ಕೊರೊನಾ ಬಗ್ಗೆ ಸುಳ್ಳುಸುದ್ದಿ ಹಬ್ಬಿಸಿದರೆ 1 ವರ್ಷ ಜೈಲು ಶಿಕ್ಷೆ ಗ್ಯಾರಂಟಿ

ನವದೆಹಲಿ, ಏಪ್ರಿಲ್ 15: ಕೊರೊನಾ ಸೋಂಕು ಹರಡದಂತೆ ಎರಡನೇ ಅವಧಿಗೆ 19 ದಿನಗಳ ಲಾಕ್ಡೌನ್ ಸದ್ಯ ಎಲ್ಲೆಡೆ ಜಾರಿಯಲ್ಲಿದೆ. ಮೇ 3 ರತನಕದ ಲಾಕ್ಡೌನ್ ನಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಯಾವ ರೀತಿ ನಡೆದುಕೊಳ್ಳಬೇಕು, ನಾಗರಿಕರು ಹೇಗೆ ವರ್ತಿಸಬೇಕು ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಜೊತೆಗೆ ಕೊರೊನಾವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಫೇಕ್ ನ್ಯೂಸ್ ಹಬ್ಬಿಸುವವರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಒಂದು ವರ್ಷದ ತನಕ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಕೇಂದ್ರ ಗೃಹ ಸಚಿವಾಲಯವು ಏಪ್ರಿಲ್ 15ರಂದು ನೀಡಿದ ಮಾರ್ಗಸೂಚಿಯಂತೆ, ಲಾಕ್‌ಡೌನ್ ಕ್ರಮಗಳಲ್ಲಿ ನಿರ್ದಿಷ್ಟಪಡಿಸಿದಂತೆ, ಸಾಮಾಜಿಕ ದೂರ ಮತ್ತು ಪ್ರತಿಯೊಂದು ಚಟುವಟಿಕೆಗಳಲ್ಲಿ ನೈರ್ಮಲ್ಯ ಅಭ್ಯಾಸಗಳನ್ನು ಖಚಿತಪಡಿಸಿಕೊಳ್ಳಬೇಕು. ನಿಯಮಗಳನ್ನು ಅನುಸರಣೆ ಖಚಿತಪಡಿಸಿಕೊಳ್ಳಲು ಸಂಸ್ಥೆ / ಸ್ಥಾಪನೆಯ ಮುಖ್ಯಸ್ಥರ ಜವಾಬ್ದಾರಿಯಾಗಿರುತ್ತದೆ ಹಾಗೂ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸುತ್ತಾರೆ.

Circulating fake news and making a false claim will land you in jail for 1 year: MHA

ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಯು ಹೊಣೆಗಾರನಾಗಿರುತ್ತಾನೆ. ಆತನ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51 ರಿಂದ 60 ರ ನಿಬಂಧನೆಗಳ ಪ್ರಕಾರ, 2005, ವಿವಿಧ ಸೆಕ್ಷನ್ ಅಡಿಯಲ್ಲಿ ಕಾನೂನು ಕ್ರಮಗಳ ಜೊತೆಗೆ ಐಪಿಸಿ ಸೆಕ್ಷನ್188ಯಡಿಯಲ್ಲಿ ಕ್ರಮ ಜರುಗಿಸಲಾಗುತ್ತದೆ. ಈ ರೀತಿ ಸಾರ್ವಜನಿಕ ಶಾಂತಿ ಕದಡುವ, ಗೊಂದಲ ನಿರ್ಮಾಣ ಮಾಡುವ ಕಾರ್ಯದಲ್ಲಿ ತೊಡಗಿರುವವರಿಗೆ ಕನಿಷ್ಠ 1 ರಿಂದ 2 ವರ್ಷ ಜೈಲುಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆಯ III ರ ಪುಟ 11ರಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+