• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಛತ್ತೀಸ್ ಗಢದಲ್ಲಿ ಜನತಾ ಕಾಂಗ್ರೆಸ್- ಬಿಎಸ್ ಪಿ ದೋಸ್ತಿ: ಮಾಯಾವತಿ

|

ನವದೆಹಲಿ, ಸೆಪ್ಟೆಂಬರ್ 20: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಗುರುವಾರ ಘೋಷಣೆ ಮಾಡಿರುವಂತೆ ಛತ್ತೀಸ್ ಗಢ ವಿಧಾನಸಭೆ ಚುನಾವಣೆಗೆ ಅಜಿತ್ ಜೋಗಿ ಅವರ ಜನತಾ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲಿದ್ದಾರೆ. ಈ ಮೈತ್ರಿ ಪಕ್ಷವು ಅಧಿಕಾರಕ್ಕೆ ಬಂದರೆ ಅಜಿತ್ ಜೋಗಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಅವರು ಹೇಳಿದ್ದಾರೆ.

ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ಧ: ಮಾಯಾವತಿ

ಬಿಎಸ್ ಪಿಯಿಂದ ನಮಗೆ ಮೈತ್ರಿ ಬಗ್ಗೆ ಪ್ರಸ್ತಾವ ಬಂದಿತ್ತು. ಆದರೆ ನಾವು ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದೆವು. ಅಲ್ಲಿ ನಾವೇ ಸರಕಾರ ರಚನೆ ಮಾಡುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಛತ್ತೀಸ್ ಗಢದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಪಿ.ಎಲ್.ಪುನಿಯಾ ಹೇಳಿದ್ದಾರೆ.

ಬಿಜೆಪಿಯ ಸೋಲಿಸುವ ಏಕೈಕ ಉದ್ದೇಶದಿಂದ ಎಲ್ಲ ರಾಜಿಗೂ ಸಿದ್ಧವಾಯ್ತೇ ಕಾಂಗ್ರೆಸ್?

ಬಹುಜನ ಸಮಾಜ ಪಕ್ಷವು 35 ಸ್ಥಾನಗಳಲ್ಲಿ ಹಾಗೂ ಜನತಾ ಕಾಂಗ್ರೆಸ್ ಛತ್ತೀಸ್ ಗಢ 55 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಯಾವತಿ ಹೇಳಿಕೆ ನೀಡಿದ್ದಾರೆ. ಛತ್ತೀಸ್ ಗಢ ರಾಜ್ಯದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ.

ಕಳೆದ 15 ವರ್ಷಗಳಿಂದ ರಮಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿಯು ಅಧಿಕಾರ ನಡೆಸುತ್ತಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 39 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಬಿಜೆಪಿಯು 49 ಸ್ಥಾನ ಪಡೆದಿತ್ತು. ಬಿಎಸ್ ಪಿ ಹಾಗೂ ಪಕ್ಷೇತರರು ತಲಾ 1 ಸ್ಥಾನದಲ್ಲಿ ಗೆದ್ದಿದ್ದರು.

English summary
Bahujan Samaj Party chief Mayawati on Thursday announced that her party will have an alliance with Ajit Jogi's party - Janta Congress Chhattisgarh - for the upcoming assembly polls in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X