Chitradrurga: ಚಿತ್ರದುರ್ಗ ಬಸ್ ದುರಂತ; ಮೃತರ ಕುಟುಂಬಗಳಿಗೆ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!
ನವದೆಹಲಿ: ಚಿತ್ರದುರ್ಗದ ಹಿರಿಯೂರು ಬಳಿ ಬೆಳ್ಳಂ ಬೆಳಿಗ್ಗೆ ದುರಂತವೊಂದು ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಯಲ್ಲಿ ಭಸ್ಮಗೊಂಡಿದೆ. ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನೂ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಖಾಸಗಿ ಬಸ್ ಅಪಘಾತದಲ್ಲಿ 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 11 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಇನ್ನೂ ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ ಒಂದಷ್ಟು ಪ್ರಯಾಣಿಕರು ಬಸ್‌ನಿಂ ದ ಇಳಿದರೂ ಕೂಡಾ 11 ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications