• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಛತ್ತೀಸ್ ಗಢ: ನಕ್ಸಲ್ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಸಾವು

|
Google Oneindia Kannada News

ಬಿಜಾಪುರ, ಏಪ್ರಿಲ್ 04: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ 22 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಪ್ರಾಣ ಬಿಟ್ಟಿದ್ದು, ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸುಕ್ಮಾ ಮತ್ತು ಬಿಜಾಪುರ ಗಡಿ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಬಿಜಾಪುರ ಎಸ್ಪಿ ಕಮಲೋಚನ್ ಕಶ್ಯಪ್ ಸ್ಪಷ್ಟಪಡಿಸಿದ್ದಾರೆ.

ಛತ್ತೀಸ್‌ಗಡದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ; ಐವರು ಯೋಧರ ಸಾವುಛತ್ತೀಸ್‌ಗಡದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ; ಐವರು ಯೋಧರ ಸಾವು

ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ ನಕ್ಸಲರು ಭದ್ರತಾ ಪಡೆಯ 24ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ಸಿಆರ್ ಪಿಎಫ್ ಮೂಲದಿಂದ ತಿಳಿದು ಬಂದಿದೆ.

31ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗೆ ಗಾಯ:

ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ 31ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಈ ಪೈಕಿ 16 ಸಿಆರ್ ಪಿಎಫ್ ಯೋಧರಾಗಿದ್ದಾರೆ. 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಈ ಪೈಕಿ 7 ಮಂದಿ ಸಿಆರ್ ಪಿಎಫ್ ಯೋಧರು ಸೇರಿದ್ದಾರೆ. ನಕ್ಸಲ್ ದಾಳಿ ಸಂದರ್ಭದಲ್ಲಿ ನಾಪತ್ತೆ ಆಗಿರುವ ಭದ್ರತಾ ಸಿಬ್ಬಂದಿ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ರಾಯಪುರ ಆಸ್ಪತ್ರೆಗೆ ಗಾಯಗೊಂಡ ಸಿಬ್ಬಂದಿ:

ಛತ್ತೀಸ್ ಗಢ ನಕ್ಸಲ್ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಭೂಪೆಶ್ ಬಾಘೆಲ್, 21 ಭದ್ರತಾ ಸಿಬ್ಬಂದಿ ನಾಪತ್ತೆಯಾಗಿರುವ ಬಗ್ಗೆ ತಿಳಿಸಿದರು. 7 ಭದ್ರತಾ ಸಿಬ್ಬಂದಿಯನ್ನು ರಾಯಪುರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಮಾಹಿತಿ ನೀಡಿದರು.

English summary
22 Security Personnel Have Lost Their Lives In The Naxal Attack At Sukma-Bijapur In Chhattisgarh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X