Lok Sabha Election 2024: ಅಮಿತ್ ಶಾ ಭೇಟಿಯಾದ ಕೆಲವೇ ಗಂಟೆಗಳಲ್ಲಿ ಎನ್‌ಡಿಎ ಸೇರಿದ ಚಿರಾಗ್ ಪಾಸ್ವಾನ್!
ಪಾಟ್ನಾ, ಜುಲೈ 17: ಬಿಜೆಪಿ ನೇತೃತ್ವದ ಎನ್‌ಡಿಎ ಸಭೆಯನ್ನು ನಾಳೆ ಕರೆಯಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕೆಲವೇ ಗಂಟೆಗಳ ನಂತರ ಎಲ್‌ಜೆಪಿ (ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ಗೆ ಸೇರ್ಪಡೆಗೊಂಡರು.
ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಅವರು ಎನ್‌ಡಿಎಗೆ ಸೇರಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದು, ನಾನು ಅವರನ್ನು ಎನ್ ಡಿ ಎ ಕುಟುಂಬಕ್ಕೆ ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿದ್ದು, ಮೈತ್ರಿಗೆ ಸಂಬಂಧಿಸಿದ ವಿಷಯದ ಬಗ್ಗೆ ದೆಹಲಿಯಲ್ಲಿ ದೇಶದ ಗೃಹ ಸಚಿ ಅಮಿತ್ ಶಾ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸಿದೆ ಎಂದು ತಿಳಿಸಿದ್ದಾರೆ.
2020ರ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿರಾಗ್ ಪಾಸ್ವಾನ್ ಅವರು ಎನ್‌ಡಿಎದಿಂದ ಹೊರ ನಡೆದಿದ್ದರು. ಆದರೆ, ಪ್ರಮುಖ ವಿಷಯಗಳಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಆದರೆ ಇದೀಗ ಲೋಕಸಭಾ ಚುನಾವನೆಯ ಸಿದ್ದತೆಯ ಬೆನ್ನಲ್ಲೇ ಚಿರಾಗ್ ಪಾಸ್ವಾನ್ ಅವರು ಮತ್ತೆ ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ತೀವ್ರ ಪ್ರಯತ್ನ ನಡೆಸಿತ್ತು. ಸ್ವತಃ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೇ ಚಿರಾಗ್ ಪಾಸ್ವಾನ್ ಅವರಿಗೆ ಪತ್ರ ಬರೆದು ಎನ್ ಡಿಎ ಸಭೆಗೆ ಆಹ್ವಾನ ನೀಡಿದ್ದರು.
ಇನ್ನೂ ನವದೆಹಲಿಯಲ್ಲಿ ಬಿಜೆಪಿ ಮಂಗಳವಾರ ಎನ್‌ಡಿಎಯ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಯಲಿದ್ದು, ಇದುವರೆಗೆ ಒಟ್ಟು 36 ಪಕ್ಷಗಳು ಸೇರಿಕೊಂಡಿವೆ ಎಂದು ಬಿಜೆಪಿ ಹೇಳಿಕೊಂಡಿದೆ.












Click it and Unblock the Notifications