ಕೋಲ್ಕತ್ತಾದಲ್ಲಿ ರೋಡ್ ಶೋ ವೇಳೆ ಹಿಂಸಾಚಾರ : ಬಿಜೆಪಿ ದೂರು

ನವದೆಹಲಿ, ಮೇ 14 : ಕೋಲ್ಕತ್ತಾದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ಹಿಂಸಾಚಾರದ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಾಯಕರ ನಿಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ಹಿಂಸಾಚಾರದ ಕುರಿತು ದೂರು ನೀಡಿದೆ. ಸೂಕ್ತ ಕ್ರಮಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಂಗಳವಾರ ಅಮಿತ್ ಶಾ ರೋಡ್ ಶೋ ನಡೆಸುವಾಗ ಶ್ರೀರಾಮ, ಹನುಮ, ಸೀತೆಯ ವೇಷಧಾರಿಗಳಾಗಿದ್ದ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿ ಸಾಗುತ್ತಿದ್ದರು. ಆಗ ದುಷ್ಕರ್ಮಿಗಳು ಕಡ್ಡಿಗಳನ್ನು ಎಸೆದರು. ಇದರಿಂದಾಗಿ ಕಾರ್ಯಕರ್ತರ ನಡುವೆ ಕಲಹ ಆರಂಭವಾಯಿತು.

Clash in Amit Shah roadshow Kolkata : BJP complaint Election Commission

ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಆದರೆ, ಕಲ್ಲು ತೂರಾಟ ನಡೆಸಲಾಯಿತು, ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಗೋ ಬ್ಯಾಕ್ ಅಮಿತ್ ಶಾ ಎಂಬ ಪೋಸ್ಟರ್ ಹಿಡಿದು ಕೆಲವು ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು.

ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಿಜೆಪಿ ಹಿಂಸಾಚಾರ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ. ಕೇಂದ್ರ ರಕ್ಷಣಾ ಪಡೆಗಳನ್ನು ರಾಜ್ಯದಲ್ಲಿ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+