Bengaluru Second Airport: ಬೆಂಗಳೂರು 2ನೇ ವಿಮಾನ ನಿಲ್ದಾಣ: ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸಚಿವ ಕೆ. ರಾಮಮೋಹನ್ ನಾಯ್ಡು!

Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ರಾಜ್ಯ ಸರ್ಕಾರವು ಮೂರು ಪ್ರದೇಶಗಳ ಹೆಸರನ್ನು ಫೈನಲ್‌ ಮಾಡಿದ್ದು. ಇದನ್ನು ಕೇಂದ್ರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಳುಹಿಸಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಕೇಂದ್ರ ಬಿಜೆಪಿ ಸರ್ಕಾರವೂ ಮೊದಲಿನಿಂದಲೂ ಗುಡ್‌ರೆಸ್ಪಾನ್ಸ್‌ ಕೊಡ್ತಿದೆ. ಕರ್ನಾಟಕ ಸರ್ಕಾರವು ಪ್ರಸ್ತಾವನೆಯನ್ನು ಸಲ್ಲಿಸುವುದಕ್ಕಿಂತ ಮುಂಚೆಯೇ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರವು ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಪ್ರಸ್ತಾವನೆ ಸಲ್ಲಿಸಿದರೆ, ಪ್ರಕ್ರಿಯೆ ಮುಂದುವರಿಸುವುದಾಗಿ ಹೇಳಿತ್ತು. ಇದೀಗ ಹಲವು ವಿಮಾನ ನಿಲ್ದಾಣಗಳ ಅಭಿವೃದ್ಧಿಯ ಬಗ್ಗೆ ಕೇಂದ್ರ ಸಚಿವರು ಮಾತನಾಡಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಕೇಂದ್ರ ಸರ್ಕಾರವು ಯಾವ ರೀತಿ ರಿಯಾಕ್ಟ್‌ ಮಾಡಲಿದೆ ಎನ್ನುವ ಕುತೂಹಲವಿತ್ತು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಒಳ್ಳೆಯ ಸುದ್ದಿಯನ್ನೇ ಕೊಟ್ಟಿದೆ. ಇದೀಗ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಇರುವ ಪ್ರಮುಖ ಸಮಸ್ಯೆ ಎಂದರೆ ವಾಯುದಟ್ಟಣೆ ಆಗದಂತೆ ಎಚ್ಚರಿಕೆ ವಹಿಸುವುದು. ಟ್ರಾಫಿಕ್‌ ಜಾಮ್‌ನಂತೆ ವಿಮಾನಗಳ ಹಾರಾಟದಲ್ಲೂ ನಿರ್ದಿಷ್ಟ ದೂರಲ್ಲಿ ವಿಮಾನಗಳು ಸಂಚರಿಸಬೇಕು ಎನ್ನುವ ನಿಯಮವಿರುತ್ತದೆ. ಇದೇ ಕಾರಣಕ್ಕೆ ತಮಿಳುನಾಡಿಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ಕಷ್ಟವಾಗುತ್ತಿದೆ.

Civil Aviation Minister K Ramamohan Naidu Gave Good News About Bengaluru Second Airport

ಕರ್ನಾಟಕ ಸರ್ಕಾರವು ಈ ವಿಷಯಗಳನ್ನು ಗಮನಿಸಿ, ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೂರದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆಯನ್ನು ಸಲ್ಲಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಹಾಗೂ ವಿವಿಧ ವಿಮಾನ ನಿಲ್ದಾಣಗಳ ನಿರ್ಮಾಣದ ಬಗ್ಗೆ ಬಿಗ್‌ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ.

ದೇಶದಲ್ಲಿ ವಿಮಾನ ನಿಲ್ದಾಣಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ವಾಯುದಟ್ಟಣೆ (ಫ್ಲೈಟ್ ಟ್ರಾಫಿಕ್‌ಜಾಮ್‌) ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಟೆಂಪ್ಲೇಟ್ ಮಾದರಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಕರ್ನಾಟಕದಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾತ್ರವಲ್ಲದೆ ಹಲವು ವಿಮಾನ ನಿಲ್ದಾಣಗಳನ್ನು ಏಕಕಾಲಕ್ಕೆ ನಿರ್ಮಾಣ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ವಿವಿಧ ರೀತಿಯ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗುವ ರೀತಿಯಲ್ಲಿ ಟೆಂಪ್ಲೇಟ್ ಮಾದರಿಯನ್ನು ರಚಿಸಲು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದೇವೆ. ಸರಕು ಸಾಗಾಣಿಕೆ ಹಾಗೂ ತರಬೇತಿ ಸಂಸ್ಥೆಗಳು (FTOಗಳು) ಸೇರಿದಂತೆ ವಿವಿಧ ಮಾದರಿಯ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ಅತ್ಯಂತ ವೇಗವಾಗಿ ವಿಮಾನ ಸೇವೆ ಬೆಳೆಯುತ್ತಿದೆ. ಭಾರತದಲ್ಲಿ ಇದೀಗ ಕಾರ್ಯಚರಣೆಯಲ್ಲಿ 159 ವಿಮಾನ ನಿಲ್ದಾಣಗಳು ಇವೆ. ದೇಶೀಯ ವಿಮಾನಯಾನ ಸಂಸ್ಥೆಗಳಲ್ಲಿ 1,700ಕ್ಕೂ ಹೆಚ್ಚು ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದಿದ್ದಾರೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಹೇಳಿದ್ದೇನು ?

ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರವೂ ಇದೇ ಸಂದರ್ಭದಲ್ಲಿ ಚರ್ಚೆಯಾಗಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವಾಗಿ ರಾಜ್ಯ ಸರ್ಕಾರವು ಮೂರು ಜಾಗಗಳ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು

ಹೆಚ್ಚಿನ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುವ ವಿಷಯದಲ್ಲಿ ಪ್ರಯತ್ನಗಳು ನಡೆದಿವೆ. ಆದರೆ, ಖಾಸಗೀಕರಣವು ಪ್ರತ್ಯೇಕ ವಿಷಯ ಎಂದಿದ್ದಾರೆ.

ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಹಾಗೂ ಕರ್ನಾಟಕದಲ್ಲಿ ಹೆಚ್ಚು ವಿಮಾನ ನಿಲ್ದಾಣಗಳ ನಿರ್ಮಾಣ ಮಾಡುವುದಕ್ಕಾಗಿ ಟೆಂಪ್ಲೇಟ್‌ ಮಾದರಿಯನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+