ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮವಾರ ನ್ಯಾ. ದೀಪಕ್ ಮಿಶ್ರಾರಿಂದ ಲೋಯಾ ಪ್ರಕರಣದ ವಿಚಾರಣೆ

By Sachhidananda Acharya
|
Google Oneindia Kannada News

ನವದೆಹಲಿ, ಜನವರಿ 20: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸೋಮವಾರ ನ್ಯಾಯಾಧೀಶ ಬಿ.ಎಚ್. ಲೋಯಾ ಸಾವಿನ ಪ್ರಕರಣದ ವಿಚಾರಣೆ ನಡೆಸಲಿದೆ.

ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಲೋಯಾ 2014ರ ಡಿಸೆಂಬರ್ 1ರಂದು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣದ ವಿಚಾರಣೆ ಸಂಬಂಧ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನಾಲ್ವರು ಹಿರಿಯ ನ್ಯಾಯಾಧೀಶರ ನಡುವೆ ಕಳೆದ ವಾರ ಅಸಮಧಾನ ಭುಗಿಲೆದ್ದಿತ್ತು.

ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಜತೆ ಸಭೆ ನಡೆಸಿದ ದೀಪಕ್ ಮಿಶ್ರಾನಾಲ್ವರು ಹಿರಿಯ ನ್ಯಾಯಮೂರ್ತಿಗಳ ಜತೆ ಸಭೆ ನಡೆಸಿದ ದೀಪಕ್ ಮಿಶ್ರಾ

ಇವೆಲ್ಲದರ ಮಧ್ಯೆ ಪ್ರಕರಣದಲ್ಲಿ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಎ.ಎಂ. ಖನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಲಿದೆ.

CJI Dipak Misra will hear the case about Judge BH Loya's death on Monday

ನ್ಯಾಯಾಲಯದ ದಾಖಲೆಗಳ ಪ್ರಕಾರ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆಯೇ ಈ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ನ್ಯಾಯಧೀಶ ಲೋಯಾ ಸಾವಿನ ಪ್ರಕರಣದಲ್ಲಿ ಸ್ವತಂತ್ರ ತನಿಖೆಗೆ ಒತ್ತಾಯಿಸಿದ ಇಬ್ಬರು ವ್ಯಕ್ತಿಗಳು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿದ್ದ ದ್ವಿಸದಸ್ಯಪೀಠ ವಿಚಾರಣೆ ನಡೆಸುತ್ತಿತ್ತು.

ಆದರೆ ಕಳೆದ ವಾರ ಬಹಿರಂಗಗೊಂಡ ನ್ಯಾಯಮೂರ್ತಿಗಳ ಅಸಮಧಾನದ ನಂತರ ಪ್ರಕರಣವನ್ನುಮುಖ್ಯ ನ್ಯಾಯಮೂರ್ತಿಗಳಿಗೆ ನ್ಯಾ. ಮಿಶ್ರಾ ವಾಪಸ್ಸು ಕಳುಹಿಸಿದ್ದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಯಾಗಿದ್ದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ 48 ವರ್ಷದ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಬಿ.ಎಚ್ ಲೋಯಾ 2014ರ ಡಿಸೆಂಬರ್ 1ರಂದು ಸಂಸಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು.

ಈ ಸಾವು ಅಸಹಜ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಮತ್ತು ಲೋಯಾ ಅವರಿಗೆ ದೊಡ್ಡ ಮೊತ್ತದ ಲಂಚದ ಆಮಿಷ ಒಡ್ಡಲಾಗಿತ್ತು ಎಂದು ಅವರ ಸಹೋದರಿ ಆರೋಪಿಸಿದ್ದರು.

English summary
According to the Supreme Court case list, Judge BH Loya death case is listed for hearing before the Chief Justice of India Dipak Misra on January 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X