ಛತ್ತೀಸ್‌ಗಢ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ: 9 ಜನ ಸಾವು, 40ಕ್ಕೂ ಹೆಚ್ಚು ಜನ ಗಾಯ
Chhattisgarh Power Plant: ಛತ್ತೀಸ್‌ಗಢ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ್ದು 9 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ವರದಿಯಾಗಿದೆ. ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಗಿತರೈ ಎನ್ನುವ ಹಳ್ಳಿಯಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಕಾರ್ಮಿಕರು ಸ್ಥಳದಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಧ್ಯಾಹ್ನ ಸಿಂಘಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ ವಿದ್ಯುತ್ ಸ್ಥಾವರದ ಬಾಯ್ಲರ್ ಟ್ಯೂಬ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಹಿತಿ ಪಡೆದ ಕೂಡಲೇ ಸ್ಥಳೀಯ ಆಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಕೆಲವು ಕಾರ್ಮಿಕರು ಸ್ಥಳದಲ್ಲಿ ಇನ್ನೂ ಸಿಲುಕಿಕೊಂಡಿರಬಹುದು ಎನ್ನುವ ಅನುಮಾನದ ನಡುವೆ ರಕ್ಷಣಾ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.












Click it and Unblock the Notifications