ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಹೆಚ್ಚಳ: ಛತ್ತೀಸ್‌ಗಢದ ರಾಯ್ಪುರದಲ್ಲಿ 10 ದಿನಗಳ ಲಾಕ್‌ಡೌನ್

|
Google Oneindia Kannada News

ರಾಯ್ಪುರ, ಏಪ್ರಿಲ್ 7: ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಛತ್ತೀಸ್‌ಗಢದ ರಾಯ್ಪುರದಲ್ಲಿ 10 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ.

ಏಪ್ರಿಲ್ 9 ರಿಂದ 10ರವರೆಗೆ ರಾಯ್ಪುರದಲ್ಲಿ ಸಂಪೂರ್ಣ ಲಾಕ್‌ಡೌನ್ ಇರಲಿದೆ, ರಾಯ್ಪುರದ ಕಲೆಕ್ಟರ್ ಕೊರೊನಾ ಲಾಕ್‌ಡೌನ್ ವಿಧಿಸಿದ್ದಾರೆ, ಏಪ್ರಿಲ್ 9ರ ಬೆಳಗ್ಗೆ 6 ರಿಂದ ಏಪ್ರಿಲ್ 19ರ ಬೆಳಗ್ಗೆ 6ರವರೆಗೆ ಲಾಕ್‌ಡೌನ್ ಇರಲಿದೆ.

ಮೆಕ್ಸಿಕೋದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಮೆಕ್ಸಿಕೋದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ

ರಾಯ್ಪುರದಲ್ಲಿ ಒಟ್ಟು 76,427 ಕೊರೊನಾ ಸೋಂಕಿತರಿದ್ದಾರೆ, ಇಲ್ಲಿಯವರೆಗೆ 1001 ಮಂದಿ ಸಾವನ್ನಪ್ಪಿದ್ದಾರೆ, 13,107 ಸಕ್ರಿಯ ಕೊರೊನಾ ಪ್ರಕರಣಗಳಿವೆ.

Chhattisgarhs Raipur To Go Under Lockdown For 10 Days Starting April 9

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1.5 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ಸೋಂಕು ಆರಂಭವಾದ ಜನವರಿಯಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ಕೊರೊನಾ ಸೋಂಕು ದಾಖಲಾಗಿದೆ.

ಭಾರತದಲ್ಲಿ ಕೊರೊನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 630 ಮಂದಿಯನ್ನು ಕೊರೊನಾ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ಹೊಸ ಕೇಸ್ ಗಳು ಏರುಗತಿಯಲ್ಲಿರುವ ಕಾರಣ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,43,473ಕ್ಕೆ ತಲುಪಿದೆ.

ಒಂದೇ ದಿನ 59,856 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 59,856 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,17,92,135ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 12,08,329 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,14,39,598 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
In view of the recent surge in COVID-19 cases, the Chhattisgarh government today announced a lockdown in Raipur district with effect from April 9 to 19, an official said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X