ಹೆಚ್ಚುವರಿ DCM ಹುದ್ದೆ; ರಾಹುಲ್ ಗಾಂಧಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ: ಚರ್ಚೆಯಾಗಿದ್ದೇನು?

ನವದೆಹಲಿ, ಏಪ್ರಿಲ್‌ 03: ರಾಷ್ಟ್ರ ರಾಜಧಾನಿ ನವದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದಾರೆ. ಅನಾರೋಗ್ಯದ ಹಿನ್ನೆಲೆ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ ಅವರು ಬಹುದಿನಗಳ ಬಳಿಕ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಹೆಚ್ಚುವರಿ ಉಪಮುಖ್ಯಂತ್ರಿ ಹುದ್ದೆ ಸೃಷ್ಟಿ ವಿಚಾರವನ್ನು ಪ್ರಸ್ತಾಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ಎಐಸಿಸಿ ಕಚೇರಿಯಲ್ಲಿ ರಾಹುಲ್ ಅವರೊಂದಿಗೆ ಸಭೆ ನಡೆಸುವುದನ್ನು ಖಚಿತಪಡಿಸಿದ್ದಾರೆಂದು ಸಿಎಂ ಆಪ್ತ ಮೂಲಗಳು ಮಾಹಿತಿ ನೀಡಿವೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಇಂದು ರಾಹುಲ್ ಗಾಂಧಿ ಅವರನ್ನ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಪರಿಷತ್‌ ನ ನಾಲ್ಕು ಸ್ಥಾನಗಳು ಖಾಲಿ ಉಳಿದಿದ್ದು, ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Chief Minister Siddaramaiah meets Rahul Gandhi

ಇನ್ನೂ ಪಕ್ಷ ಸಂಘಟನೆ ಹಾಗೂ ಸಚಿವ ಸಂಪುಟ ಪುನರ್‌ರಚನೆ, ಸರ್ಕಾರ ಮಟ್ಟದಲ್ಲಿ ಆಗಿರುವ ಬೆಳವಣಿಗೆಯ ಬಗ್ಗೆ ಚರ್ಚೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಸೇರಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಸಮಯದಲ್ಲಿ ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರವೂ ತಾವೇ ಸಿಎಂ ಆಗಿ ಮುಂದುವರಿಯುವ ವಿಚಾರದ ಕುರಿತು ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವವರೆಗೆ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂಬುದು ಸಿದ್ದರಾಮಯ್ಯ ತಿಳಿದಿದೆ. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ಮುನ್ನ ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ವಿಚಾರವನ್ನು ರಾಹುಲ್ ಮುಂದೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಕೇಂದ್ರ, ರಾಜ್ಯ ಸರ್ಕಾರಗಳು ಪರಸ್ಪರ ಅಭಿವೃದ್ಧಿಯಾಗಬೇಕು

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಪರಸ್ಪರ ಅಭಿವೃದ್ಧಿಯಾದಾಗ ದೇಶ ಅಭಿವೃದ್ಧಿಯಾಗುತ್ತದೆ. ಈ ದಿಕ್ಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟುಗೂಡಿ ಕೆಲಸ ಮಾಡಲು ಪ್ರಯತ್ನ ಮಾಡಬೇಕು.ನಾವು ಒಕ್ಕೂಟದ ವ್ಯವಸ್ಥೆಯಲ್ಲಿರುವುದರಿಂದ ಒಟ್ಟಾಗಿ ಅಭಿವೃದ್ಧಿಯಾಗುವುದು ಅಗತ್ಯ. ಈ ದಿಕ್ಕಿನತ್ತ ಸಚಿವರು, ಅಧಿಕಾರಿಗಳು ಪ್ರಯತ್ನ ಮಾಡಬೇಕು. ಕರ್ನಾಟಕ ಭವನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಯಭಾರಿ ಕಛೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸೇರಿ ದೇಶ ಮತ್ತು ರಾಜ್ಯಗಳನ್ನು ಅಭಿವೃದ್ಧಿಪಡಿಸಬೇಕೆಂಬುದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯಾವುದೇ ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಂದ ತೆರಿಗೆಯನ್ನು ವಸೂಲು ಮಾಡುತ್ತವೆ. ಐದು ವರ್ಷಕ್ಕೊಮ್ಮೆ ರಚನೆಯಾಗುವ ಹಣಕಾಸಿನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಯ ಪಾಲು ನಿಗದಿಯಾಗುತ್ತದೆ. ಅನುದಾನದಲ್ಲಿ ಕೇಂದ್ರ ಸರ್ಕಾರದ ಅನೇಕ ಕಾರ್ಯಕ್ರಮಗಳೂ ಸೇರಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳೂ ಇರುತ್ತವೆ. ಇದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲು ಇರುತ್ತದೆ ಎಂದರು.

ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ , ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಅನ್ವಯ ಸೆಂಟ್ರಲ್ ಲಿಸ್ಟ್, ಸ್ಟೇಟ್ ಲಿಸ್ಟ್ ಹಾಗೂ ಕನ್ಕರೆಂಟ್ ಲಿಸ್ಟ್ ಎಂದು ಅಧಿಕಾರ ಹಂಚಿಕೆಯಾಗಿದೆ. ಇದರನ್ವಯ ಕೇಂದ್ರ , ರಾಜ್ಯಗಳು ಕಾನೂನುಗಳನ್ನು ರಚಿಸಿದರೆ, ಕನ್ಕರೆಂಟ್ ಲಿಸ್ಟ್ ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕಾನೂನನ್ನು ರಚಿಸುತ್ತವೆ. ಕೇಂದ್ರಸರ್ಕಾರದ ಕೇಂದ್ರಸ್ಥಾನವಾದ ನವದೆಹಲಿಯಲ್ಲಿ ಪ್ರತಿಯೊಂದು ರಾಜ್ಯಗಳ ಭವನಗಳು ಇರುತ್ತವೆ. ನವದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳಿದ್ದು, ಇಲ್ಲಿಗೆ ಆಗಮಿಸುವ ಮಂತ್ರಿಗಳು, ಸಂಸದರು, ಹಾಲಿ ಹಾಗೂ ಮಾಜಿ ಶಾಸಕರು, ಅಧಿಕಾರಿಗಳಿಗೆ ಅನುಕೂಲ ಕಲ್ಪಿಸಲಾಗಿದೆ.

1967 ರಲ್ಲಿ ಕರ್ನಾಟಕ ಭವನಕ್ಕೆ ಶಂಕುಸ್ಥಾಪನೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ನೆರವೇರಿಸಿದ್ದು, ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಉದ್ಘಾಟನೆ ಮಾಡಿದ್ದರು ಹಾಗೂ ನಿಜಲಿಂಗಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. 51 ವರ್ಷಗಳ ಕಾಲ ಕರ್ನಾಟಕ ಭವನ ಕಾರ್ಯನಿರ್ವಹಿಸಿದೆ. ತಜ್ಞರ ಅಭಿಪ್ರಾಯದಂತೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ಕಟ್ಟಲು ತೀರ್ಮಾನಿಸಲಾಗಿತ್ತು. 2018 ರ ಬಜೆಟ್ ನಲ್ಲಿ ಘೋಷಣೆಯಾಗಿ 2019 ರಲ್ಲಿ ಕಾಮಗಾರಿ ಪ್ರಾರಂಭವಾಯಿತು. ಈವರೆಗೆ 8 ವರ್ಷಗಳ ವಿಳಂಬವಾಗಿದೆ. ಸಚಿವರ ಕೊಠಡಿಗಳು ಉತ್ತಮವಾಗಿದ್ದು. ಶಾಸಕರ ಕೊಠಡಿಗೆ ಸಿಟ್ ಔಟ್ ಅಗತ್ಯವಿದ್ದು ಈ ಬಗ್ಗೆ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+