Cjp Protest: ದೆಹಲಿಯ ಜಂತರ್‌ಮಂತರ್‌ನಲ್ಲಿ ಉಗ್ರ ಹೋರಾಟ, 8,000 ಜನ ಭಾಗಿ - ಪಂಜಾಬ್ ರೈತರ ಬೆಂಬಲ; ಲಾರಿಗಳಲ್ಲಿ ಕಲ್ಲು!

Cjp Protest: ದೇಶದಲ್ಲಿ ಈಚೆಗೆ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಉಗ್ರ ಸ್ವರೂಪವನ್ನು ಪಡೆದುಕೊಂಡಿದೆ. ಇಂದಿನಿಂದ ದೆಹಲಿಯಲ್ಲಿ ಭಾರೀ ಪ್ರತಿಭಟನೆ ನಡೆಸುವುದಾಗಿ ಹೇಳಲಾಗಿತ್ತು. ಅಲ್ಲದೆ ಜುಲೈ 20ರ ಸೋಮವಾರದಿಂದ ಮುಂಗಾರು ಸಂಸತ್ ಅಧಿವೇಶನ ನಡೆಯುತ್ತಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಕಾಕ್ರೋಚ್ ಜನತಾ ಪಾರ್ಟಿ ಮುಂದಾಳತ್ವ ವಹಿಸಿಕೊಂಡಿದ್ದರೆ, ವಿದ್ಯಾರ್ಥಿಗಳು, ರೈತರು ಹಾಗೂ ಹಲವು ಸೆಲೆಬ್ರಿಟಿಗಳು ಸಹ ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣದಿಂದ ಸಾವಿರಾರು ಜನ ರೈತರು ಈ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ 8,000ಕ್ಕೂ ಹೆಚ್ಚು ಜನರು ಜಮಾಯಿಸಿದ್ದು, ಸಂಸತ್ ಚಲೋಗೂ ಮುನ್ನ ಅವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

'ಚಲೋ ಸಂಸದ್' ಮೆರವಣಿಗೆಗೆ ಮುನ್ನ ಜಂತರ್ ಮಂತರ್ ಬಳಿ ಕಲ್ಲುಗಳನ್ನು ಹೊತ್ತೊಯ್ಯುವ ಟ್ರಕ್ ನಿಲ್ಲಿಸಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿಯು ಆರೋಪಿಸಿದೆ. ಜಂತರ್ ಮಂತರ್ ಪ್ರತಿಭಟನಾ ಸ್ಥಳದ ಬಳಿ ಕಲ್ಲುಗಳನ್ನು ತುಂಬಿದ ಟ್ರಕ್ ನಿಲ್ಲಿಸಲಾಗಿದೆ ಎಂದು ಸಿಜೆಪಿ ಸೋಮವಾರ ಆರೋಪಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳು ಮತ್ತು ಛಾಯಾಚಿತ್ರಗಳನ್ನು ಹಂಚಿಕೊಂಡಿರುವ ಪಕ್ಷವು, ವಾಹನವನ್ನು ಇಲ್ಲಿ ನಿಲ್ಲಿಸಿರುವುದು ಅನುಮಾನಾಸ್ಪದವಾಗಿದೆ ಎಂದು ಹೇಳಿಕೊಂಡಿದೆ. ಅಲ್ಲದೆ ಅಧಿಕಾರಿಗಳು ಈ ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

Cjp Protest

ರಾಷ್ಟ್ರ ರಾಜಧಾನಿಯಾದ್ಯಂತ ಬಿಗಿ ಭದ್ರತೆ, ಬಿಎನ್‌ಎಸ್‌ಎಸ್‌ನ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವಾಗ ಮತ್ತು ದೆಹಲಿ ಪೊಲೀಸರು ಮಳೆಗಾಲದ ಅಧಿವೇಶನಕ್ಕೂ ಮುನ್ನ ಜಂತರ್ ಮಂತರ್ ಮತ್ತು ಸಂಸತ್ತಿನ ಸುತ್ತಲೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುತ್ತಿರುವಾಗ ಈ ಆರೋಪ ಬಂದಿದೆ.
ಕಾಕ್ರೋಚ್ ಜನತಾ ಪಾರ್ಟಿಯು ಇಂದು ಸಂಸತ್ ಚಲೋಗೆ ಕರೆ ನೀಡಿದೆ. ಆದರೆ, ಉದ್ದೇಶಿತ ಮೆರವಣಿಗೆಗೆ ಯಾವುದೇ ಅನುಮತಿ ಕೋರಿಲ್ಲ ಅಥವಾ ನೀಡಲಾಗಿಲ್ಲ ಎಂದು ಪೊಲೀಸರು ಈ ಹಿಂದೆ ದೆಹಲಿ ಪೊಲೀಸರು ಹೇಳಿದ್ದರು.

ರೈತರಿಂದ ಬೆಂಬಲ ಹೆಚ್ಚಾಯ್ತು ಪ್ರತಿಭಟನೆಯ ಕಾವು

ಇನ್ನು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಇದೀಗ ರೈತರಿಂದಲೂ ಭಾರೀ ಬೆಂಬಲ ವ್ಯಕ್ತವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೀಟ್ ಪರೀಕ್ಷೆ ಬರೆದ 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆತ್ಮಹ*ಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯು ಇದೀಗ ಉಗ್ರ ಸ್ವರೂಪ ಪಡೆದುಕೊಂಡಿದೆ. ಪಂಜಾಬ್‌ನ ರೈತರು ಸಹ ಈ ಪ್ರತಿಭಟನೆಗೆ ಕೈ ಜೋಡಿಸುವ ಮೂಲಕ ಪ್ರತಿಭಟನೆಯ ಕಾವು ಇನ್ನಷ್ಟು ಹೆಚ್ಚಾಗಿದೆ.

ದೆಹಲಿ ಪೊಲೀಸರಿಂದ ಹೊಡೆಸಿಕೊಳ್ಳಲು ಹೋಗುತ್ತಿದ್ದೇನೆ: ಟ್ರೆಂಡ್

ಸೋಶಿಯಲ್ ಮೀಡಿಯಾ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಯುವಕರು ಹಾಗೂ ಜೆನ್‌ಜಿಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಿರುವುದು ಹೆಚ್ಚಾಗಿದೆ. ಜೆನ್‌ಜಿಗಳು ಸೋಶಿಯಲ್ ಮೀಡಿಯಾದಲ್ಲಿ ದೆಹಲಿ ಪೊಲೀಸರಿಂದ ಹೊಡೆಸಿಕೊಳ್ಳಲು ಹೋಗುತ್ತಿದ್ದೇನೆ ಎಂದು ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಈ ಮೂಲಕ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಯುವಕರು ಹೇಳಿದ್ದಾರೆ. ಈ ವಿಷಯವು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+