ಪೌರತ್ವ ತಿದ್ದುಪಡಿ ಮಸೂದೆ ಪಾಸ್; ಯಾರು, ಏನು ಹೇಳಿದರು?

ನವದೆಹಲಿ, ಡಿಸೆಂಬರ್ 11 : ಸುಧೀರ್ಘ ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಲೋಕಸಭೆಯಲ್ಲಿ ಈಗಾಗಲೇ ಮಸೂದೆಗೆ ಒಪ್ಪಿಗೆ ಸಿಕ್ಕಿತ್ತು. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಗೆಲುವು ಸಿಕ್ಕಿದೆ.

ಬುಧವಾರ ರಾತ್ರಿ ಮತದಾನದ ಮೂಲಕ ರಾಜ್ಯಸಭೆಯಲ್ಲಿ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಮಸೂದೆ ಪರವಾಗಿ 125, ವಿರುದ್ಧವಾಗಿ 105 ಮತಗಳು ಚಲಾವಣೆಗೊಂಡವು. ಮಸೂದೆಗೆ ಒಪ್ಪಿಗೆ ಸಿಕ್ಕಿದ್ದರಿಂದ ಪ್ರತಿಪಕ್ಷಗಳಿಗೆ ಹಿನ್ನಡೆ ಉಂಟಾಗಿದೆ.

ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಭೋಜನ ವಿರಾಮವನ್ನೂ ನೀಡದೆ ಕಲಾಪದಲ್ಲಿ ಸುಧೀರ್ಘ ಚರ್ಚೆಯನ್ನು ನಡೆಸಲಾಯಿತು. ಅಮಿತ್ ಶಾ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸುದೀರ್ಘ ಸ್ಪಷ್ಟನೆಯನ್ನು ಸಹ ನೀಡಿದರು.

Citizenship Amendment Bill Passed Who Said What

ಈಶಾನ್ಯ ರಾಜ್ಯಗಳಲ್ಲಿ ಮಸೂದೆ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಸೇನಾ ಪಡೆಗಳನ್ನು ಕೇಂದ್ರ ಸರ್ಕಾರ ಪ್ರತಿಭಟನೆ ನಡೆಯುವ ಸ್ಥಳಗಳಿಗೆ ರವಾನೆ ಮಾಡಿದ್ದು, ಮುನ್ನೆಚ್ಚರಿಕೆಯನ್ನು ಕೈಗೊಳ್ಳಲಾಗಿದೆ. ದೇಶಾದ್ಯಂತ ಮಸೂದೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಸೋನಿಯಾ ಗಾಂಧಿ ಹೇಳಿಕೆ : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದ ಬಳಿಕ ಪ್ರತಿಕ್ರಿಯೆ ನೀಡಿದ್ದು, "ಭಾರತದ ಸಂವಿಧಾನದಲ್ಲಿ ಇಂದು ಕರಾಳ ದಿನವಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ತ್ರಿಪುರ ಮುಖ್ಯಮಂತ್ರಿ ಹೇಳಿಕೆ

ಭಾರತಕ್ಕೆ ಐತಿಹಾಸಿಕ ದಿನ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದು, "ಇಂದು ದೇಶಕ್ಕೆ ಐತಿಹಾಸಿಕವಾದ ದಿನವಾಗಿದೆ. ಮಸೂದೆ ಪರವಾಗಿ ಮತದಾನ ಮಾಡಿದ ಎಲ್ಲಾ ಸಂದಸರಿಗೆ ಧನ್ಯವಾದಗಳು" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+