'ಗಲ್ವಾನ್ ಕಣಿವೆ ಪ್ರದೇಶಕ್ಕೆ ಮೇ ತಿಂಗಳಲ್ಲೇ ಚೀನಾ ತನ್ನ ಸೇನೆ ಕಳುಹಿಸಿತ್ತು'

ಲಡಾಖ್, ಜೂನ್ 26: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾದ ನಡುವೆ ನಡೆದ ಸಂಘರ್ಷ ಏಕಾಏಕಿ ಅಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Recommended Video

      India China Face-Off : ಚೀನಾ ವಿಚಾರದಲ್ಲಿ ಭಾರತೀಯರಿಗೊಂದು ಸಿಹಿಸುದ್ದಿ.! | Oneindia Kannada

      ಚೀನಾ ನಡೆಸಿದ ದಾಳಿಯಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಅದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಕೇಂದ್ರ ಸರ್ಕಾರ ಪರೋಕ್ಷವಾಗಿ ಹೇಳಿದೆ.

      ಗಲ್ವಾನ್ ಕಣಿವೆಯಲ್ಲಿ ಭಾರತೀಯರ ಸಾಮಾನ್ಯ ಹಾಗೂ ಸಾಂಪ್ರದಾಯಿಕ ಗಸ್ತಿಗೆ ಚೀನಾ ಮೇ ಆರಂಭದಿಂದಲೇ ಅಡ್ಡಿಪಡಿಸಿತ್ತು. ಮೇ ಮಧ್ಯಭಾಗದ ವೇಳೆಗೆ ಗಡಿಯಲ್ಲಿನ ಯಥಾಸ್ಥಿತಿಯನ್ನೇ ಬದಲಿಸಿತು ಹೊರಟಿತು. ಚೀನಾದ ಈ ವರ್ತನೆ ವಿರುದ್ಧ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾರ್ಗಗಳ ಮೂಲಕ ನಾವು ಪ್ರತಿಭಟನೆ ದಾಖಲಿಸಿದೆವು.

      china

      ಇಂತಹ ಬದಲಾವಣೆಯನ್ನು ನಾವು ಒಪ್ಪುವುದಿಲ್ಲ ಎಂದೂ ತಿಳಿಸಿದ್ದೆವು. ಆದರೆ, ಈ ನಿರ್ಧಾರವನ್ನು ಉಲ್ಲಂಘಿಸಿ ಚೀನಾ ಯೋಧರು ಗಲ್ವಾನ್ ನಲ್ಲಿ ಟೆಂಟ್ ಗಳನ್ನು ನಿರ್ಮಿಸಿದರು.

      Explained Story: ದೂರದ ಚೀನಾ ಭಾರತದ ಗಡಿಗೆ ಹೊಂದಿಕೊಂಡಿದ್ದು ಹೇಗೆ?
      ಇದನ್ನು ತಡೆದಾಗ ಜೂ.15ರಂದು ಚೀನಾ ಪಡೆಗಳು ಹಿಂಸಾಚಾರ ನಡೆಸಿ, ನಮ್ಮ ಯೋಧರ ಸಾವಿಗೆ ಕಾರಣವಾದವು ಎಂದು ವಿದೇಶಾಂಗ ಇಲಾಖೆ ವಕ್ತಾರ ಅನುರಾಗ ಶ್ರೀವಾಸ್ತವ ಅವರು ತಿಳಿಸಿದ್ದಾರೆ.

      ಎರಡು ದೇಶಗಳ ನಡುವಿರುವ ಎಲ್ಲಾ ಒಡಂಬಡಿಕೆ ಗಾಳಿಗೆ ತೂರಿ ನೈಜ ಗಡಿ ರೇಖೆಗೆ ಮೇ ಆರಂಭದಿಂದಲೇ ಸೇನೆ ಹಾಗೂ ಶಸ್ತ್ರಾಸ್ತ್ರಗಳನ್ನು ಭಾರೀ ಪ್ರಮಾಣದಲ್ಲಿ ಚೀನಾ ಜಮಾವಣೆ ಮಾಡಿತ್ತು . ಗಲ್ವಾನ್ ಘರ್ಷಣೆಗೆ ಸಂಬಂಧಿಸಿದ ಘಟನಾವಳಿಗಳನ್ನು ಇದೇ ಮೊದಲ ಬಾರಿಗೆ ಹಂಚಿಕೊಂಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+