ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ವಾಯು ಸೇನೆ, ನೌಕಾ ಸೇನೆ ಮುಖ್ಯಸ್ಥರಿಗೆ ಝೆಡ್-ಪ್ಲಸ್ ಭದ್ರತೆ

|
Google Oneindia Kannada News

ಭಾರತೀಯ ವಾಯು ಸೇನೆ ಹಾಗೂ ನೌಕಾ ಸೇನೆ ಮುಖ್ಯಸ್ಥರಿಗೆ ಝೆಡ್-ಪ್ಲಸ್ ಭದ್ರತೆ ಒದಗಿಸಲಾಗಿದೆ. ಅವರಿಗೆ ಬೆದರಿಕೆ ಇರುವುದಾಗಿ ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದ ಜತೆಗೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟ ನಂತರ, ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ನಂತರ ಭಾರತೀಯ ವಾಯು ಸೇನೆ ಮುಖ್ಯಸ್ಥ ಏರ್ ಮಾರ್ಷಲ್ ಬಿ.ಎಸ್.ಧನೋವಾ, ನೌಕಾ ಸೇನೆ ಮುಖ್ಯಸ್ಥ ಸುನೀಲ್ ಲನ್ಬ ಅವರಿಗೆ ಝೆಡ್-ಪ್ಲಸ್ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ.

ಒನ್ಇಂಡಿಯಾ exclusive : ವಾಯುಸೇನೆ ಬಳಕೆ ಹಿಂದಿನ ಕಾರಣ ಏನು?ಒನ್ಇಂಡಿಯಾ exclusive : ವಾಯುಸೇನೆ ಬಳಕೆ ಹಿಂದಿನ ಕಾರಣ ಏನು?

ಭೂ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಗೆ ಈಗಾಗಲೇ ಝೆಡ್-ಪ್ಲಸ್ ಭದ್ರತೆ ಒದಗಿಸಲಾಗಿದೆ. ಸದ್ಯಕ್ಕಂತೂ ವಾಯು ಸೇನೆ ಹಾಗೂ ನೌಕಾ ಸೇನೆ ಮುಖ್ಯಸ್ಥರಿಗೆ ನೀಡಿದ ಭದ್ರತೆ ಮುಂದುವರಿಯಲಿದೆ.

Chiefs of Air and Naval staffs to get Z-plus security

ಪುಲ್ವಾಮಾದಲ್ಲಿ ಉಗ್ರ ದಾಳಿ ನಡೆದು, ಸಿಆರ್ ಪಿಎಫ್ ನ ನಲವತ್ತು ಸಿಬ್ಬಂದಿ ಸಾವನ್ನಪ್ಪಿದ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯದ ಸಂಬಂಧ ಹದಗೆಟ್ಟಿದೆ. ಆ ನಂತರ ಭಾರತೀಯ ವಾಯು ಸೇನೆಯಿಂದ ಪಾಕಿಸ್ತಾನದಲ್ಲಿ ಇರುವ ಬಾಲಕೋಟ್ ನ ಜೈಶ್-ಇ-ಮೊಹ್ಮದ್ ಉಗ್ರ ನೆಲೆ ಮೇಲೆ ಫೆಬ್ರವರಿ ಇಪತ್ತಾರರಂದು ದಾಳಿ ನಡೆದಿತ್ತು. ಅದರ ಮರುದಿನ ಪಾಕಿಸ್ತಾನ ಕೂಡ ತನ್ನ ಯುದ್ಧ ವಿಮಾನಗಳ ಮೂಲಕ ಭಾರತದ ದಾಳಿ ನಡೆಸಿತ್ತು.

English summary
The chiefs of the Indian Air Force and Navy will get Z-plus security cover after a fresh assessment of their threat perception by the security agencies, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X