೋಬನಾ ಸಹೋದರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್‌ನಲ್ಲಿ ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೂನಮಲ್ಲಿ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ಪಿಂಕ್ ಬೂತ್: ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆದೆಹಲಿ ಪೊಲೀಸ್ ಪಿಂಕ್ ಬೂತ್: ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆ

ಟ್ರಕ್ ಚಾಲಕನನ್ನು ಅಜಾಗರೂಕ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಮೋಹನ್ ಎಂದು ಗುರುತಿಸಲಾಗಿದೆ. ಆರೋಪಿ ಮೋಹನ್‌ನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನೈನಲ್ಲಿ ಮಧುರವಾಯಲ್‌ನ ಟ್ರಕ್‌ನಿಂದ ದ್ವಿಚಕ್ರ ವಾಹನವು ಗುಂಡಿಗೆ ಸಿಲುಕಿದ ಕಾರಣ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿದ ನಂತರ ನಾಗರಿಕ ಅಧಿಕಾರಿಗಳು ಗುಂಡಿಗಳನ್ನು ತುಂಬಿದರು ಮತ್ತು ರಸ್ತೆಯ ಹಾನಿಗೊಳಗಾದ ಭಾಗಗಳನ್ನು ಸರಿಪಡಿಸಿದರು ಎಂದು ಪೂನಮಲ್ಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

English summary
Police officials informed on Wednesday that a woman software engineer died after going to avoid a pothole and hit a lorry out of control.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X