• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ಲಸಿಕೆ ಪಡೆದು 3 ದಿನದಲ್ಲೇ ಪೊಲೀಸ್ ಸಾವು!

|

ರಾಯ್ಪುರ್, ಫೆಬ್ರವರಿ.16: ಛತ್ತೀಸ್ ಗಢದಲ್ಲಿ ಕೊರೊನಾವೈರಸ್ ಲಸಿಕೆ ಪಡೆದ ಮೂರು ದಿನಗಳ ನಂತರದಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿಗೆ ಕಾರಣವೇನು ಎನ್ನುವುದು ಸ್ಪಷ್ಟವಾಗಿಲ್ಲ. ರೋಗನಿರೋಧಕ ಸಮಿತಿಯ ರಾಜ್ಯ ಮಟ್ಟ ಪ್ರತಿಕೂಟ ಘಟನೆಗಳ ಘಟಕವು ಈ ಸಾವಿನ ಸುತ್ತ ತನಿಖೆಯನ್ನು ಆರಂಭಿಸಿದೆ.

ಕಳೆದ ಫೆಬ್ರವರಿ.12ರಂದು ಕೊರೊನಾವೈರಸ್ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡ ಕಾರ್ಮಿಕರ ಸಾಲಿನಲ್ಲಿ 9 ಮಂದಿಗೆ ಲಸಿಕೆ ನೀಡಲಾಗಿತ್ತು. ಅಂದೇ 34 ವರ್ಷದ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಅವರಿಗೂ ಲಸಿಕೆ ನೀಡಲಾಗಿತ್ತು ಎಂದು ರಾಜ್ಯ ರೋಗನಿರೋಧಕ ಅಧಿಕಾರಿ ಡಾ.ಅಮರ್ ಸಿಂಗ್ ಠಾಕೂರ್ ಹೇಳಿದ್ದಾರೆ.

ಕೊರೊನಾ ಭಯ: ಭಾರತೀಯರಿಗೆ ಇಲ್ಲಿದೆ ಸಂತೋಷದ ಸುದ್ದಿ

ಫೆಬ್ರವರಿ.12ರಂದು ಲಸಿಕೆ ಪಡೆದ ಎಎಸ್ಐ ಅವರಿಗೆ ಸೋಮವಾರ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ಸ್ಪಷ್ಟಪಡಿಸಿದರು. ನಂತರದಲ್ಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಡಾ. ಬಿ.ಆರ್.ಅಂಬೇಡ್ಕರ್ ಮೆಮೋರಿಯಲ್ ಆಸ್ಪತ್ರೆಗೆ ರವಾನಿಸಲಾಯಿತು ಎಂದು ಡಾ.ಅಮರ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಭಾರತದಲ್ಲಿ 87 ಲಕ್ಷ ಜನರಿಗೆ ಕೊರೊನಾ ಲಸಿಕೆ:

ದೇಶದಲ್ಲಿ ಕಳೆದ 31 ದಿನಗಳಲ್ಲಿ 87,20,822 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ತ್ರಾಜೆನಿಕ್ ಸಂಶೋಧಿಸಿದ ಹಾಗೂ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ.

English summary
Chhattisgarh: One Police Dies Three Days After Receiving Coronavirus Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X