ಪಂಚರಾಜ್ಯಗಳ ಚುನಾವಣೆ: ಇಂದು ಛತ್ತೀಸ್‌ಗಢ-ಮಿಜೋರಾಂನಲ್ಲಿ ಮತದಾನ
ಪಂಚರಾಜ್ಯಗಳಲ್ಲಿ ಚುನಾವಣೆ ಭರಾಟೆ ಜೋರಾಗಿದೆ, ಒಂದು ತಿಂಗಳ ಚುನಾವಣ ಸಮರಕ್ಕೆ ಸಜ್ಜಾಗಿದ್ದು, ಛತ್ತಿಸ್‌ಗಢ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಇಂದು (ಮಂಗಳವಾರ) ಮತದಾನ ನಡೆಯಲಿದೆ. 90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ 20 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, 40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಛತ್ತೀಸ್‌ಗಢದಲ್ಲಿ, ಮುಖ್ಯವಾಗಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಹೋರಾಟವಿದೆ, ಆದರೆ ಮಿಜೋರಾಂನಲ್ಲಿ ಸ್ಥಳಯ ಪಕ್ಷಗಳು ಪ್ರಾಬಲ್ಯ ಹೊಂದಿವೆ. ಮಿಜೋ ನ್ಯಾಷನಲ್ ಫ್ರಂಟ್ (MNF) ಮತ್ತು ಜೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ನಡುವೆ ಅಧಿಕಾರಕ್ಕಾಗಿ ಪೈಪೋಟಿ ಇದೆ.

ಮಿಜೋರಾಂನಲ್ಲಿ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದು, ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ 223 ಅಭ್ಯರ್ಥಿಗಳು ಮೊದಲ ಹಂತದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಛತ್ತೀಸ್‌ಗಢದಲ್ಲಿ ಭಾರಿ ಭದ್ರತೆ
ಛತ್ತೀಸ್‌ಗಢದ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಇಂದು 20 ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಮತದಾನ ನಡೆಯಲಿದೆ. ಮಾವೋವಾದಿ ಪೀಡಿತ ಪ್ರದೇಶದ ಎಲ್ಲ ಏಳು ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ.
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಡಾ. ರಮಣ್ ಸಿಂಗ್, ಭಾವನಾ ಬೊಹ್ರಾ, ಲತಾ ಉಸೇಂದಿ ಮತ್ತು ಗೌತಮ್, ಕಾಂಗ್ರೆಸ್‌ನ ಮೊಹಮ್ಮದ್ ಅಕ್ಬರ್, ಸಾವಿತ್ರಿ ಮನೋಜ್ ಮಾಂಡವಿ, ಮಾಜಿ ರಾಜ್ಯ ಘಟಕದ ಮುಖ್ಯಸ್ಥ ಮೋಹನ್ ಮಾರ್ಕಮ್ ಛತ್ತೀಸ್‌ಗಢ ಮೊದಲ ಹಂತದ ಚುನಾವಣೆಯ ಪ್ರಮುಖ ನಾಯಕರಲ್ಲಿ ಪ್ರಮುಖರಾಗಿದ್ದಾರೆ.
20 ಸ್ಥಾನಗಳಲ್ಲಿ 12 ಪರಿಶಿಷ್ಟ ಪಂಗಡಕ್ಕೆ ಮತ್ತು ಒಂದು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ರಾಜನಂದಗಾಂವ್ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳು ಕಣದಲ್ಲಿದ್ದು ಅತಿ ಹೆಚ್ಚು ಸ್ಪರ್ಧಿಗಳು ಇರುವ ಕ್ಷೇತ್ರವಾಗಿಗೆ ಮತ್ತು ಚಿತ್ರಕೋಟ್ ಮತ್ತು ದಂತೇವಾಡ ಕ್ಷೇತ್ರಗಳಲ್ಲಿ ತಲಾ ಏಳು ಮಂದಿ ಕಣದಲ್ಲಿದ್ದು, ಕಡಿಮೆ ಅಭ್ಯರ್ಥಿಗಳನ್ನು ಹೊಂದಿದ ಕ್ಷೇತ್ರವಾಗಿದೆ.
90 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 71 ಸ್ಥಾನಗಳನ್ನು ಹೊಂದಿದೆ. 2003ರಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿ 2018ರ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತ್ತು.
ಮೊಹ್ಲಾ-ಮಾನ್‌ಪುರ, ಅಂತಗಢ, ಭಾನುಪ್ರತಾಪುರ್, ಕಂಕೇರ್, ಕೇಶ್ಕಲ್, ಕೊಂಡಗಾಂವ್, ನಾರಾಯಣಪುರ, ದಾಂತೇವಾಡ, ಬಿಜಾಪುರ ಮತ್ತು ಕೊಂಟಾ 10 ಕ್ಷೇತ್ರಗಳಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದೆ.
ಖೈರಗಢ್, ಡೊಂಗರ್‌ಗಢ್, ರಾಜನಂದಗಾಂವ್, ಡೊಂಗರ್‌ಗಾಂವ್, ಖುಜ್ಜಿ, ಪಂಡರಿಯಾ ಮತ್ತು ಕವರ್ಧಾ ಬಸ್ತಾರ್, ಜಗದಲ್‌ಪುರ ಮತ್ತು ಚಿತ್ರಕೋಟ್‌ನಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನ ಹಾಗೂ ಮಧ್ಯಪ್ರದೇಶದಲ್ಲಿ ಒಂದೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದೆ. ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ 23 ಮತ್ತು 30 ರಂದು ಒಂದೇ ಹಂತದ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.
ಮಿಜೋರಾಮ್‌ನಲ್ಲಿ ಒಂದೇ ಹಂತದಲ್ಲಿ ಮತದಾನ
ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯೂ ಇಂದು ನಡೆಯಲಿದೆ. ಮಿಜೋರಾಂ ಚುನಾವಣೆಯಲ್ಲಿ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
2018 ರಲ್ಲಿ, ಮಿಜೋ ನ್ಯಾಷನಲ್ ಫ್ರಂಟ್ 40 ರಲ್ಲಿ 26 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿತು. ಕಾಂಗ್ರೆಸ್ ಐದು ಸ್ಥಾನಗಳನ್ನು ಪಡೆದುಕೊಂಡಿತು ಮತ್ತು ಬಿಜೆಪಿ ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications