Bus Accident: ಕಂದಕಕ್ಕೆ ಉರುಳಿದ ಬಸ್: 12 ಮಂದಿ ದುರ್ಮರಣ, ಪ್ರಧಾನಿ ಮೋದಿ ಸಂತಾಪ
ನವದೆಹಲಿ, ಏಪ್ರಿಲ್ 10: ಚಲಿಸುತ್ತಿದ್ದ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಖಾಸಗಿ ಕಂಪನಿಯ ಸುಮಾರು 12 ಮಂದಿ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ. ಒಟ್ಟು 14 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಮಂಗಳವಾರ ರಾತ್ರಿ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಅಪಘಾತ ಘಟನೆ ಜರುಗಿದೆ. ಈ ಬಸ್‌ನಲ್ಲಿ ಎಂದಿನಂತೆ ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಪ್ರಯಾಣಿಸುತ್ತಿದ್ದರು. ಬಸ್ ತುಂಬಾ ಕಾರ್ಮಿಕರೇ ತುಂಬಿ ಹೋಗಿದ್ದರು ಎಂದು ದುರ್ಗ್ ಜಿಲ್ಲಾಧಿಕಾರಿಗಳಾದ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದರು.

ಗಾಯಾಳು ಆರೋಗ್ಯ ಸ್ಥಿತಿ ಸ್ಥಿರ
ಈ ಬಸ್ ಹೊರಡುವಾಗಿ ಕುಮ್ಹಾರಿ ಪ್ರದೇಶದಲ್ಲಿ 'ಮುರುಂ' ಮಣ್ಣಿನ ಗಣಿ ಹೊಂಡಕ್ಕೆ ಬಿದ್ದಿದೆ. ಪರಿಣಾಮ 12 ಕಾರ್ಮಿಕರು ಮೃತಪಟ್ಟಿದ್ದಾರೆ. 14 ಮಂದಿ ಗಾಯಗೊಂಡು ಏಮ್ಸ್ (ರಾಯಪುರ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದರ ಬಗ್ಗೆ ಪಿಟಿಐ ವರದಿ ಮಾಡಿದೆ.
ಗಾಯಗೊಂಡ ಎಲ್ಲ ಪ್ರಯಾಣಿಕರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮ ಆರೈಕೆ ಒದಗಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿಗಳಿಗೆ ವೈದ್ಯರು ಭರವಸೆ ನೀಡಿದ್ದಾರೆ.
#WATCH | Raipur: Chhattisgarh Deputy CM Vijay Sharma reaches AIIMS to meet the victims of the Durg bus accident. pic.twitter.com/kGimNRghYN
— ANI (@ANI) April 9, 2024
ಮೃತರಿಗೆ ಸಿಎಂ ಸಂತಾಪ
ಈ ಬಸ್ ಅವಘಡ ಕುರಿತು ಪ್ರತಿಕ್ರಿಯಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಿಂದ ತುಂಬಿ ತುಳುಕುತ್ತಿದ್ದ ಬಸ್, ದುರ್ಗ್‌ನ ಕುಮ್ಹಾರಿ ಬಳಿ ಅಪಘಾತಕ್ಕೀಡಾದ ಸುದ್ದಿ ಅತೀವ ನೋವು ತಂದಿದೆ ಎಂದು ಕಂಬನಿ ಮಿಡಿದರು.

ಅಗಲಿದ ಆತ್ಮಗಳಿಗೆ ದೇವರು ಶಾಂತಿ ಕರುಣಿಸಲಿ. ದುಃಖತಪ್ತ ಕುಟುಂಬಗಳಿಗೆ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಗಾಯಗೊಂಡ ನೌಕರರ ಚಿಕಿತ್ಸೆಗೆ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಗಾಯಾಳು ಶೀಘ್ರ ಚೇತರಿಸಿಕೊಳ್ಳಲಿ ಎಂದರು.
ಪ್ರಧಾನಿ ಮೋದಿ ಸಂತಾಪ
ಛತ್ತೀಸ್‌ಗಢ ರಾಜ್ಯದ ದುರ್ಗ್ ಜಿಲ್ಲೆ ವ್ಯಾಪ್ತಿಯಲ್ಲಿನ ಈ ಘಟನೆ ದೇಶವ್ಯಾಪ್ತಿ ಸುದ್ದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ. ಇಲ್ಲಿ ಸಂಭವಿಸಿದ ಬಸ್ ಅಪಘಾತ ಅತ್ಯಂತ ದುಃಖಕರವಾಗಿದೆ. ಘಟನೆಯಲ್ಲಿ ಸಾವಿಗೀಡಾದ ಮೃತರಿಗೆ ನನ್ನ ಸಂತಾಪಗಳು. ಗಾಯಗೊಂಡವು ಆದಷ್ಟು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಛತ್ತೀಸ್‌ಗಢ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತದಿಂದ ಸಂತ್ರಸ್ತರಿಗೆ ಸಾಧ್ಯವಿರುವ ಅಗತ್ಯ ಎಲ್ಲ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ (ಎಕ್ಸ್) ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.












Click it and Unblock the Notifications